
ಸುಂಟಿಕೊಪ್ಪ ಜೂ.10 NEWS DESK : ಸುಂಟಿಕೊಪ್ಪ ವಿಭಾಗದ ಪತ್ರಕರ್ತರು ಹಾಗೂ ಕುಶಾಲನಗರ ತಾಲ್ಲೂಕು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಎಂ.ಬಿ.ವಿನ್ಸೆಂಟ್‍ರವರ ಮಾತೋಶ್ರೀ, ದಿ.ಬೋನಿಪಾಸ್ ರವರ ಪತ್ನಿ ವಿ.ಎಂ.ಥೆರೇಸಾ ಇಂದು ಮಧ್ಯಾಹ್ನ ಸ್ವಗೃಹದಲ್ಲಿ ನಿಧನರಾದರು. ಕಳೆದ ಕೆಲ ಸಮಯಗಳ ಅನಾರೋಗ್ಯದ ಬಳಿಕ ಥೆರೇಸಾ ಅವರು ಕೊನೆಯುಸಿರೆಳೆದಿದ್ದಾರೆ. ಮೃತರು ಮೂವರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಬುಧವಾರ ಬೆಳಿಗ್ಗೆ 10.30 ಗಂಟೆಗೆ ಸುಂಟಿಕೊಪ್ಪ ಸಂತ ಅಂತೋಣಿ ಚರ್ಚ್‍ನಲ್ಲಿ ಅಂತಿಮ ಪ್ರಾರ್ಥನಾ ವಿಧಿವಿಧಾನಗಳು ನೆರವೇರಿದ ನಂತರ ಕ್ರಿಶ್ಚಿಯನ್ ಸ್ಮಶಾನದಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ. ಸಂತಾಪ :: ಥೆರೇಸಾ ಅವರ ನಿಧನಕ್ಕೆ ಕೊಡಗು ಜಿಲ್ಲಾ ಪತ್ರಕರ್ತರ ಸಂಘ, ಕುಶಾಲನಗರ, ಸೋಮವಾರಪೇಟೆ, ವಿರಾಜಪೇಟೆ, ಪೊನ್ನಂಪೇಟೆ ತಾಲ್ಲೂಕು ಪತ್ರಕರ್ತರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ.









