Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಮಾ.26 ಮತ್ತು 27 ರಂದು 37ನೇ ವರ್ಷದ ಶ್ರೀ ರಾಮೋತ್ಸವ ಹಾಗೂ ದ್ವಿತೀಯ ವರ್ಷದ ಪುನರ್ ಪ್ರತಿಷ್ಠಾಪನಾ ಮಹೋತ್ಸವ*
  • *ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 
  • *ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*
  • *ಪೊನ್ನಂಪೇಟೆ ಮತ್ತು ಶ್ರೀಮಂಗಲ : ಮಾ.26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮಾ.27 ರಂದು ಕೂಡಿಗೆಯಲ್ಲಿ ವೃತ್ತಿ ಶಿಕ್ಷಣ ಪ್ರದರ್ಶನ, ವೃತ್ತಿ ಮಾರ್ಗದರ್ಶನ*
  • *ಏ.7 ರಿಂದ 30 ರವರೆಗೆ ಬೇಸಿಗೆ ತರಬೇತಿ ಶಿಬಿರ*
  • *ಮಡಿಕೇರಿಯಲ್ಲಿ ದೇವರ ದಾಸಿಮಯ್ಯ ಜಯಂತಿ :  ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿ : ಟಿ.ಕೆ.ಪಾಂಡುರಂಗ*
  • *ಕೊಡಗು ಪ್ರೆಸ್ ಕ್ಲಬ್ ಕ್ರಿಕೆಟ್ ಪ್ರೀಮಿಯರ್ ಲೀಗ್-4 : ಮೀಡಿಯಾ ಚಾಲೆಂಜರ್ಸ್ ತಂಡ ಚಾಂಪಿಯನ್*
  • *ಕೆ.ಜಿ.ಬೋಪಯ್ಯರಿಂದ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ : ಕಾಂಗ್ರೆಸ್ಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ : ಪರಮೇಶ್ವರ್ ಅಸಮಾಧಾನ*
  • *ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ ತೆರೆ ಮಹೋತ್ಸವ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗಿನ ಚಿತ್ರಶಿಲ್ಪ ಕಲಾವಿದ ಬಿ.ಕೆ.ಗಣೇಶ್ ರೈಗೆ ಅಬುಧಾಬಿ ಹಿಂದೂ ಮಂದಿರದಲ್ಲಿ “ಸಂಸ್ಕೃತಿ ಶಿಲ್ಪಕಲಾ ರತ್ನ ಪ್ರಶಸ್ತಿ” ಪ್ರದಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗಿನ ಚಿತ್ರಶಿಲ್ಪ ಕಲಾವಿದ ಬಿ.ಕೆ.ಗಣೇಶ್ ರೈಗೆ ಅಬುಧಾಬಿ ಹಿಂದೂ ಮಂದಿರದಲ್ಲಿ “ಸಂಸ್ಕೃತಿ ಶಿಲ್ಪಕಲಾ ರತ್ನ ಪ್ರಶಸ್ತಿ” ಪ್ರದಾನ*

ಜೂನ್ 10, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK  ಜೂ.10 : ಮಧ್ಯಪ್ರಾಚ್ಯದ ಇತಿಹಾಸದಲ್ಲಿ ಮೊದಲಬಾರಿಗೆ ಅರಬ್ ಸಂಯುಕ್ತ ಸಂಸ್ಥಾನದ ಅಬುಧಾಬಿ ಬಿ.ಎ.ಪಿ.ಎಸ್. ಹಿಂದೂ ದೇವಾಲಯದಲ್ಲಿ ಇತ್ತೀಚೆಗೆ ನಡೆದ ಗುರುವಂದನಾ ಸಂಸ್ಕೃತಿ ಸಿಂಚನ ಕಾರ್ಯಕ್ರಮದಲ್ಲಿ ಕೊಡಗಿನ ಚಿತ್ರಶಿಲ್ಪ ಕಲಾವಿದ ಬಿ.ಕೆ.ಗಣೇಶ್ ರೈ ಅವರಿಗೆ “ಸಂಸ್ಕೃತಿ ಶಿಲ್ಪಕಲಾ ರತ್ನ ಪ್ರಶಸ್ತಿ” ಪ್ರದಾನ ಮಾಡಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಸನಾತನ್ ವೇದಿಕ್ ಸಂಸ್ಥಾನದ ಗುರುಗಳಾದ ಶ್ರೀ ಶ್ರೀ ಶ್ರೀ ಪ್ರೋಫೆಸರ್ ಸ್ವಾಮಿ ಚೈತನ್ಯಾನಂದ ಸರಸ್ವತಿಯವರ ಸಮ್ಮುಖದಲ್ಲಿ ಕಲಾವಿದ ಬಿ.ಕೆ.ಗಣೇಶ್ ರೈ ಹಾಗೂ ಮಂಜುಳಾ ಗಣೇಶ್ ರೈ ದಂಪತಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. ಹಿಂದೂ ಮಂದಿರದ ಅವರಣದಲ್ಲಿರುವ ಪ್ರಮುಖ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಬುಧಾಬಿ ಹಿಂದೂ ಮಂದಿರದ ಮುಖ್ಯಸ್ಥರಾದ ಶ್ರೀ ಬ್ರಹ್ಮವಿಹಾರಿ ದಾಸ್ ಸ್ವಾಮೀಜಿ, ಬೆಳಗಾವಿ ನಿಡಸೊಸಿ ಶ್ರೀ ಜಗದ್ಗುರು ದುರುದುಂಡೇಶ್ವರ ಮಠದ ಶ್ರೀ ಶ್ರೀ ಶ್ರೀ ನಿಜಲಿಂಗೇಶ್ವರ ಸ್ವಾಮೀಜಿ, ಗೋವಾ ರಾಜ್ಯದ ಶ್ರೀ ದತ್ತ ಪದ್ಮನಾಭ ಪೀಠದ ಪದ್ಮಶ್ರೀ ಪುರಸ್ಕöÈತ ಶ್ರೀ ಶ್ರೀ ಸದ್ಗುರು ಬ್ರಹ್ಮೇಶನಂದನಾಚಾರ್ಯ ಸ್ವಾಮೀಜಿ ಮತ್ತಿತರ ಪ್ರಮುಖರು ಉಪಸ್ಥಿತರಿದ್ದು ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಿದರು.
*ಖ್ಯಾತ ಕಲಾವಿದ ಗಣೇಶ್ ರೈ* ಮೂಲತ: ಮಡಿಕೇರಿಯವರಾದ ಗಣೇಶ್ ರೈ ಅವರು ಮೈಸೂರಿನಲ್ಲಿ ಚಿತ್ರಶಿಲ್ಪ ಕಲೆಯಲ್ಲಿ ತರಬೇತಿ ಪಡೆದಿರುವ ಕಲಾವಿದರು. ಮಡಿಕೇರಿ ಪುರಭವನದ ಎದುರಿನಲ್ಲಿರುವ ಕೊಡಗಿನ ಕುಲದೇವತೆ ಕಾವೇರಿ ಮಾತೆಯ ವಿಗ್ರಹವನ್ನು ನಿರ್ಮಿಸಿದವರು. ತಲಕಾವೇರಿಯಲ್ಲಿ ಪ್ರಥಮ ಬಾರಿಗೆ ಕಾವೇರಿ ಮಾತೆಯ ಚಿತ್ರವನ್ನು ಶಿವಕಾಶಿಯಲ್ಲಿ ಮುದ್ರಿಸಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರಿಂದ ಬಿಡುಗಡೆ ಮಾಡಿಸಿದ್ದರು. ಇತ್ತೀಚೆಗೆ ಕಂಪ್ಯೂಟರ್ ಗ್ರಾಫಿಕ್ಸ್ ನಲ್ಲಿ ಕಾವೇರಿ ಮಾತೆಯ ಚಿತ್ರವನ್ನು ರಚಿಸಿ ಬಿಡುಗಡೆ ಮಾಡದ್ದಾರೆ. ಮಡಿಕೇರಿ ಗಣಪತಿ ಉತ್ಸವ ಮತ್ತು ದಸರಾ ಉತ್ಸವಕ್ಕೆ ಹಲವಾರು ವಿವಿಧ ಭಂಗಿಯಲ್ಲಿ ಪೇಪರ್ ಪಲ್ಪ್ ದೇವತಾ ಮೂರ್ತಿಗಳನ್ನು ನಿರ್ಮಿಸಿದ್ದಾರೆ. ಬಹುಮುಖ ಪ್ರತಿಭೆಯ ಗಣೇಶ್ ರೈ ಅವರು ಲೇಖಕರಾಗಿದ್ದು, ಇತ್ತೀಚೆಗೆ “ಕಡಲಾಚೆಯ ರಮ್ಯ ನೋಟ ದುಬಾಯಿ” ಕೃತಿಯನ್ನು ಬಿಡುಗಡೆ ಮಾಡಿದ್ದಾರೆ. ಕಾರ್ಯಕ್ರಮಗಳ ನಿರೂಪಕರಾಗಿಯೂ ಜನಮಾನಸದಲ್ಲಿ ಪ್ರಸಿದ್ಧಿಯನ್ನು ಪಡೆದಿದ್ದಾರೆ. ಶಾರ್ಜಾ ಕರ್ನಾಟಕ ಸಂಘದ ಅಧ್ಯಕ್ಷರಾಗಿ ಸೇವೆ ಹಾಗೂ ಕರ್ನಾಟಕ ಅನಿವಾಸಿ ಭಾರತೀಯ ಸಮಿತಿ ಯು.ಎ.ಇ. ಘಟಕದ ಉಪಾಧ್ಯಕ್ಷರಾಗಿ ಹಾಗೂ ಹಲವಾರು ಸಂಘ ಸಂಸ್ಥೆಗಳಿಗೆ ಸಲಹೆಗಾರರಾಗಿದ್ದಾರೆ. ಸ್ವತ: ರಕ್ತದಾನಿಯಾಗಿರುವ ಗಲ್ಫ್ ನಾಡಿನಲ್ಲಿ ರಕ್ತದಾನ ಶಿಬಿರದ ಆಯೋಜನೆಯನ್ನು ಮಾಡಿರುವ ಇವರಿಗೆ ಯು.ಎ.ಇ. ಸರ್ಕಾರ ಪ್ರಶಂಸಾ ಪತ್ರವನ್ನು ನೀಡಿದೆ. ವಿರಾಜಪೇಟೆ ಸಂತ ಅನ್ನಮ್ಮ ಪ್ರೌಢಶಾಲೆಯಲ್ಲಿ ಚಿತ್ರಕಲಾ ಅಧ್ಯಾಪಕರಾಗಿ ಮಾತು ವಿರಾಜಪೇಟೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತಾಲೂಕು ಸಂಸ್ಥೆಯ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿರುವ ಇವರು ವಿದೇಶದ ಗಲ್ಫ್ ನಾಡಿನಲ್ಲಿ ಬಹುರಾಷ್ಟ್ರೀಯ ಜಾಹೀರಾತು ಸಂಸ್ಥೆಯಲ್ಲಿ ಕ್ರಿಯಾತ್ಮಕ ಕಲಾ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಗಣೇಶ್ ರೈ ಕೆಲಿಯಾಡೋ ಸ್ಕೋಪ್ ಎಂಬ ಯೂಟ್ಯೂಬ್ ಚಾನೆಲ್ ಹೊಂದಿದ್ದು, ಭಾರತ ಮತ್ತು ಗಲ್ಫ್ ನಾಡಿನ ಸಾಂಸ್ಕೃತಿಕ ರಾಯಭಾರಿಯಾಗಿ ಎರಡು ದೇಶಗಳ ಬಾಂಧವ್ಯಕ್ಕೆ ಸಂಬಂಧಿಸಿದ ನೂರಾರು ವೀಡಿಯೊಗಳು ವಿಶ್ವವ್ಯಾಪಿಯಾಗಿದೆ. ಗಣೇಶ್ ರೈಯವರ ಬಹುಮುಖ ಪ್ರತಿಭೆಗೆ ದುಬಾಯಿ ಸರ್ಕಾರ ಹತ್ತು ವರ್ಷಗಳ ಕಲ್ಚರಲ್ ಗೋಲ್ಡನ್ ವೀಸಾ ನೀಡಿ ಗೌರವಿಸಿದೆ. “ಸಂಸ್ಕೃತಿ ಶಿಲ್ಪಕಲಾ ರತ್ನ ಪ್ರಶಸ್ತಿ” ಸ್ವೀಕರಿಸಿರುವ ಗಣೇಶ್ ರೈ ಅವರು ತಮ್ಮ ಶಿಲ್ಪಕಲೆ, ಲೇಖನ, ಸಮಾಜಸೇವೆಯ ಪಯಣದಲ್ಲಿ ಆಶೀರ್ವಾದ, ಪ್ರೋತ್ಸಾಹ, ಬೆಂಬಲ ನೀಡಿರುವ ಸರ್ವರಿಗೂ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಮಾ.26 ಮತ್ತು 27 ರಂದು 37ನೇ ವರ್ಷದ ಶ್ರೀ ರಾಮೋತ್ಸವ ಹಾಗೂ ದ್ವಿತೀಯ ವರ್ಷದ ಪುನರ್ ಪ್ರತಿಷ್ಠಾಪನಾ ಮಹೋತ್ಸವ*

ಮಾರ್ಚ್ 24, 2026

*ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 

ಮಾರ್ಚ್ 23, 2026

*ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*

ಮಾರ್ಚ್ 23, 2026

*ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 

ಮಾರ್ಚ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಮಾ.23 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಜ್ಞಾನವಿಕಾಸ ಕಾರ್ಯಕ್ರಮದಲ್ಲಿ ವಿರಾಜಪೇಟೆ ತಾಲ್ಲೂಕಿನ ಗೋಣಿಕೊಪ್ಪ…

*ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*

ಮಾರ್ಚ್ 23, 2026

*ಪೊನ್ನಂಪೇಟೆ ಮತ್ತು ಶ್ರೀಮಂಗಲ : ಮಾ.26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮಾರ್ಚ್ 23, 2026

*ಮಾ.27 ರಂದು ಕೂಡಿಗೆಯಲ್ಲಿ ವೃತ್ತಿ ಶಿಕ್ಷಣ ಪ್ರದರ್ಶನ, ವೃತ್ತಿ ಮಾರ್ಗದರ್ಶನ*

ಮಾರ್ಚ್ 23, 2026

*ಏ.7 ರಿಂದ 30 ರವರೆಗೆ ಬೇಸಿಗೆ ತರಬೇತಿ ಶಿಬಿರ*

ಮಾರ್ಚ್ 23, 2026

*ಮಡಿಕೇರಿಯಲ್ಲಿ ದೇವರ ದಾಸಿಮಯ್ಯ ಜಯಂತಿ :  ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿ : ಟಿ.ಕೆ.ಪಾಂಡುರಂಗ*

ಮಾರ್ಚ್ 23, 2026

*ಕೊಡಗು ಪ್ರೆಸ್ ಕ್ಲಬ್ ಕ್ರಿಕೆಟ್ ಪ್ರೀಮಿಯರ್ ಲೀಗ್-4 : ಮೀಡಿಯಾ ಚಾಲೆಂಜರ್ಸ್ ತಂಡ ಚಾಂಪಿಯನ್*

ಮಾರ್ಚ್ 23, 2026

*ಕೆ.ಜಿ.ಬೋಪಯ್ಯರಿಂದ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ : ಕಾಂಗ್ರೆಸ್ಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ : ಪರಮೇಶ್ವರ್ ಅಸಮಾಧಾನ*

ಮಾರ್ಚ್ 23, 2026

*ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ ತೆರೆ ಮಹೋತ್ಸವ*

ಮಾರ್ಚ್ 23, 2026

*ಕಾಸ್ಮೋಪಾಲಿಟನ್ ಕ್ಲಬ್ ಅಧ್ಯಕ್ಷರಾಗಿ ರತನ್ ತಮ್ಮಯ್ಯ ಆಯ್ಕೆ*

ಮಾರ್ಚ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.