
ಕುಶಾಲನಗರ ಜೂ.9 NEWS DESK : ಶಿರಂಗಾಲ ಗ್ರಾಮ ಪಂಚಾಯತಿ ವ್ಯಾಪ್ತಿಯ ವಿವಿಧ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಶಿರಂಗಾಲ ಪ್ರಾಥಮಿಕ ಆರೋಗ್ಯ ಕೇಂದ್ರದ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಭೇಟಿ ನೀಡಿ ಆರೋಗ್ಯದ ಬಗ್ಗೆ ಅರಿವು ಮೂಡಿಸಿದರು. ಇಲಾಖೆಯ ಸೂಚನೆಯಂತೆ ಸ್ವಚ್ಛತೆ, ಆರೋಗ್ಯದ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ಮತ್ತು ಶಾಲಾ ಶಿಕ್ಷಕರಿಗೆ ನೀಡಿದರು. ಮುಂಜಾಗ್ರತಾ ಕ್ರಮವಾಗಿ ಶಾಲಾ ಆವರಣದಲ್ಲಿ ಲಾರ್ವಾ ಸಮೀಕ್ಷೆ ಮತ್ತು ಹಿರಿಯ ಆರೋಗ್ಯ ನಿರೀಕ್ಷಕ ವಿಶ್ವಜ್ಞಾ ಡೆಂಗ್ಯೂ ರೋಗ, ಕೋವಿಡ್ – 19 ಹಾಗೂ ಈಡಿಸ್ ಲಾರ್ವಾ ಮುಕ್ತ ಶಾಲಾ ಆವರಣವನ್ನಾಗಿ ಮಾಡಲು ಮಾಹಿತಿಯನ್ನು ನೀಡಿದರು. ಈ ಸಂದರ್ಭ ಪ್ರಾಥಮಿಕ ಆರೋಗ್ಯ ಕೇಂದ್ರದ ಅಧಿಕಾರಿಗಳಾದ ಸೌರಭ್, ಬಿಂದು ಸೇರಿದಂತೆ ಶಾಲಾ ಮುಖ್ಯೋಪಾಧ್ಯಾರು ಹಾಗೂ ಸಹ ಶಿಕ್ಷಕರು , ವಿದ್ಯಾರ್ಥಿಗಳು, ಸಿಬ್ಬಂದಿ ವರ್ಗದವರು ಹಾಜರಿದ್ದರು.










