
ಮಡಿಕೇರಿ ಜೂ.7 NEWS DESK : ಗೋಣಿಕೊಪ್ಪ ಮೈಸೂರು ರಸ್ತೆಯಲ್ಲಿ ನೂತನವಾಗಿ ಆರಂಭಗೊಂಡ ಎಂ.ಆರ್.ಪಿ.ಎಲ್ ಪೆಟ್ರೋಲ್ ಬಂಕ್ ಅನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ನಂತರ ಮಾತನಾಡಿದ ಶಾಸಕರು, ಈ ಹಿಂದಿನಿಂದಲೂ ಇವರದೇ ಒಡೆತನದ ಇನ್ನೊಂದು ಪೆಟ್ರೋಲ್ ಬಂಕ್, ಈಗಾಗಲೇ ವಾಹನ ಸವಾರರಿಗೆ ಸೇವೆ ಒದಗಿಸುವಲ್ಲಿ ಉತ್ತಮ ಹೆಸರನ್ನು ಮಾಡಿದ್ದು, ಈ ಕ್ಷೇತ್ರದಲ್ಲಿ ತಮ್ಮ ಉದ್ಯಮವನ್ನು ವಿಸ್ತರಿಸಿ ಜನರಿಗೆ ಮತ್ತಷ್ಟು ಸೇವೆ ನೀಡುವಂತಾಗಲಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಧರ್ಮಜ ಉತ್ತಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ್ ಮಾಚಯ್ಯ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್, ಗೋಣಿಕೊಪ್ಪ ಪಂಚಾಯಿತಿ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ, ಪೆಟ್ರೋಲ್ ಬಂಕ್ ಮಾಲೀಕರ ಕುಟುಂಬಸ್ಥರು ಹಾಗೂ ಪ್ರಮುಖರು ಉಪಸಿತರಿದ್ದರು.










