


ಮಡಿಕೇರಿ ಜೂ.6 NEWS DESK : ವಿರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜಿನ 2025-2026ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ನಡೆಯಿತು. ಪ್ರಾಂಶುಪಾಲ ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲೆ ಎನ್.ಎಂ.ನಾಣಯ್ಯ ಮಾತನಾಡಿ, ಕಾಲೇಜಿನ ಕಾರ್ಯ ಚಟುವಟಿಕೆಗಳು ಹಾಗೂ ಶೈಕ್ಷಣಿಕ ಚಟುವಟಿಗಳ ಕುರಿತ ಮಾಹಿತಿ ನೀಡಿದರು. ಹದಿ ಹರೆಯದಲ್ಲಿ ದುಶ್ಚಟಗಳಿಗೆ ಬಲಿಯಾಗದಂತೆ ಸಲಹೆ ನೀಡಿದ ಅವರು, ಜೀವನದಲ್ಲಿ ಶಿಸ್ತನ್ನು ಮೈಗೂಡಿಸಿಕೊಂಡು ಉತ್ತಮ ಸಾಧನೆ ಮಾಡುವ ಮೂಲಕ ಕಾಲೇಜಿಗೆ ಹಾಗೂ ಹೆತ್ತವರಿಗೆ ಉತ್ತಮ ಕೀರ್ತಿ ತರಬೇಕೆಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳು, ಕಾಲೇಜಿನ ಉಪನ್ಯಾಸಕ ವೃಂದದವರು ಹಾಜರಿದ್ದರು. ವಿದ್ಯಾರ್ಥಿಗಳಾದ ಭೂಮಿಕಾ ಮತ್ತು ತಂಡದವರು ಪ್ರಾರ್ಥಿಸಿದರು, ಕನ್ನಡ ಉಪನ್ಯಾಸಕಿ ಎಂ.ಪಿ.ದಮಯಂತಿ ಸ್ವಾಗತಿಸಿದರು, ಇತಿಹಾಸ ಉಪನ್ಯಾಸಕಿ ಸಿ.ಪಿ.ಅನುಪಮ ವಂದಿಸಿದರು. ವಿದ್ಯಾರ್ಥಿಗಳಿಗೆ ಸಿಹಿ ವಿತರಿಸಿ ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.










