
ಮಡಿಕೇರಿ ಜೂ.14 NEWS DESK : ಪೊನ್ನಂಪೇಟೆ ತಾಲೂಕಿನ ಹುದಿಕೇರಿ ಕಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಯಲ್ಲಿ ಸುಸಜ್ಜಿತ ಹಾಕಿ ಮೈದಾನ ನಿರ್ಮಾಣವಾಗುತ್ತಿದ್ದು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಪರಿಶೀಲನೆ ನಡೆಸಿದರು. ಶಾಲೆಯ ಅಧ್ಯಾಪಕರು, ಆಡಳಿತ ಮಂಡಳಿ ಹಾಗೂ ಅಧಿಕಾರಿಗಳಿಂದ ಅಗತ್ಯ ಮಾಹಿತಿಯನ್ನು ಪಡೆದರು. ಬಳಿಕ ತಮ್ಮ ಸಲಹೆ ಸೂಚನೆಗಳನ್ನು ನೀಡಿ, ಮಕ್ಕಳ ಕ್ರೀಡಾ ಭವಿಷ್ಯದ ದೃಷ್ಟಿಯಿಂದ ಮೈದಾನದ ಉನ್ನತೀಕರಣ ಹಾಗೂ ಸೌಲತ್ತುಗಳ ಒದಗಿಸುವುದು ತನ್ನ ಪ್ರಥಮ ಆದ್ಯತೆಯಾಗಿದ್ದು, ಮಕ್ಕಳಿಗೆ ಅನುಕೂಲ ಆಗುವಂತೆ ಎಲ್ಲಾ ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕೆಂದು ಸಲಹೆ ನೀಡಿದರು. ಶಾಲಾ ಮೈದಾನವನ್ನು ಉನ್ನತೀಕರಣಗೊಳಿಸಿ, ಹಾಕಿ ಆಟಕ್ಕೆ ಮೈದಾನ ನಿರ್ಮಿಸುವ ಬಗ್ಗೆ ಚರ್ಚಿಸಿದರು. ಈ ಸಂದರ್ಭ ಮಾತನಾಡಿದ ಶಾಸಕರು, 2027 ರಲ್ಲಿ ಅಜ್ಜಿಕುಟ್ಟಿರ ಕುಟುಂಬದವರು ಹಮ್ಮಿಕೊಂಡಿರುವ ಹಾಕಿ ಉತ್ಸವವನ್ನು ಇದೇ ಮೈದಾನದಲ್ಲಿ ನಡೆಸಲು ಚಿಂತಿಸುತ್ತಿರುವುದಾಗಿ ಹೇಳಿದರು. ವೈಜ್ಞಾನಿಕವಾಗಿ ಎಲ್ಲವನ್ನು ಪರಿಶೀಲಿಸಿ ಬಳಿಕ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು. ಚೀಫ್ ಎಲೆಟ್ರಿಕಲ್ ಆಫೀಸರ್ ತಿತೀರ ರೋಷನ್ ಅಪ್ಪಚ್ಚು, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್, ವಲಯ ಕಾಂಗ್ರೆಸ್ ಅಧ್ಯಕ್ಷ ಸೂರಜ್,ಅಜ್ಜಿಕುಟ್ಟಿರ ಗಿರೀಶ್, ಹಿರಿಯ ಮುಖಂಡರಾದ ಚೇಕ್ಕೇರ ವಾಸು ಕುಟ್ಟಪ್ಪ, ಚೆಕ್ಕೇರ ಸುಧೀರ್, ಪಕ್ಷದ ಪ್ರಮುಖರು, ಸ್ಥಳೀಯರು ಹಾಜರಿದ್ದರು.









