
ವಿರಾಜಪೇಟೆ ಜೂ.14 NEWS DESK : ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ 2024ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರಕಟಗೊಂಡಿದ್ದು, ಅತ್ಯುತ್ತಮ ಶೈಕ್ಷಣಿಕ ವರದಿ ಪ್ರಶಸ್ತಿಗೆ ವಿರಾಜಪೇಟೆಯ ಪತ್ರಕರ್ತರಾದ ರಜಿತ ಕಾರ್ಯಪ್ಪ ಭಾಜನರಾಗಿದ್ದಾರೆ. ವಿರಾಜಪೇಟೆಯ ಪ್ರಗತಿ ಶಾಲೆಯ ಮುಖ್ಯಸ್ಥರಾದ ಮಾದಂಡ ತಿಮ್ಮಯ್ಯ ಅವರು ತಮ್ಮ ತಾಯಿ ದಿವಂಗತ ತುಂಗಾ ಪೂವಯ್ಯ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಶೈಕ್ಷಣಿಕ ವರದಿಗೆ ವಿಜಯ ಕರ್ನಾಟಕ ಪತ್ರಿಕೆಯಲ್ಲಿ ಪ್ರಕಟವಾದ “ಸರಕಾರಿ ಶಾಲೆ ಆದರ್ಶ ಸಂಸ್ಥೆ” ವರದಿಗೆ ರಜಿತಾ ಕಾರ್ಯಪ್ಪ ಪಡೆದುಕೊಂಡಿದ್ದಾರೆ. ಜೂನ್ 22 ರಂದು ನಡೆಯಲಿರುವ ವಿರಾಜಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಕಾರ್ಯದರ್ಶಿ ತಿಳಿಸಿದ್ದಾರೆ.










