Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಮಾ.26 ಮತ್ತು 27 ರಂದು 37ನೇ ವರ್ಷದ ಶ್ರೀ ರಾಮೋತ್ಸವ ಹಾಗೂ ದ್ವಿತೀಯ ವರ್ಷದ ಪುನರ್ ಪ್ರತಿಷ್ಠಾಪನಾ ಮಹೋತ್ಸವ*
  • *ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 
  • *ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*
  • *ಪೊನ್ನಂಪೇಟೆ ಮತ್ತು ಶ್ರೀಮಂಗಲ : ಮಾ.26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮಾ.27 ರಂದು ಕೂಡಿಗೆಯಲ್ಲಿ ವೃತ್ತಿ ಶಿಕ್ಷಣ ಪ್ರದರ್ಶನ, ವೃತ್ತಿ ಮಾರ್ಗದರ್ಶನ*
  • *ಏ.7 ರಿಂದ 30 ರವರೆಗೆ ಬೇಸಿಗೆ ತರಬೇತಿ ಶಿಬಿರ*
  • *ಮಡಿಕೇರಿಯಲ್ಲಿ ದೇವರ ದಾಸಿಮಯ್ಯ ಜಯಂತಿ :  ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿ : ಟಿ.ಕೆ.ಪಾಂಡುರಂಗ*
  • *ಕೊಡಗು ಪ್ರೆಸ್ ಕ್ಲಬ್ ಕ್ರಿಕೆಟ್ ಪ್ರೀಮಿಯರ್ ಲೀಗ್-4 : ಮೀಡಿಯಾ ಚಾಲೆಂಜರ್ಸ್ ತಂಡ ಚಾಂಪಿಯನ್*
  • *ಕೆ.ಜಿ.ಬೋಪಯ್ಯರಿಂದ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ : ಕಾಂಗ್ರೆಸ್ಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ : ಪರಮೇಶ್ವರ್ ಅಸಮಾಧಾನ*
  • *ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ ತೆರೆ ಮಹೋತ್ಸವ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ಪತ್ರಕತ೯ರ ಸಂಘದಿಂದ ಬೂಕರ್ ಪ್ರಶಸ್ತಿ ವಿಜೇತ ಲೇಖಕಿಯೊಂದಿಗೆ ಸಂವಾದ : ಪದಗಳ ತಜು೯ಮೆಗಿಂತ ಭಾವನೆಗಳನ್ನು ಬಿಂಬಿಸುವ ಭಾವಾನುವಾದಕ್ಕೇ ಮಹತ್ವ : ದೀಪಾಭಾಸ್ತಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ಪತ್ರಕತ೯ರ ಸಂಘದಿಂದ ಬೂಕರ್ ಪ್ರಶಸ್ತಿ ವಿಜೇತ ಲೇಖಕಿಯೊಂದಿಗೆ ಸಂವಾದ : ಪದಗಳ ತಜು೯ಮೆಗಿಂತ ಭಾವನೆಗಳನ್ನು ಬಿಂಬಿಸುವ ಭಾವಾನುವಾದಕ್ಕೇ ಮಹತ್ವ : ದೀಪಾಭಾಸ್ತಿ*

ಜೂನ್ 9, 20254 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.9 NEWS DESK : ಪದಗಳ ತಜು೯ಮೆಗಿಂತ ಭಾವನೆಗಳನ್ನು ದಾಖಲಿಸುವ ಭಾವಾನುವಾದ ಪ್ರಕಾರವು, ಅನುವಾದ ಸಾಹಿತ್ಯದಲ್ಲಿ ಮಹತ್ವದ್ದಾಗಿರುತ್ತದೆ ಎಂದು ಪ್ರತಿಷ್ಟಿತ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ಪಡೆದ ಮಡಿಕೇರಿಯ ಲೇಖಕಿ ದೀಪಾಭಾಸ್ತಿ ಅಭಿಪ್ರಾಯಪಟ್ಟಿದ್ದಾರೆ. ಕೊಡಗು ಪತ್ರಕತ೯ರ ಸಂಘದ ವತಿಯಿಂದ ನಗರದ ಲಾಲಿ ಪೆಟಲ್ ಸಭಾಂಗಣದಲ್ಲಿ ಆಯೋಜಿತ ಪತ್ರಕತೆ೯ ದೀಪಾಭಾಸ್ತಿಗೆ ಅಭಿನಂದನಾ ಸಮಾರಂಭ ಮತ್ತು ಸಂವಾದ ಕಾಯ೯ಕ್ರಮದಲ್ಲಿ ಪಾಲ್ಗೊಂಡು ದೀಪಾಭಾಸ್ತಿ ಮಾತನಾಡಿದರು. ಬಾನುಮುಷ್ತಾಕ್ ಅವರ ಎದೆಯ ಹಣತೆ ಕೃತಿ ಸೇರಿದಂತೆ 6 ಕಥಾಸಂಕಲನಗಳಲ್ಲಿನ 12 ಕಥೆಗಳನ್ನು ಆಯ್ಕೆ ಮಾಡಿ ಇಂಗ್ಲೀಷ್ ನಲ್ಲಿ ಬರೆದ ಹಾಟ್೯ ಲ್ಯಾಂಪ್ ಕೖತಿ ಸಂಬಂಧಿತ ಮಾಹಿತಿ ನೀಡಿದ ದೀಪಾಭಾಸ್ತಿ, ಕನ್ನಡದಿಂದ ಇಂಗ್ಲೀಷ್ ಗೆ ಅನುವಾದ ಮಾಡುವಾಗ ಖಂಡಿತವಾಗಿಯೂ ಪದಗಳನ್ನು ತಜು೯ಮೆ ಮಾಡಬಾರದು. ಇದರ ಬದಲಿಗೆ ಮೂಲಕೃತಿಯಲ್ಲಿನ ಪದಗಳ ಭಾವವನ್ನು ಅಥೈ೯ಸಿಕೊಂಡು ತನ್ನದೇ ಶೈಲಿಯಲ್ಲಿ ಭಾವಾನುವಾದ ಮಾಡಿದರಷ್ಟೇ ಅನುವಾದ ಸಾಹಿತ್ಯಕ್ಕೆ ಗಟ್ಟಿತನ ದೊರಕುತ್ತದೆ ಎಂದು ಅಭಿಪ್ರಾಯಪಟ್ಟರು. ಪಂಪ, ಕುವೆಂಪು ಸೇರಿದಂತೆ ಕನ್ನಡದ ಅನೇಕ ಸಾಹಿತಿಗಳ ಅತ್ಯಂತ ಶ್ರೇಷ್ಟ ಕೖತಿಗಳು ಇನ್ನಾದರೂ ಇಂಗ್ಲೀಷ್ ಗೆ ಅನುವಾದಗೊಂಡು ಜಾಗತಿಕವಾಗಿ ಓದುಗರನ್ನು ತಲುಪಬೇಕಾದ ಅಗತ್ಯವಿದೆ, 1,500 ವಷ೯ಗಳ ಇತಿಹಾಸವಿರುವ ಕನ್ನಡದ ಕೖತಿಗಳು ವಿಶ್ವವ್ಯಾಪಿ ಕನ್ನಡ ನೆಲದ ಸಾಹಿತ್ಯ ಕಂಪು ಬೀರಬೇಕಾಗಿದೆ ಎಂದೂ ಅವರು ಹೇಳಿದರು. ಕನ್ನಡ ಸಾಹಿತ್ಯದ ಶ್ರೀಮಂತಿಕೆಯನ್ನು ಮತ್ತಷ್ಟು ಹೆಚ್ಚಿಸಲು ಇತರ ಭಾಷೆಗಳ ಶ್ರೇಷ್ಟ ಕೃತಿಗಳು ಕನ್ನಡಕ್ಕೆ ಅನುವಾದವಾಗಬೇಕಾದ ಅಗತ್ಯತೆಯಿದೆ. ಪಕ್ಕದ ಕೇರಳದಲ್ಲಿನ ಮಲಯಾಳದಲ್ಲಿ ಅನುವಾದಕ್ಕೆ ಪ್ರಾಧಾನ್ಯತೆ ಇದೆ ಎಂದೂ ದೀಪಾ ಬಾಸ್ತಿ ಅಭಿಪ್ರಾಯಪಟ್ಟರು. ಡಾ. ಶಿವರಾಮ ಕಾರಂತರ ಅದೇ ಊರು – ಅದೇ ಮರ ಕೖತಿ ಮತ್ತು ಕೊಡಗಿನ ಗೌರಮ್ಮ ಅವರ ಕಥೆಗಳನ್ನು ಇಂದ್ಲೀಷ್ ಗೆ ಅನುವಾದಿಸಿ ಅದು ಖ್ಯಾತಿ ಪಡೆಯುತ್ತಿದ್ದ ಸಂದಭ೯ವೇ ಭಾನುಮುಷ್ತಾಕ್ ತನ್ನ ಸ್ನೇಹಿತೆಯ ಮೂಲಕ ನನ್ನನ್ನು ಸಂಪಕಿ೯ಸಿ ತನ್ನ ಕಥೆಗಳನ್ನು ಇಂಗ್ಲೀಷ್ ಗೆ ಅನುವಾದಿಸುವಂತೆ ಕೋರಿದ್ದರು. ಹೀಗಾಗಿಯೇ ಅವರ ಎಲ್ಲಾ ಕಥಾಸಂಕಲನ ಓದಿ ತನಗೆ ಇಷ್ಟವಾದ 12 ಕಥೆಗಳನ್ನು ಆಯ್ದೆಕೊಂಡು ಹಾಟ್೯ ಲ್ಯಾಂಪ್ ಕೖತಿಯಾಗಿಸಿದೆ ಎಂದು ದೀಪಾಭಾಸ್ತಿ ಹೇಳಿದರು. ಅನುವಾದಕಳಾಗಿ ತನ್ನ ಮನಸ್ಸಿಗೆ ಇಷ್ಟವಾದ ಕಥೆಗಳನ್ನು ಮಾತ್ರ ಆಯ್ದುಕೊಂಡಿದ್ದೆ ಹಲವು ಕಥೆಗಳು ಸುಂದವಾಗಿದ್ದರೂ ಇಂಗ್ಲೀಷ್ ಓದುಗನಿಗೆ ಜಾನಪದ ಘಟನಾವಳಿಗಳ ಕಥಾ ಹಂದರವನ್ನು ತಲುಪಿಸುವುದು ಕಷ್ಟ ಎಂದನ್ನಿಸಿದ ಕಾರಣದಿಂದ ಅಂಥ ಕಥೆಗಳನ್ನು ಅನುವಾದದಿಂದ ಕೈಬಿಟ್ಟಿದ್ದೆ ಆ ಸಂದಭ೯ ಮಾರುಕಟ್ಟೆಗೆ ಇಂಥ ಕಥೆಗಳು ಸಲ್ಲುತ್ತವೆಯೇ ಎಂದು ಯೋಚಿಸುವ ಗೊಡವೆಗೆ ಹೋಗಲಿಲ್ಲ ಎಂದೂ ದೀಪಾ ಭಾಸ್ತಿ ಹೇಳಿದರು. ಭಾನುಮುಷ್ತಾಕ್ ಅವರ ಕಥೆಗಳಲ್ಲಿ ಹೆಚ್ಚಾಗಿ ಮುಸ್ಲಿಮ್ ಸಮುದಾಯದ ಸಂಸ್ಕೖತಿ, ಆಚಾರಗಳ ಉಲ್ಲೇಖ ಇದ್ದುದರಿಂದಾಗಿ ಆ ಬಗ್ಗೆ ಕೂಲಂಕುಶವಾಗಿ ಅಧ್ಯಯನ ಮಾಡಿಯೇ ಹಾಟ್೯ ಲ್ಯಾಂಪ್ ಕೃತಿಯಲ್ಲಿ ಮೂಲ ಕಥೆಗಳಲ್ಲಿನ ಸಂಸ್ಕೖತಿ, ಆಚಾರ ವಿಚಾರಕ್ಕೆ ಧಕ್ಕೆಯಾಗದಂತೆ ಅನುವಾದ ಮಾಡಬೇಕಾದ ಸವಾಲು ತನಗಿತ್ತು ಎಂದೂ ಅವರು ಹೇಳಿದರು.  ಬೂಕರ್ ಪ್ರಶಸ್ತಿಯ ಅಂತಿಮ ಹಂತದಲ್ಲಿ ಇಟಾಲಿಯನ್, ಡ್ಯಾನಿಷ್, ಫ್ರೆಂಚ್ ಭಾಷೆಗಳ ಕೖತಿಗಳೂ ಇದ್ದವು. ವಿಶ್ವದ ಪ್ರಸಿದ್ದ ಅನುವಾದಕರಾದ ಸೋಫಿ ಹಗ್ಗೀಸ್ ಅವರ ಕೖತಿಯೂ ಅಲ್ಲಿತ್ತು. ಹೀಗಿದ್ದರೂ ತೀಪು೯ಗಾರರು ಸರಳ , ಮನಸ್ಸಿಗೆ ಮುಟ್ಟುವ ಭಾಷಾ ಮತ್ತು ಭಾವಾನುವಾದ ಮೆಚ್ಚಿಕೊಂಡು ಹಾಟ್೯ ಲ್ಯಾಂಪ್ ನ್ನು ಪ್ರಶಸ್ತಿಗೆ ಆಯ್ಕೆ ಮಾಡಿದರು ಎಂದೂ ದೀಪಾ ಭಾಸ್ತಿ ಹೇಳಿದರು. ಚಿತ್ರರಂಗದಲ್ಲಿ ಆಸ್ಕರ್ ನಂತೆಯೇ ಸಾಹಿತ್ಯಲೋಕದಲ್ಲಿ ಬೂಕರ್ ಪ್ರಶತಿಗೆ ಮಹತ್ವವಿದೆ ಎಂದು ಹೇಳಿದ ದೀಪಾಭಾಸ್ತಿ, ಬೂಕರ್ ಪ್ರಶಸ್ತಿ ಲಭಿಸಿದ ಬಳಿಕ ಅನೇಕರು ತಮ್ಮ ಕೖತಿಗಳ ಅನುದಾದಕ್ಕಾಗಿ ಸಂಪಕ೯ ಮಾಡುತ್ತಿದ್ದಾರೆ. ಆದರೆ ಇನ್ನೊಂದು ವಷ೯ ಹಾಟ್೯ ಲ್ಯಾಂಪ್ ಕೖತಿಯ ಪ್ರಚಾರಕ್ಕಾಗಿ ಭಾರತದ ವಿವಿಧೆಡೆ ಸೇರಿದಂತೆ ಜಗತ್ತಿನ ಹಲವಾರು ಕಡೆ ಸಾಹಿತ್ಯ ಉತ್ಸವಗಳಿಗೆ ತೆರಳಬೇಕಾಗಿದೆ. ಯಾವುದೇ ಕೖತಿ ರಚನೆಗೂ ಸಮಯದ ಕೊರತೆಯದೆ ಭಾವಾನುವಾದಕ್ಕೆ ಕನಿಷ್ಟ 2-3 ವಷ೯ಗಳಾದರೂ ಸಮಯಾವಕಾಶ ಅಗತ್ಯವಾಗಿದೆ ಎಂದು ದೀಪಾ ಹೇಳಿದರು.  ಹೆಗ್ಗೋಡು ಗ್ರಾಮದ ಸಮುದ್ಯತಾ ವೆಂಕಟರಾಮು ಅವರು ರಚಿಸಿರುವ ಇದೇ ಅಂದರೆ ಇದೆ, ಇಲ್ಲ ಎಂದರೆ ಇಲ್ಲ ಕೖತಿಯ ಇಂಗ್ಲೀಷ್ ಅನುದಾದ ಸಾಗಿದ್ದು, ಇದು ಕೂಡ ಬಹಳ ಸೊಗಸಾದ ಕೖತಿಯಾಗಲಿದೆ ಎಂದು ಹೇಳಿದ ದೀಪಾ, ಅನುವಾದ ಸಾಹಿತ್ಯ ತಾನು ಮೆಚ್ಚಿಕೊಂಡು ಬರೆದ್ದದ್ದಲ್ಲ. ಸ್ವಂತ ಕೖತಿಯ ರಚನೆ ಕಾಯ೯ವೂ ಬಾಕಿಯಿದೆ. ಪ್ರಬಂಧ, ಸಣ್ಣ ಕಥೆಗಳು ತನ್ನ ಮೆಚ್ಚಿನ ಸಾಹಿತ್ಯವಾಗಿದೆ ಎಂದೂ ಅವರು ಹೇಳಿದರು. ಆಧುನಿಕ ತಂತ್ರಜ್ಞಾನದ ಮಾಧ್ಯಮಗಳಿರುವ ಈ ಕಾಲದಲ್ಲಿ ಖಂಡಿತವಾಗಿಯೂ ವಿಶ್ವವ್ಯಾಪಿ ಓದುಗರ ಸಂಖ್ಯೆ ಇಳಿಮುಖವಾಗಿಲ್ಲ. ಬದಲಿಗೆ ಜ್ಞಾನ ಪಡೆಯುವ ನಿಟ್ಟಿನಲ್ಲಿ ಉತ್ತಮ ಕೖತಿಗಳನ್ನು ಓದುವವರ ಸಂಖ್ಯೆ ಹೆಚ್ಚಾಗುತ್ತಲೇ ಇರುವುದು ಸಾಹಿತ್ಯ ಲೋಕಕ್ಕಿರುವ ಅತೀ ದೊಡ್ಡ ಭರವಸೆಯಾಗಿದೆ ಎಂದು ಅಭಿಪ್ರಾಯಪಟ್ಟ ದೀಪಾಭಾಸ್ತಿ, ಮೊದಲಿನ ಕಾಲದಲ್ಲಿ ಅನುವಾದಕರಿಗೆ ಅಷ್ಟೋನು ಮಹತ್ವ ಇರುತ್ತಿರಲಿಲ್ಲ. ಆದರೆ, ಬದಲಾದ ಸಾಹಿತ್ಯ ಲೋಕದಲ್ಲಿ ಮೂಲಲೇಖಕರಷ್ಟೇ ಅನುವಾದಕರೂ ಪ್ರಾಶಸ್ತ್ಯ ಪಡೆಯುತ್ತಾರೆ. ಈ ಕಾರಣದಿಂದಾಗಿಯೇ ಬೂಕರ್ ಪ್ರಶಸ್ತಿಯನ್ನು ಅನುದಾಕರಿಗಾಗಿಯೇ ಮೀಸಲಿಡಲಾಗಿದೆ ಎಂದು ಹೆಮ್ಮೆಯಿಂದ ಹೇಳಿದರು. ಬೂಕರ್ ಪ್ರಶಸ್ತಿ ದೊರಕುವ ನಿರೀಕ್ಷೆ ಖಂಡಿತಾ ಇರಲಿಲ್ಲ. ಪ್ರಕಾಶಕರ ಆಹ್ವಾನದ ಮೇರೆಗೆ ಲಂಡನ್ ನಲ್ಲಿ ಆಯೋಜಿತ ಪ್ರಶಸ್ತಿ ವಿತರಣಾ ಸಮಾರಂಭಕ್ಕೆ ತೆರಳಿದ್ದೆ. ಪ್ರಶಸ್ತಿ ಘೋಷಣೆಯಾದ ಕ್ಷಣ ಅಲ್ಲಿನ ಸಂಭ್ರಮದ ವಾತಾವರಣದಲ್ಲಿ ಗಲಿಬಿಲಿಗೊಳಗಾದೆ. ನಂತರ ಭಾಷಣದಲ್ಲಿ ಡಾ. ರಾಜ್ ಕುಮಾರ್ ಅವರ ಜೇನಿನ ಹೊಳೆಯೋ ಹಾಡನ್ನು ಆ ಕ್ಷಣದಲ್ಲಿ ಮನಸ್ಸಿಗೆ ತೋಚಿದಂತೆ ಸಾಂದಭಿ೯ಖವಾಗಿ ಉಲ್ಲೇಖಿಸಿದೆ. ಆ ಹಾಡು ಮತ್ತು ಡಾ.ರಾಜ್ ಕನ್ನಡದ ಪ್ರತಿನಿಧಿತ್ವ ಎಂದೆನ್ನಿಸಿತ್ತು. ಹೀಗಾಗಿ ಅಲ್ಲಿ ಹೇಳಿದ ಹಾಡು ಜಗತ್ತಿನಾದ್ಯಂತ ಪ್ರಸಿಧ್ದಿ ಪಡೆಯುವ ಮೂಲಕ ನನ್ನ ಉದ್ದೇಶ ಸಾಥ೯ಕವಾದಂತಾಯಿತು ಎಂದೂ ದೀಪಾ ಭಾಸ್ತಿ ಹೇಳಿದರು.

ಅಜ್ಜನ ಗ್ರಂಥಾಲಯ ನೀಡಿದ ಪ್ರೇರಣೆ…! : ತನ್ನ ಅಜ್ಜ ಡಾ.ನಂಜುಂಡೇಶ್ವರ ಅವರ ಗ್ರಂಥಾಲಯದಲ್ಲಿದ್ದ ಅನೇಕ ಪುಸ್ತಕಗಳು ಬಾಲ್ಯದಲ್ಲಿಯೇ ಓದುವ ಆಸಕ್ತಿ ಹುಟ್ಟುಹಾಕಿತ್ತು. ತನ್ನ ದೊಡ್ಡಮ್ಮ ಕೂಡ ಲೇಖಕಿಯಾಗಿದ್ದು ತನಗೂ ಸ್ಪೂತಿ೯ ನೀಡಿತ್ತು. ಮಡಿಕೇರಿಯ ಕೊಡಗು ವಿದ್ಯಾಲಯಲ್ಲಿ ದಿಕ್ಸೂಚಿ ವಾತಾ೯ ಸಂಚಿಕೆ ಮೂಲಕ ಸಣ್ಣ ಪುಟ್ಟ ಕವನಗಳ ಮೂಲಕ ಬರವಣಿಗೆ ಪ್ರಾರಂಭಿಸಿದ್ದೆ. ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಕಾಲೇಜು. ಮಂಗಳ ಗಂಗೋತ್ರಿಯ ಪತ್ರಿಕೋದ್ಯಮ ಶಿಕ್ಷಣವೂ ಸಾಹಿತ್ಯದತ್ತ ಪ್ರೇರೇಪಿಸಿತ್ತು. ಇಂಗ್ಲೀಷ್ ಭಾಷಾ ಶಿಕ್ಷಣ ಪಡೆದ ಕಾರಣ ಇಂಗ್ಲೀಷ್ ಕೖತಿಗಳತ್ತ ಹೆಚ್ಚು ಆಕಷಿ೯ತನಾದೆ. ಹೀಗಿದ್ದರೂ ಕನ್ನಡದ ಪ್ರಮುಖ ಕೖತಿಗಳನ್ನು ಓದಿಕೊಂಡಿದ್ದೇನೆ ಎಂದೂ ದೀಪಾ ಹೇಳಿದರು. ಅಪ್ಪ ಪ್ರಕಾಶ್ ತಾಯಿ ಸುಧಾ ಭಾಸ್ತಿ, ಮತ್ತು ಪತಿ ಚೆಟ್ಟೀರ ನಾಣಯ್ಯ ನೀಡುತ್ತಿರುವ ಪ್ರೋತ್ಸಾಹ, ಬೆಂಬಲ ಮರೆಯಲಸಾಧ್ಯ. ಪತಿಯ ಮನೆಯ ವಹಿವಾಟು ನಿವ೯ಹಿಸುತ್ತಿರುವುದರಿಂದಾಗಿ ತನ್ನ ಸಾಹಿತ್ಯಿಕ ಕಾಯ೯ ಸುಲಿತವಾಗಲು ಸಾಧ್ಯವಾಗಿದೆ ಎಂದೂ ದೀಪಾ ಹೇಳಿಕೊಂಡರು. ಕೊಡಗು ಪತ್ರಕತ೯ರ ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ. ಮಾತನಾಡಿ, ಹಸಿರ ಸಿರಿ ನಡುವೆ ತನ್ನ ಪಾಡಿಗೆ ತಾನು ಸಾಹಿತ್ಯ ರಚನೆಯಲ್ಲಿ ತೊಡಗಿದ್ದ ದೀಪಾ ಅವರ ಶ್ರಮಕ್ಕೆ ಶ್ಲಾಘನೀಯ ಪ್ರತಿಫಲ ಬೂಕರ್ ಪ್ರಶಸ್ತಿ ಮೂಲಕ ದೊರಕಿದೆ. ಈ ಮೂಲಕ ಕೊಡಗು ಜಿಲ್ಲೆಯೂ ವಿಶ್ವದ ಸಾಹಿತ್ಯಲೋಕದ ಬಾನಂಗಣದಲ್ಲಿ ರಾರಾಜಿಸುವಂತಾಗಿದೆ ಎಂದು ಹೇಳಿದರು. ಸಂಘದ ಪ್ರಧಾನ ಕಾಯ೯ದಶಿ೯ ಸುರೇಶ್ ಬಿಳಿಗೇರಿ ವಂದಿಸಿದ ಕಾಯ೯ಕ್ರಮದಲ್ಲಿ ಕೊಡಗು ಪತ್ರಕತ೯ರ ಸಂಘದ ಪರವಾಗಿ ದೀಪಾಭಾಸ್ತಿಯವರನ್ನು ಸನ್ನಾನಿಸಿ ಗೌರವಿಸಲಾಯಿತು, ಸಂಘದ ಸಲಹೆಗಾರರಾದ ಟಿ.ಪಿ.ರಮೇಶ್, ಬಿ.ಜಿ. ಅನಂತಶಯನ, ನಿದೇ೯ಶಕರು, ಸದಸ್ಯರು ಹಾಜರಿದ್ದರು.

70 ಸಾವಿರ ಪ್ರತಿ ಮಾರಾಟದ ದಾಖಲೆ ನಿಮಿ೯ಸಿದ ಹಾಟ್೯ ಲ್ಯಾಂಪ್….! ಬೂಕರ್ ಪ್ರಶಸ್ತಿ ಪಡೆದ ಹಾಟ್೯ ಲ್ಯಾಪ್ ಕೃತಿಯು ಕೇವಲ 3 ವಾರದಲ್ಲಿಯೇ 70 ಸಾವಿರ ಪ್ರತಿಗಳ ಮುದ್ರಣ ಕಂಡಿದ್ದು, 1 ತಿಂಗಳಲ್ಲಿ 1.50 ಲಕ್ಷ ಕೃತಿ ಮಾರಾಟದ ದಾಖಲೆ ಮಾಡುವ ಸಾಧ್ಯತೆಯಿದೆ. ಈಗಾಗಲೇ ಹಲವಾರು ಭಾಷೆಗಳಿಂದ ಹಾಟ್೯ ಲ್ಯಾಂಪ್ ಕೖತಿಯ ಅನುವಾದ ಮುದ್ರಣಕ್ಕಾಗಿ ಬೇಡಿಕೆ ಬರುತ್ತಿದೆ. ಸದ್ಯಕ್ಕೆ ಮಲಯಾಳಂ, ಅಸ್ಸಾಮಿ, ಓಡಿಯಾ ಭಾಷೆಗಳ ತಜು೯ಮೆಗೆ ಅನುಮತಿ ನೀಡಿದ್ದೇನೆ. ಪ್ರಮುಖ ಪುಸ್ತಕ ಮಾರಾಟ ತಾಣಗಳಲ್ಲಿ ಸತತ 3 ವಾರಗಳಿಂದ ಹಾಟ್೯ ಲ್ಯಾಂಪ್ ಕೃತಿಯುವ ಮಾರಾಟದಲ್ಲಿ ಮೊದಲ ಸ್ಥಾನ ಕಾಯ್ದುಕೊಂಡಿದೆ. – ದೀಪಾ ಭಾಸ್ತಿ, ಹಾಟ್೯ ಲ್ಯಾಂಪ್ ಕೖತಿಯ ಅನುವಾದಕ್ಕಾಗಿ ಬೂಕರ್ ಪ್ರಶಸ್ತಿ ವಿಜೇತ ಲೇಖಕಿ.  

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಮಾ.26 ಮತ್ತು 27 ರಂದು 37ನೇ ವರ್ಷದ ಶ್ರೀ ರಾಮೋತ್ಸವ ಹಾಗೂ ದ್ವಿತೀಯ ವರ್ಷದ ಪುನರ್ ಪ್ರತಿಷ್ಠಾಪನಾ ಮಹೋತ್ಸವ*

ಮಾರ್ಚ್ 24, 2026

*ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 

ಮಾರ್ಚ್ 23, 2026

*ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*

ಮಾರ್ಚ್ 23, 2026

*ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 

ಮಾರ್ಚ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಮಾ.23 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಜ್ಞಾನವಿಕಾಸ ಕಾರ್ಯಕ್ರಮದಲ್ಲಿ ವಿರಾಜಪೇಟೆ ತಾಲ್ಲೂಕಿನ ಗೋಣಿಕೊಪ್ಪ…

*ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*

ಮಾರ್ಚ್ 23, 2026

*ಪೊನ್ನಂಪೇಟೆ ಮತ್ತು ಶ್ರೀಮಂಗಲ : ಮಾ.26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮಾರ್ಚ್ 23, 2026

*ಮಾ.27 ರಂದು ಕೂಡಿಗೆಯಲ್ಲಿ ವೃತ್ತಿ ಶಿಕ್ಷಣ ಪ್ರದರ್ಶನ, ವೃತ್ತಿ ಮಾರ್ಗದರ್ಶನ*

ಮಾರ್ಚ್ 23, 2026

*ಏ.7 ರಿಂದ 30 ರವರೆಗೆ ಬೇಸಿಗೆ ತರಬೇತಿ ಶಿಬಿರ*

ಮಾರ್ಚ್ 23, 2026

*ಮಡಿಕೇರಿಯಲ್ಲಿ ದೇವರ ದಾಸಿಮಯ್ಯ ಜಯಂತಿ :  ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿ : ಟಿ.ಕೆ.ಪಾಂಡುರಂಗ*

ಮಾರ್ಚ್ 23, 2026

*ಕೊಡಗು ಪ್ರೆಸ್ ಕ್ಲಬ್ ಕ್ರಿಕೆಟ್ ಪ್ರೀಮಿಯರ್ ಲೀಗ್-4 : ಮೀಡಿಯಾ ಚಾಲೆಂಜರ್ಸ್ ತಂಡ ಚಾಂಪಿಯನ್*

ಮಾರ್ಚ್ 23, 2026

*ಕೆ.ಜಿ.ಬೋಪಯ್ಯರಿಂದ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ : ಕಾಂಗ್ರೆಸ್ಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ : ಪರಮೇಶ್ವರ್ ಅಸಮಾಧಾನ*

ಮಾರ್ಚ್ 23, 2026

*ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ ತೆರೆ ಮಹೋತ್ಸವ*

ಮಾರ್ಚ್ 23, 2026

*ಕಾಸ್ಮೋಪಾಲಿಟನ್ ಕ್ಲಬ್ ಅಧ್ಯಕ್ಷರಾಗಿ ರತನ್ ತಮ್ಮಯ್ಯ ಆಯ್ಕೆ*

ಮಾರ್ಚ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.