
ಸೋಮವಾರಪೇಟೆ ಜೂ.7 NEWS DESK : ತಾಲ್ಲೂಕಿನ ಗರಗಂದೂರು ಡಿ ಚೆನ್ನಮ್ಮ ಎಜುಕೇಶನ್ ಸೊಸೈಟಿ ವತಿಯಿಂದ ಪ್ರೀ ನರ್ಸರಿ ಮತ್ತು ಎಲ್ಕೆಜಿ, ಯುಕೆಜಿ ತರಗತಿಗಳನ್ನು ಕಾಫಿ ಬೆಳೆಗಾರರಾದ ಮಚ್ಚಂಡ ಮಲ್ಲಿಕಾ ಬೋಪಣ್ಣ ಉದ್ಘಾಟಿಸಿದರು. ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಕರ್ನಲ್ ಬಿಜಿವಿ ಕುಮಾರ್ ಮಾತನಾಡಿ, ಇಂದಿನ ಜೀವನಕ್ಕೆ ಆಂಗ್ಲ ಮಾಧ್ಯಮದ ಶಿಕ್ಷಣದ ಅಗತ್ಯತೆ ಹೆಚ್ಚಿದೆ. ಈ ನಿಟ್ಟಿನಲ್ಲಿ ಪೂರ್ವ ಪ್ರಾಥಮಿಕ ಎಲ್ಕೆಜಿ ಹಾಗೂ ಯು.ಕೆ.ಜಿ ತರಗತಿಗಳನ್ನು ಪ್ರಾರಂಭಿಸಿದ್ದೇವೆ ಎಂದು ತಿಳಿಸಿದರು. ಮುಖ್ಯ ಅತಿಥಿಗಳಾಗಿ ನಿವೃತ್ತ ಡಿಸಿಪಿ ಬಿ.ಎ.ಪೂಣಚ್ಚ, ಜ್ಯೋತಿ ಬೆಳಗುವುದರ ಮೂಲಕ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಆಧುನಿಕ ಶಿಕ್ಷಣದ ಅವಶ್ಯಕತೆ ಇದೆ. ಜಗತ್ತಿನ ಸಂಪರ್ಕ ಭಾಷೆಯಾದ ಇಂಗ್ಲಿಷ್ ಭಾಷೆಯ ಮಹತ್ವ ಹೆಚ್ಚಾಗಿದೆ. ಮಾದಾಪುರದ ಸುತ್ತಲಿನ ಗ್ರಾಮೀಣ ಮಕ್ಕಳಿಗೆ ಅನುಕೂಲವಾಗುವಂತೆ ಆಂಗ್ಲ ಮಾಧ್ಯಮದ ಶಾಲೆಯನ್ನು ತೆರೆದಿರುವುದು ಉತ್ತಮ ಕಾರ್ಯ ಎಂದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಸಿ.ಜಿ.ಮಂದಪ್ಪ, ಉಪನ್ಯಾಸಕ ರಾಜ ಸುಂದರಂ, ಪ್ರೌಢ ಶಾಲಾ ಮುಖ್ಯ ಶಿಕ್ಷಕಿ ರೀಟಾ, ಆಂಗ್ಲ ಮಾಧ್ಯಮ ಮುಖ್ಯ ಶಿಕ್ಷಕ ತೆಕ್ಲ ಡಿಸೋಜ ಇದ್ದರು.










