
ಮಡಿಕೇರಿ ಜೂ.14 NEWS DESK : ಹಾರಂಗಿ ಜಲಾನಯನ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯದ ಒಳಹರಿವಿನ ಪ್ರಮಾಣ ಹೆಚ್ಚಿದ್ದರಿಂದ 4 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಬಿಡಲಾಯಿತು. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಲಾನಯನ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳ ಹಿನ್ನೆಲೆಯಲ್ಲಿ ಶೀಘ್ರವೇ ಜಲಾಶಯದ ನೀರಿನ ಮಟ್ಟ ಗರಿಷ್ಠ ಮಿತಿಯನ್ನು ತಲುಪಬಹುದೆಂದು ಹಾರಂಗಿ ಜಲಾಶಯದ ಕಾರ್ಯಪಾಲಕ ಇಂಜಿನಿಯರ್ ಪುಟ್ಟಸ್ವಾಮಿ ಐ.ಕೆ. ತಿಳಿಸಿದ್ದಾರೆ. ಈ ಹಿನ್ನೆಲೆ ಕಾವೇರಿ ನದಿ ಪಾತ್ರದಲ್ಲಿ ನೆಲೆಸಿರುವವರು ತಮ್ಮ ಆಸ್ತಿ ಹಾಗೂ ಜಾನುವಾರುಗಳ ರಕ್ಷಣೆಗೆ ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಕೋರಿದ್ದಾರೆ.










