


ಬೆಂಗಳೂರು ಜೂ.6 NEWS DESK : ರಾಜ್ಯದಲ್ಲಿರುವ ತೃತೀಯ ಲಿಂಗಿಗಳ ಸಮಗ್ರ ಸಮೀಕ್ಷೆ ಆಗಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ತ್ರಿತಿಯಲಿಂಗಿಗಳ ಪ್ರತಿನಿಧಿ ಮಲ್ಲಿ ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು, ತಮ್ಮ ಆಪ್ತ ಕಾರ್ಯದರ್ಶಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿರವರೊಂದಿಗೆ ಮಾತನಾಡಿ, ಒಂದು ವಾರದೊಳಗೆ ಸಮೀಕ್ಷೆಗೆ ಚಾಲನೆ ನೀಡುವುದಾಗಿ ಭರವಸೆ ನೀಡಿದರು. ಈ ಸಂದರ್ಭ ವಕೀಲರಾದ ಲಕ್ಷ್ಯ ಕಾಳಪ್ಪ ಉಪಸ್ಥಿತರಿದ್ದರು.










