Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಮಾ.26 ಮತ್ತು 27 ರಂದು 37ನೇ ವರ್ಷದ ಶ್ರೀ ರಾಮೋತ್ಸವ ಹಾಗೂ ದ್ವಿತೀಯ ವರ್ಷದ ಪುನರ್ ಪ್ರತಿಷ್ಠಾಪನಾ ಮಹೋತ್ಸವ*
  • *ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 
  • *ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*
  • *ಪೊನ್ನಂಪೇಟೆ ಮತ್ತು ಶ್ರೀಮಂಗಲ : ಮಾ.26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮಾ.27 ರಂದು ಕೂಡಿಗೆಯಲ್ಲಿ ವೃತ್ತಿ ಶಿಕ್ಷಣ ಪ್ರದರ್ಶನ, ವೃತ್ತಿ ಮಾರ್ಗದರ್ಶನ*
  • *ಏ.7 ರಿಂದ 30 ರವರೆಗೆ ಬೇಸಿಗೆ ತರಬೇತಿ ಶಿಬಿರ*
  • *ಮಡಿಕೇರಿಯಲ್ಲಿ ದೇವರ ದಾಸಿಮಯ್ಯ ಜಯಂತಿ :  ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿ : ಟಿ.ಕೆ.ಪಾಂಡುರಂಗ*
  • *ಕೊಡಗು ಪ್ರೆಸ್ ಕ್ಲಬ್ ಕ್ರಿಕೆಟ್ ಪ್ರೀಮಿಯರ್ ಲೀಗ್-4 : ಮೀಡಿಯಾ ಚಾಲೆಂಜರ್ಸ್ ತಂಡ ಚಾಂಪಿಯನ್*
  • *ಕೆ.ಜಿ.ಬೋಪಯ್ಯರಿಂದ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ : ಕಾಂಗ್ರೆಸ್ಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ : ಪರಮೇಶ್ವರ್ ಅಸಮಾಧಾನ*
  • *ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ ತೆರೆ ಮಹೋತ್ಸವ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ಪ್ರೆಸ್ ಕ್ಲಬ್‍ನಿಂದ ವಾರ್ಷಿಕ ಪ್ರಶಸ್ತಿ ಪ್ರದಾನ : ಸುಳ್ಳು ಸುದ್ದಿಗಳಿಗೆ ಪತ್ರಿಕಾ ಮಾಧ್ಯಮಗಳು ಕಡಿವಾಣ ಹಾಕಲಿ : ಮೇಚಿರ ರವಿಶಂಕರ್ ನಾಣಯ್ಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ಪ್ರೆಸ್ ಕ್ಲಬ್‍ನಿಂದ ವಾರ್ಷಿಕ ಪ್ರಶಸ್ತಿ ಪ್ರದಾನ : ಸುಳ್ಳು ಸುದ್ದಿಗಳಿಗೆ ಪತ್ರಿಕಾ ಮಾಧ್ಯಮಗಳು ಕಡಿವಾಣ ಹಾಕಲಿ : ಮೇಚಿರ ರವಿಶಂಕರ್ ನಾಣಯ್ಯ*

ಜೂನ್ 9, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.9 NEWS DESK : ಇತ್ತೀಚಿನ ಕಾಲಘಟ್ಟದಲ್ಲಿ ಅತೀ ವೇಗವಾಗಿ ಹರಡುತ್ತಿರುವ ಸುಳ್ಳು ಸುದ್ದಿಗಳಿಗೆ ಕಡಿವಾಣ ಹಾಕಬೇಕಾದರೆ, ಸಾಮಾಜಿಕ ಜಾಲತಾಣದಲ್ಲಿ ಪತ್ರಿಕಾ ಮಾಧ್ಯಮ ಹಿಡಿತ ಸಾಧಿಸುವ ಅನಿವಾರ್ಯತೆ ಇದೆ ಎಂದು ಕೊಡಗು ವಿಶ್ವವಿದ್ಯಾನಿಲಯದ ವಿಶೇಷ ಅಧಿಕಾರಿ(ಪರೀಕ್ಷಾಂಗ) ಮೇಚಿರ ರವಿಶಂಕರ್ ನಾಣಯ್ಯ ಅಭಿಪ್ರಾಯಪಟ್ಟರು. ನಗರದ ಪತ್ರಿಕಾ ಭವನದಲ್ಲಿ ನಡೆದ ಕೊಡಗು ಪ್ರೆಸ್‍ಕ್ಲಬ್ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಹಿಂದಿನ ಕಾಲದಲ್ಲಿ ಬದುಕಿನ ಮೌಲ್ಯಗಳಿಗೆ ಹೆಚ್ಚು ಒತ್ತು ನೀಡಲಾಗುತ್ತಿತ್ತು. ಬದಲಾದ ಕಾಲಘಟ್ಟದಲ್ಲಿ ಮಾನವೀಯ ಮೌಲ್ಯಗಳನ್ನು ಮರೆತಿರುವುದು ಸಮಾಜದ ಅನೇಕ ಸಮಸ್ಯೆಗಳಿಗೆ ಕಾರಣವಾಗಿದೆ. ಜನರಲ್ಲಿ ಮತ್ತೆ ಮೌಲ್ಯಗಳನ್ನು ಮೂಡಿಸುವಲ್ಲಿ ಪತ್ರಿಕಾ ಮಾಧ್ಯಮದ ಪಾತ್ರ ಮಹತ್ತರವಾಗಿದೆ. ಮನೆಯೇ ಮೊದಲ ಪಾಠ ಶಾಲೆ ಎಂಬ ಮಾತಿನಂತೆ ಪೋಷಕರು ಮಕ್ಕಳಿಗೆ ಎಳೆ ವಯಸ್ಸಿನಿಂದಲೇ ಜೀವನದ ಮೌಲ್ಯಗಳನ್ನು ಕಲಿಸಿಕೊಡಬೇಕು ಎಂದರು. ಪತ್ರಿಕೋದ್ಯಮವು ಪ್ರಜಾಪ್ರಭುತ್ವದ ನಾಲ್ಕನೇ ಆಧಾರಸ್ತಂಭ ಇದ್ದಂತೆ. ಈ ವೃತ್ತಿಯನ್ನು ಜವಾಬ್ದಾರಿಯುತವಾಗಿ ನಿಷ್ಠೆಯಿಂದ ನಿಭಾಯಿಸುವುದು ಕಷ್ಟಕರ. ಸಾಮಾಜಿಕ ಬದಲಾವಣೆಯನ್ನು ತರುವ ಮತ್ತು ಜನಾಭಿಪ್ರಾಯ ರೂಪಿಸುವ ಜವಾಬ್ದಾರಿ ಪತ್ರಕರ್ತರದ್ದಾಗಿರುತ್ತದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ಸುಳ್ಳು ಸುದ್ದಿಗಳು ಜನರನ್ನು ಬೇಗ ತಲುಪುತ್ತಿರುವುದರಿಂದ, ಮುಖ್ಯ ವಾಹಿನಿಯಲ್ಲಿರುವ ಮಾಧ್ಯಮದ ಹಿಡಿತ ಸಡಿಲವಾಗ್ತಿದೆ. ಇದು ಸಮಾಜಕ್ಕೆ ಮಾರಕವಾಗಿದ್ದು, ಪತ್ರಿಕಾ ಮಾಧ್ಯಮವು ಸಾಮಾಜಿಕ ಜಾಲತಾಣಗಳಲ್ಲಿ ಹಿಡಿತ ಸಾಧಿಸುವ ಮೂಲಕ ಸಮಾಜದಲ್ಲಿ ಆರೋಗ್ಯಕರ ವಾತಾವರಣ ನಿರ್ಮಿಸಬೇಕೆಂದು ಸಲಹೆ ನೀಡಿದರು. ಮಡಿಕೇರಿ ತಾಲ್ಲೂಕು ಎಸ್‍ಎನ್‍ಡಿಪಿ ಅಧ್ಯಕ್ಷ ಟಿ.ಆರ್.ವಾಸುದೇವ್ ಮಾತನಾಡಿ, ಪತ್ರಿಕೋದ್ಯಮ ಜನರ ಧ್ವನಿಯಾಗಿದೆ. ಪತ್ರಕರ್ತರಿಗೆ ಸಮಾಜದಲ್ಲಿ ಮಹತ್ವದ ಸ್ಥಾನವಿದ್ದು, ಅವರು ಶಿಕ್ಷಕರಿದ್ದಂತೆ. ತಮ್ಮ ಶ್ರಮ ಹಾಗೂ ಬದ್ಧತೆಯಿಂದ ಸಾಮಾಜಿಕ ಅಭಿವೃದ್ದಿಗೆ ಕಂಕಣಬದ್ಧರಾಗಿದ್ದಾರೆ. ಖಡ್ಗಕ್ಕಿಂತ ಲೇಖನಿ ಹರಿತ ಎಂಬಂತೆ ತಮ್ಮ ಪ್ರಭಾವಶಾಲಿ ಬರಹಗಳಿಂದ ಸಮಾಜದ ಅಂಕು-ಡೊಂಕನ್ನು ತಿದ್ದುತ್ತಾ ಸದಾ ಸಮಾಜದ ಪರ ಕೆಲಸ ಮಾಡುವ ಪತ್ರಕರ್ತರ ಸೇವೆ ಶ್ಲಾಘನೀಯ ಎಂದು ಬಣ್ಣಿಸಿದರು.
ಕೊಡಗು ಪ್ರೆಸ್‍ಕ್ಲಬ್ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷರು ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಮಾತನಾಡಿ, `ಸೋರುತಿಹುದು ಮೀನಾಳ ಮನೆಯ ಮಾಳಿಗೆ’ ಎಂಬ ಪತ್ರಕರ್ತ ಇಸ್ಮಾಯಿಲ್ ಕಂಡಕರೆ ಅವರ ವರದಿಯ ಫಲಶ್ರುತಿಯಾಗಿ ಶಾಸಕ ಮಂತರ್ ಗೌಡ ಅವರು ಮೀನಾ ಕುಟುಂಬಕ್ಕೆ ಮನೆ ನಿರ್ಮಿಸಿ ಕೊಟ್ಟಿದ್ದು, ಜೂ.9ರಂದು ಮನೆ ಹಸ್ತಾಂತರ ಕಾರ್ಯಕ್ರಮ ನಡೆಯಲಿದೆ. ಇಂತಹ ಪರಿಣಾಮಕಾರಿ ವರದಿಗಳು ಹೆಚ್ಚೆಚ್ಚು ಪ್ರಕಟಗೊಳ್ಳಬೇಕೆಂದು ಹೇಳಿದರು. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಬಿ.ಆರ್.ಸವಿತಾ ರೈ ಮಾತನಾಡಿ, ಕೊಡಗಿನ ಆರಂಭದ ಪತ್ರಿಕೋದ್ಯಮಕ್ಕೂ ಇತ್ತೀಚಿನ ಪತ್ರಿಕೋದ್ಯಮಕ್ಕೂ ಸಾಕಷ್ಟು ವ್ಯತ್ಯಾಸಗಳಿವೆ. ಆಗಿನ ಪತ್ರಕರ್ತರಲ್ಲಿ ಇದ್ದ ಆಸಕ್ತಿ ಈಗಿನವರಲ್ಲಿ ಇಲ್ಲದಾಗಿದೆ. ಪ್ರಶಸ್ತಿಗಳು ಪತ್ರಕರ್ತರ ಇರುವಿಕೆ ಮತ್ತು ತೂಕವನ್ನು ಪ್ರತಿಬಿಂಬಿಸುತ್ತದೆ. ಆದ್ದರಿಂದ ಪತ್ರಕರ್ತರು ವಿಶೇಷ ವರದಿಗಳ ಮೂಲಕ ಗಮನ ಸೆಳೆಯಬೇಕು. ಕೊಡಗು ಪ್ರೆಸ್‍ಕ್ಲಬ್ ಮತ್ತು ಕಾರ್ಯನಿರತ ಪತ್ರಕರ್ತರ ಸಂಘ ಒಂದೇ ನಾಣ್ಯದ ಎರಡು ಮುಖಗಳಂತೆ ಕಾರ್ಯಚರಿಸಬೇಕೆಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೊಡಗು ಪ್ರೆಸ್‍ಕ್ಲಬ್ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ, ಕೊಡಗಿನ ಪತ್ರಕರ್ತರು ರಾಜ್ಯಕ್ಕೆ ಮಾದರಿಯಾಗಿದ್ದಾರೆ. ಯುವ ಪತ್ರಕರ್ತರು ಪತ್ರಿಕೋದ್ಯಮದತ್ತ ಮುಖ ಮಾಡಬೇಕು. ಇಲ್ಲಿ ಸಾಕಷ್ಟು ಅವಕಾಶಗಳಿದ್ದು, ಸಮಾಜಮುಖಿಯಾಗಿ ಸೇವೆ ಸಲ್ಲಿಸಲು ಇದು ಉತ್ತಮ ಕ್ಷೇತ್ರ ಎಂದರು. ಕಾರ್ಯಕ್ರಮದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಆದರ್ಶ್ ಅದ್ಕಲೇಗಾರ್, ಹಿರಿಯ ಉಪಾಧ್ಯಕ್ಷ ನವೀನ್ ಡಿಸೋಜ, ಉಪಾಧ್ಯಕ್ಷೆ ವನಿತಾ ಚಂದ್ರಮೋಹನ್, ಖಜಾಂಚಿ ತೇಜಸ್ ಪಾಪಯ್ಯ, ಸಂಘಟನಾ ಕಾರ್ಯದರ್ಶಿ ಕೆ.ಜೆ.ಶಿವರಾಜ್, ಸಹ ಕಾರ್ಯದರ್ಶಿ ವಿ.ವಿ.ಅರುಣ್ ಕುಮಾರ್, ನಿರ್ದೇಶಕರಾದ ರಮೇಶ್ ಕುಟ್ಟಪ್ಪ, ಬಿ.ಆರ್ ಸವಿತಾ ರೈ, ಕೆ.ಎಂ ವಿನೋದ್, ಮಾಗುಲು ಲೋಹಿತ್, ಕೆ.ಎಸ್.ಲೋಕೇಶ್, ಬಿ.ಜಿ.ಮಂಜು, ಕೆ.ಎಂ ಇಸ್ಮಾಯಿಲ್ ಉಪಸ್ಥಿತರಿದ್ದರು. ಕಾರ್ಯಕ್ರಮಕ್ಕೂ ಮುನ್ನ ಕೊಡಗು ಪ್ರೆಸ್‍ಕ್ಲಬ್ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅಧ್ಯಕ್ಷತೆಯಲ್ಲಿ ಸಂಘದ ಮಹಾಸಭೆ ನಡೆಯಿತು.
ಪ್ರಶಸ್ತಿ ಪ್ರದಾನ: ಕೊಡಗು ಪ್ರೆಸ್ ಕ್ಲಬ್ ನೀಡುವ ವಾರ್ಷಿಕ ಪ್ರಶಸ್ತಿ ವಿಜೇತರಾದ ಜಿಲ್ಲೆಯ ಮೂವರು ಪತ್ರಕರ್ತರನ್ನು ಸನ್ಮಾನಿಸಲಾಯಿತು. ಹಿರಿಯ ಪತ್ರಕರ್ತ ಕೆ.ಬಿ.ಮಹಂತೇಶ್ ಅವರ ಸ್ಮರಣಾರ್ಥ ಕೊಡಗು ಪ್ರೆಸ್ ಕ್ಲಬ್ ವತಿಯಿಂದ ನೀಡುವ ಅತ್ಯುತ್ತಮ ಪರಿಣಾಮಕಾರಿ ವರದಿ ಪ್ರಶಸ್ತಿಗೆ ಶಕ್ತಿ ಪತ್ರಿಕೆಯಲ್ಲಿ ಪ್ರಕಟವಾದ `ರೂ.7 ಕೋಟಿ ವೆಚ್ಚದ ಜರ್ಮನ್ ತಂತ್ರಜ್ಞಾನದ ತಡೆಗೋಡೆ ಪೂರ್ಣಗೊಳ್ಳುವುದು ಎಂದು?’ ಎಂಬ ವರದಿಗೆ ಹೆಚ್.ಜೆ.ರಾಕೇಶ್ ಪ್ರಶಸ್ತಿ ಪಡೆದರು. ಕೋವರ್ ಕೊಲ್ಲಿ ಇಂದ್ರೇಶ್ ಮತ್ತು ಕುಟುಂಬವರ್ಗ ತಮ್ಮ ತಂದೆ ಬಿ.ವಿ.ಚಂದ್ರಶೇಖರ್ ಹಾಗೂ ತಾಯಿ ಪುಷ್ಪಲತಾ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಮಾನವೀಯ ವರದಿ ಪ್ರಶಸ್ತಿಗೆ ಶಕ್ತಿ ಪತ್ರಿಕೆಯಲ್ಲಿ ಪ್ರಕಟವಾದ “ಸೋರುತಿಹುದು ಮೀನಾಳ ಮನೆಯ ಮಾಳಿಗೆ” ಎಂಬ ವರದಿಗೆ ಕೆ.ಎಂ.ಇಸ್ಮಾಯಿಲ್ ಕಂಡಕರೆ ಪಡೆದುಕೊಂಡರು. ಎಂ.ಎನ್.ಚಂದ್ರಮೋಹನ್ ಅವರು ತಮ್ಮ ತಂದೆ ಎಂ.ನಾರಾಯಣ ಹಾಗೂ ತಾಯಿ ಎನ್.ಪದ್ಮಾವತಿ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಪರಿಸರ ವರದಿ ಪ್ರಶಸ್ತಿಗೆ ಶಕ್ತಿ ಪತ್ರಿಕೆಯಲ್ಲಿ ಪ್ರಕಟವಾದ “ಜಿಲ್ಲಾ ಕೇಂದ್ರದಲ್ಲಿ ವಾಕರಿಗೆ ತರಿಸುವ ಕೊಳಕು ಮಾಂಸ ಮಾರುಕಟ್ಟೆ!” ಎಂಬ ವರದಿಗೆ ಆನಂದ್ ಕೊಡಗು ಪ್ರಶಸ್ತಿ ಸ್ವೀಕರಿಸಿದರು. ಪ್ರಶಸ್ತಿ ವಿಜೇತರಿಗೆ ತಲಾ 5 ಸಾವಿರ ರೂಪಾಯಿ ನಗದು ಹಾಗೂ ಫಲಕ ನೀಡಲಾಯಿತು. ಫೀ.ಮಾ.ಕೆ.ಎಂ ಕಾರ್ಯಪ್ಪ ಕಾಲೇಜಿನ ಪ್ರೊ.ನಯನಾ ಕಶ್ಯಪ್, ಪ್ರಾಧ್ಯಾಪಕರಾದ ಕರುಣಾಕರ್, ಮೋನಿಕಾ ತೀರ್ಪುಗಾರರಾಗಿ ಕಾರ್ಯನಿರ್ವಹಿಸಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2023-24ನೇ ಸಾಲಿನ ಪ್ರಶಸ್ತಿಗಳಿಗೆ ಭಾಜನರಾದ ಕಾಯಪಂಡ ಶಶಿ ಸೋಮಯ್ಯ, ಪಿ.ವಿ.ಅಕ್ಷಯ್, ಯು.ಎಂ.ಜಯಂತಿ, ಇ.ಆರ್.ವಿಶ್ವಕುಮಾರ್ ಹಾಗೂ ಕಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದಿಂದ ನೀಡಲಾಗುವ ಹರ್ಷ ಮೇಲಾಂಟ ದತ್ತಿನಿಧಿ ಪ್ರಶಸ್ತಿಗೆ ಭಾಜನರಾದ ಕೆ.ಎಂ.ಇಸ್ಮಾಯಿಲ್ ಕಂಡಕರೆ ಮತ್ತು ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ನೀಡಲಾಗುವ ಮೈಸೂರು ದಿಗಂತ ದತ್ತಿನಿಧಿ ಪ್ರಶಸ್ತಿ ಪಡೆದ ಬಾಚರಣಿಯಂಡ ಅನು ಕಾರ್ಯಪ್ಪ ಅವರನ್ನು ಇದೇ ಸಂದರ್ಭ ಸನ್ಮಾನಿಸಲಾಯಿತು.

 

 

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಮಾ.26 ಮತ್ತು 27 ರಂದು 37ನೇ ವರ್ಷದ ಶ್ರೀ ರಾಮೋತ್ಸವ ಹಾಗೂ ದ್ವಿತೀಯ ವರ್ಷದ ಪುನರ್ ಪ್ರತಿಷ್ಠಾಪನಾ ಮಹೋತ್ಸವ*

ಮಾರ್ಚ್ 24, 2026

*ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 

ಮಾರ್ಚ್ 23, 2026

*ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*

ಮಾರ್ಚ್ 23, 2026

*ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 

ಮಾರ್ಚ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಮಾ.23 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಜ್ಞಾನವಿಕಾಸ ಕಾರ್ಯಕ್ರಮದಲ್ಲಿ ವಿರಾಜಪೇಟೆ ತಾಲ್ಲೂಕಿನ ಗೋಣಿಕೊಪ್ಪ…

*ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*

ಮಾರ್ಚ್ 23, 2026

*ಪೊನ್ನಂಪೇಟೆ ಮತ್ತು ಶ್ರೀಮಂಗಲ : ಮಾ.26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮಾರ್ಚ್ 23, 2026

*ಮಾ.27 ರಂದು ಕೂಡಿಗೆಯಲ್ಲಿ ವೃತ್ತಿ ಶಿಕ್ಷಣ ಪ್ರದರ್ಶನ, ವೃತ್ತಿ ಮಾರ್ಗದರ್ಶನ*

ಮಾರ್ಚ್ 23, 2026

*ಏ.7 ರಿಂದ 30 ರವರೆಗೆ ಬೇಸಿಗೆ ತರಬೇತಿ ಶಿಬಿರ*

ಮಾರ್ಚ್ 23, 2026

*ಮಡಿಕೇರಿಯಲ್ಲಿ ದೇವರ ದಾಸಿಮಯ್ಯ ಜಯಂತಿ :  ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿ : ಟಿ.ಕೆ.ಪಾಂಡುರಂಗ*

ಮಾರ್ಚ್ 23, 2026

*ಕೊಡಗು ಪ್ರೆಸ್ ಕ್ಲಬ್ ಕ್ರಿಕೆಟ್ ಪ್ರೀಮಿಯರ್ ಲೀಗ್-4 : ಮೀಡಿಯಾ ಚಾಲೆಂಜರ್ಸ್ ತಂಡ ಚಾಂಪಿಯನ್*

ಮಾರ್ಚ್ 23, 2026

*ಕೆ.ಜಿ.ಬೋಪಯ್ಯರಿಂದ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ : ಕಾಂಗ್ರೆಸ್ಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ : ಪರಮೇಶ್ವರ್ ಅಸಮಾಧಾನ*

ಮಾರ್ಚ್ 23, 2026

*ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ ತೆರೆ ಮಹೋತ್ಸವ*

ಮಾರ್ಚ್ 23, 2026

*ಕಾಸ್ಮೋಪಾಲಿಟನ್ ಕ್ಲಬ್ ಅಧ್ಯಕ್ಷರಾಗಿ ರತನ್ ತಮ್ಮಯ್ಯ ಆಯ್ಕೆ*

ಮಾರ್ಚ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.