Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಮಾ.26 ಮತ್ತು 27 ರಂದು 37ನೇ ವರ್ಷದ ಶ್ರೀ ರಾಮೋತ್ಸವ ಹಾಗೂ ದ್ವಿತೀಯ ವರ್ಷದ ಪುನರ್ ಪ್ರತಿಷ್ಠಾಪನಾ ಮಹೋತ್ಸವ*
  • *ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 
  • *ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*
  • *ಪೊನ್ನಂಪೇಟೆ ಮತ್ತು ಶ್ರೀಮಂಗಲ : ಮಾ.26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮಾ.27 ರಂದು ಕೂಡಿಗೆಯಲ್ಲಿ ವೃತ್ತಿ ಶಿಕ್ಷಣ ಪ್ರದರ್ಶನ, ವೃತ್ತಿ ಮಾರ್ಗದರ್ಶನ*
  • *ಏ.7 ರಿಂದ 30 ರವರೆಗೆ ಬೇಸಿಗೆ ತರಬೇತಿ ಶಿಬಿರ*
  • *ಮಡಿಕೇರಿಯಲ್ಲಿ ದೇವರ ದಾಸಿಮಯ್ಯ ಜಯಂತಿ :  ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿ : ಟಿ.ಕೆ.ಪಾಂಡುರಂಗ*
  • *ಕೊಡಗು ಪ್ರೆಸ್ ಕ್ಲಬ್ ಕ್ರಿಕೆಟ್ ಪ್ರೀಮಿಯರ್ ಲೀಗ್-4 : ಮೀಡಿಯಾ ಚಾಲೆಂಜರ್ಸ್ ತಂಡ ಚಾಂಪಿಯನ್*
  • *ಕೆ.ಜಿ.ಬೋಪಯ್ಯರಿಂದ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ : ಕಾಂಗ್ರೆಸ್ಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ : ಪರಮೇಶ್ವರ್ ಅಸಮಾಧಾನ*
  • *ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ ತೆರೆ ಮಹೋತ್ಸವ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಕ್ಕಳಿಗೆ ಇಂಗ್ಲೀಷ್ ಕಲಿಸಲೇಬೇಕು : ಶಾಸಕ ಡಾ.ಮಂತರ್‌ಗೌಡ ಅಭಿಮತ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಕ್ಕಳಿಗೆ ಇಂಗ್ಲೀಷ್ ಕಲಿಸಲೇಬೇಕು : ಶಾಸಕ ಡಾ.ಮಂತರ್‌ಗೌಡ ಅಭಿಮತ*

ಜೂನ್ 11, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ NEWS DESK ಜೂ.11 : ಮಾತೃಭಾಷೆ ಕನ್ನಡದೊಂದಿಗೆ ಪ್ರಾಥಮಿಕ ಹಂತದಲ್ಲಿ ಮಕ್ಕಳಿಗೆ ಇಂಗ್ಲೀಷ್ ಕಲಿಸಲೇಬೇಕು ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್‌ಗೌಡ ಅಭಿಪ್ರಾಯಪಟ್ಟಿದ್ದಾರೆ. ಶಾಲಾ ಶಿಕ್ಷಣ ಮತ್ತು ಸಾಕ್ಷಾರತ ಇಲಾಖೆಯ ವತಿಯಿಂದ ಚೌಡ್ಲು ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಆಯೋಜಿಸಿದ್ದ ಹತ್ತನೆ ತರಗತಿಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ಸಾಧಕ ವಿದ್ಯಾರ್ಥಿಗಳಿಗೆ ಹಾಗು ಶೇ.100ರಷ್ಟು ಫಲಿತಾಂಶ ಗಳಿಸಿದ ಶಾಲೆಗಳ ಮುಖ್ಯ ಶಿಕ್ಷಕರುಗಳನ್ನು ಸನ್ಮಾನಿಸಿ ಮಾತನಾಡಿದರು. ಸ್ಪರ್ಧಾತ್ಮಕ ಯುಗದಲ್ಲಿ ನಮ್ಮ ಮಕ್ಕಳು ಸ್ಪರ್ಧೆ ಮಾಡಲೇಬೇಕಾಗಿದೆ. ಈ ಹಂತದಲ್ಲಿ ಇಂಗ್ಲೀಷ್ ಅವಶ್ಯಕತೆ ಎಷ್ಟಿದೆ ಎಂಬುವುದು ವಿದ್ಯಾವಂತರಿಗೆ ಗೊತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮದ ಎಲ್‌ಕೆಜಿ ಮತ್ತು ಯುಕೆಜಿ ಗೆ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಪ್ರವೇಶ ಪಡೆಯುತ್ತಿರುವುದು ಒಳ್ಳೆಯ ಬೆಳವಣಿಗೆ. ಕೆಲವು ಶಾಲೆಗಳಲ್ಲಿ ಅತೀ ಹೆಚ್ಚಿನ ಮಕ್ಕಳು ಅರ್ಜಿ ಸಲ್ಲಿಸಿದ್ದಾರೆ. 30 ಮಕ್ಕಳ ಪ್ರವೇಶಾತಿಗೆ ಮಾತ್ರ ಅವಕಾಶವಿದ್ದು, ಅರ್ಜಿ ಸಲ್ಲಿಸಿದ ಎಲ್ಲಾ ಮಕ್ಕಳಿಗೂ ಪ್ರವೇಶಾತಿಗೆ ಅನುಕೂಲ ಮಾಡಿಕೊಡಲು ಸರ್ಕಾರದ ಮಟ್ಟದಲ್ಲಿ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು. ಕಳೆದ 25 ವರ್ಷಗಳ ಹಿಂದೆಯೇ ಪೂರ್ವ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮವನ್ನು ಅಳವಡಿಸಿದ್ದರೆ, ಸರ್ಕಾರಿ ಶಾಲೆಗಳಿಗೆ ಸಮಸ್ಯೆ ಆಗುತ್ತಿರಲಿಲ್ಲ. ಪ್ರಾಥಮಿಕ ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನವನ್ನು ಕಲ್ಪಿಸಲೇಬೇಕಿದ್ದು ಈ ಬಗ್ಗೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು. ಪ್ರಾಥಮಿಕ ಹಂತದಲ್ಲೇ ಮಕ್ಕಳಿಗೆ ಇಂಗ್ಲೀಷ್ ಕಲಿಸಿದರೆ, ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳು ಸ್ಪರ್ಧೆಗೆ ಸಿದ್ದರಾಗುತ್ತಾರೆ. ವಿದ್ಯಾರ್ಥಿಗಳು ನಿರಂತರ ಕಲಿಕೆಯೊಂದಿಗೆ ಹೆಚ್ಚು ಅಂಕಗಳನ್ನು ಗಳಿಸಬೇಕು ಎಂದು ಹೇಳಿದರು.
ಕಳೆದ ಮೂರು ವರ್ಷಗಳಿಂದ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಸೋಮವಾರಪೇಟೆ ತಾಲ್ಲೂಕು ಜಿಲ್ಲೆಯಲ್ಲಿ ಸತತವಾಗಿ ಪ್ರಥಮ ಸ್ಥಾನ ಪಡೆಯುತ್ತಿದೆ. ಈ ಸಾಧನೆಯಲ್ಲಿ ಶಿಕ್ಷಕರ ಪಾತ್ರ ದೊಡ್ಡದಿದೆ. 2025-26ನೇ ಸಾಲಿನಲ್ಲಿ ಕೊಡಗು ಜಿಲ್ಲೆ ರಾಜ್ಯದಲ್ಲಿ ಪ್ರಥಮ ಸ್ಥಾನಗಳಿಸಬೇಕು. ಶಿಕ್ಷಣ ಇಲಾಖೆ ಇಂದಿನಿಂದಲೆ ಸಿದ್ದತೆ ಮಾಡಿಕೊಳ್ಳಬೇಕು.ಎಲ್ಲಾ ರೀತಿಯ ಸಹಕಾರ ನೀಡುತ್ತೇನೆ ಎಂದು ಹೇಳಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಭಾಗ್ಯಮ್ಮ ಮಾತನಾಡಿ, ಕುವೆಂಪು ಶಾಲೆಯ ವಿದ್ಯಾರ್ಥಿನಿ ಸಿ.ಎಸ್. ಆದ್ವಿ 625ಕ್ಕೆ 623 ಅಂಕಗಳನ್ನು ಪಡೆದು ಜಿಲ್ಲೆಗೆ ಟಾಫರ್ ಆಗಿ ಶಿಕ್ಷಣ ಇಲಾಖೆಗೆ ಮತ್ತು ಓದಿದ ಶಾಲೆಗೆ ಕೀರ್ತಿ ತಂದಿದ್ದಾರೆ. ತಾಲ್ಲೂಕಿನ 70 ವಿದ್ಯಾರ್ಥಿಗಳು 600ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದು ಸಾಧನೆ ಮಾಡಿದ್ದಾರೆ. 10 ಶಾಲೆಗಳು ಶೇ.100ರಷ್ಟು ಫಲಿತಾಂಶ ಪಡೆದಿವೆ. ಈ ಸಾಧನೆಯಲ್ಲಿ ಶಿಕ್ಷಕರ ಪಾತ್ರ ಹಿರಿದಿದೆ ಎಂದು ಶ್ಲಾಘಿಸಿದರು. ಪ್ರಸಕ್ತ ವರ್ಷದಿಂದ ತಾಲ್ಲೂಕಿನ 8 ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮದ ಎಲ್‌ಕೆಜಿ, ಯುಕೆಜಿ ತರಗತಿಗಳು ಪ್ರಾರಂಭವಾಗಿವೆ. ಪೋಷಕರು ಹಾಗು ದಾನಿಗಳ ಸಹಕಾರದಿಂದ ಮೂರು ಶಾಲೆಗಳಲ್ಲಿ ಶಾಲಾ ವಾಹನಗಳನ್ನು ಖರೀದಿಸಲಾಗಿದೆ. ದಾಖಲಾತಿ ಹೆಚ್ಚಾಗಿದೆ. 30 ವಿದ್ಯಾರ್ಥಿಗಳ ಪ್ರವೇಶಕ್ಕೆ ಅವಕಾಶವಿದೆ. ಹೆಚ್ಚುವರಿ ವಿಭಾಗ ತೆರಯಲು ಶಾಸಕರು ಅನುಮತಿ ಕೊಡಿಸಬೇಕು ಎಂದು ಮನವಿ ಮಾಡಿದರು.
ಅತಿ ಹೆಚ್ಚಿನ ಅಂಕ ಪಡೆದ ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯ ಸಿ.ಎಸ್.ಆದ್ವಿ(623), ಕೆ.ಸಿ.ಪಂಚಮಿ(621), ಕೂಡ್ಲೂರು ಯೂನಿಕ್ ಅಕಾಡೆಮಿಯ ಸಮೃದ್ಧಿ ಅಚಾರ್(620), ಕುವೆಂಪು ಶಾಲೆಯ ಸಿ.ಎಸ್.ತೇಜಸ್ವಿನಿ, ನಿಡ್ತ ಸರ್ಕಾರಿ ಪ್ರೌಢಶಾಲೆಯ ಜೆ.ಎಸ್.ಪೂರ್ವಿಕ( 614), ಕುಶಾಲನಗರ ಜೂನಿಯರ್ ಕಾಲೇಜಿನ ಸರ್ನಿ ಗೌಡ(604), ಕೂಡಿಗೆ ಮೊರಾರ್ಜಿ ಶಾಲೆಯ ಪಿ.ಪ್ರೀತಮ್(618),ಬಿ.ಎಸ್.ಆದಿತ್ಯ(614), ಶನಿವಾರಸಂತೆ ವಿಘ್ನೇಶ್ವರ ಶಾಲೆಯ ವಿ. ನಮಿತ(612), ಕೆ.ಜ್ಞಾನತೀರ್ಥ(595) ಅವರುಗಳನ್ನು ಶಾಸಕರು ಸನ್ಮಾನಿಸಿದರು. ಶೇ.100ರಷ್ಟು ಫಲಿತಾಂಶ ಪಡೆದ ಕೂಡಿಗೆ, ಕುಶಾಲನಗರ ಮತ್ತು ಬಸವನಹಳ್ಳಿ ಮೊರಾರ್ಜಿ ಶಾಲೆ, ಬಿ.ಆರ್.ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ ತೋಳೂರುಶೆಟ್ಟಳ್ಳಿ, ಶನಿವಾರಸಂತೆ ವಿಘ್ನೇಶ್ವರ ಬಾಲಿಕ ಪ್ರೌಢಶಾಲೆ, ಕೂಡ್ಲೂರು ಯೂನಿಕ್ ಅಕಾಡೆಮಿ, ವಿಘ್ನೇಶ್ವರ ಗೋಲ್ಡನ್ ಆಂಗ್ಲಮಾಧ್ಯಮ ಶಾಲೆ ಶನಿವಾರಸಂತೆ, ಬೊಳ್ಳೂರು ಉದ್ಗಂಶಾಲೆ, ಶನಿವಾರಸಂತೆ ಸುಪ್ರಜ ಗುರುಕುಲ, ಕಾನ್‌ಬೈಲ್ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್.ಮುತ್ತಣ್ಣ, ಕುವೆಂಪು ವಿದ್ಯಾಸಂಸ್ಥೆಯ ಕರೆಸ್ಪಾಡೆಂಟ್ ಕೆ.ಎಂ.ಜಗದೀಶ್, ನಿರ್ದೇಶಕರುಗಳಾದ ನಂದಕುಮಾರ್, ರಾಮಚಂದ್ರ, ಎಸ್.ಬಿ.ಭರತ್, ಕೆ.ಟಿ.ಪರಮೇಶ್, ಬಿ.ಪಿ.ಅನಿಲ್ ಕುಮಾರ್, ಬಿಆರ್‌ಸಿ ಮಂಜೇಶ್, ಬಿಟಿಸಿಜಿ ಪ್ರಾಂಶುಪಾಲರಾದ ಮಿಲ್‌ಡ್ರೆಡ್ ಗೋನ್ಸಾಲ್ವೆಸ್, ಪ್ರೌಢಶಾಲಾ ಶಿಕ್ಷಕರ ಸಂಘದ ಹ್ಯಾರಿಮೋರಸ್ ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಮಾ.26 ಮತ್ತು 27 ರಂದು 37ನೇ ವರ್ಷದ ಶ್ರೀ ರಾಮೋತ್ಸವ ಹಾಗೂ ದ್ವಿತೀಯ ವರ್ಷದ ಪುನರ್ ಪ್ರತಿಷ್ಠಾಪನಾ ಮಹೋತ್ಸವ*

ಮಾರ್ಚ್ 24, 2026

*ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 

ಮಾರ್ಚ್ 23, 2026

*ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*

ಮಾರ್ಚ್ 23, 2026

*ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 

ಮಾರ್ಚ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಮಾ.23 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಜ್ಞಾನವಿಕಾಸ ಕಾರ್ಯಕ್ರಮದಲ್ಲಿ ವಿರಾಜಪೇಟೆ ತಾಲ್ಲೂಕಿನ ಗೋಣಿಕೊಪ್ಪ…

*ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*

ಮಾರ್ಚ್ 23, 2026

*ಪೊನ್ನಂಪೇಟೆ ಮತ್ತು ಶ್ರೀಮಂಗಲ : ಮಾ.26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮಾರ್ಚ್ 23, 2026

*ಮಾ.27 ರಂದು ಕೂಡಿಗೆಯಲ್ಲಿ ವೃತ್ತಿ ಶಿಕ್ಷಣ ಪ್ರದರ್ಶನ, ವೃತ್ತಿ ಮಾರ್ಗದರ್ಶನ*

ಮಾರ್ಚ್ 23, 2026

*ಏ.7 ರಿಂದ 30 ರವರೆಗೆ ಬೇಸಿಗೆ ತರಬೇತಿ ಶಿಬಿರ*

ಮಾರ್ಚ್ 23, 2026

*ಮಡಿಕೇರಿಯಲ್ಲಿ ದೇವರ ದಾಸಿಮಯ್ಯ ಜಯಂತಿ :  ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿ : ಟಿ.ಕೆ.ಪಾಂಡುರಂಗ*

ಮಾರ್ಚ್ 23, 2026

*ಕೊಡಗು ಪ್ರೆಸ್ ಕ್ಲಬ್ ಕ್ರಿಕೆಟ್ ಪ್ರೀಮಿಯರ್ ಲೀಗ್-4 : ಮೀಡಿಯಾ ಚಾಲೆಂಜರ್ಸ್ ತಂಡ ಚಾಂಪಿಯನ್*

ಮಾರ್ಚ್ 23, 2026

*ಕೆ.ಜಿ.ಬೋಪಯ್ಯರಿಂದ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ : ಕಾಂಗ್ರೆಸ್ಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ : ಪರಮೇಶ್ವರ್ ಅಸಮಾಧಾನ*

ಮಾರ್ಚ್ 23, 2026

*ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ ತೆರೆ ಮಹೋತ್ಸವ*

ಮಾರ್ಚ್ 23, 2026

*ಕಾಸ್ಮೋಪಾಲಿಟನ್ ಕ್ಲಬ್ ಅಧ್ಯಕ್ಷರಾಗಿ ರತನ್ ತಮ್ಮಯ್ಯ ಆಯ್ಕೆ*

ಮಾರ್ಚ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.