
ಮಡಿಕೇರಿ ಜೂ.7 NEWS DESK : ನಗರದ ಕೊಡಗು ವಿದ್ಯಾಲಯದಲ್ಲಿ ವಿದ್ಯಾರಂಭ ಕಾರ್ಯಕ್ರಮ ನಡೆಯಿತು. ನೂತನ ಶೈಕ್ಷಣಿಕ ವರ್ಷಕ್ಕೆ ಶಾಲೆಯ ಪ್ರಾಂಶುಪಾಲರಾದ ಕೆ.ಎಸ್. ಸುಮಿತ್ರಾ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ವಿದ್ಯಾರ್ಥಿಗಳು ಅತ್ಯಧಿಕ ಮೊಬೈಲ್ ಫೋನ್ ಬಳಕೆ ಮಾಡದಂತೆ ಎಚ್ಚರ ವಹಿಸಿ ಎಂದು ತಿಳಿಸಿದರು. ಮೊಬೈಲ್ ಮಕ್ಕಳ ಶಾರೀರಿಕ ಹಾಗೂ ಮಾನಸಿಕ ಆರೋಗ್ಯಕ್ಕೂ ತೊಂದರೆ ಉಂಟು ಮಾಡುತ್ತದೆ. ವಿದ್ಯಾರ್ಥಿಗಳು ಪುಸ್ತಕಪಠನ, ಸೃಜನಾತ್ಮಕ ಚಟುವಟಿಕೆಗಳಲ್ಲಿ ತೊಡಗಬೇಕು ಎಂದು ಕಿವಿಮಾತು ಹೇಳಿದರು. ಶಾಲಾ ಶೈಕ್ಷಣಿಕ ಸಂಯೋಜಕಿ ಭಾರತಿ ಮಕ್ಕಳಿಗೆ ಅಕ್ಷರಭ್ಯಾಸ ಮಾಡಿದರು. ಕಾರ್ಯಕ್ರಮದಲ್ಲಿ ಪೋಷಕವೃಂದ, ಶಿಕ್ಷಕ ವೃಂದದವರು ಭಾಗವಹಿಸಿದ್ದರು. ಶಿಕ್ಷಕಿ ಬಿ.ಎಂ.ಶೃತಿ ನಿರೂಪಿಸಿದರು. ನಳಿನಿ ಕಿರಣ್ ವಂದಿಸಿದರು. ಕೊಡಗು ವಿದ್ಯಾಲಯ ಶಿಕ್ಷಕ ವೃಂದದವರು ಭಜನಾ ಕಾರ್ಯಕ್ರಮ ನಡೆಸಿಕೊಟ್ಟರು.









