ಕುಶಾಲನಗರ ಜೂ.16 NEWS DESK : ಕರ್ನಾಟಕ ಸರ್ಕಾರದ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಹಾಗೂ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಡಿ ಕಾರ್ಯನಿರ್ವಹಿಸುತ್ತಿರುವ ಕೊಡಗು ಜಿಲ್ಲೆಯ ಕುಶಾಲನಗರ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ 2025-26ನೇ ಪ್ರಸ್ತುತ ಸಾಲಿನಲ್ಲಿ ಪ್ರಥಮ ವರ್ಷದ ಇಂಜಿನಿಯರಿಂಗ್ ಕೋರ್ಸ್ ಗಳಿಗೆ ಸಿಇಟಿಯ ಕೌನ್ಸಿಲಿಂಗ್ ಮೂಲಕ ಪ್ರವೇಶವಕಾಶ ಕಲ್ಪಿಸಲಾಗಿದೆ. ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ ಪೈಕಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಕುಶಾಲನಗರ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಸ್ತುತ ಸಿವಿಲ್, ಮೆಕ್ಯಾನಿಕಲ್, ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯೂನಿಕೇಶನ್ (ಇ ಅಂಡ್ ಸಿ )ವಿಭಾಗ ಹಾಗೂ ಕಂಪ್ಯೂಟರ್ ಸೈನ್ಸ್ ವಿಭಾಗ ಸೇರಿದಂತೆ ಒಟ್ಟು 4 ಕೋರ್ಸ್ ಗಳಿಗೆ ತಲಾ 60 ವಿದ್ಯಾರ್ಥಿಗಳಂತೆ ಪ್ರವೇಶವಕಾಶ ಕಲ್ಪಿಸಲಾಗಿದೆ. ಪ್ರಸ್ತುತ ನಮ್ಮ ಕಾಲೇಜಿನಲ್ಲಿ ಪ್ರಸ್ತುತ 805 ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರು ಪರಶಿವಮೂರ್ತಿ ತಿಳಿಸಿದರು. ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ತೇರ್ಗಡೆ ಹೊಂದಿ ಸಿಇಟಿ ಕೌನ್ಸಿಲಿಂಗ್ ಮೂಲಕ ಸ್ಥಳ ಆಯ್ಕೆ ಮಾಡಿ ಕೊಳ್ಳುವ ವಿದ್ಯಾರ್ಥಿಗಳು ಪ್ರಥಮ ಆದ್ಯತೆ ಮೇರೆಗೆ ಕುಶಾಲನಗರ ಸರ್ಕಾರಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜನ್ನು ಆಯ್ಕೆ ಮಾಡಿಕೊಳ್ಳುವಂತೆ ಪ್ರಾಂಶುಪಾಲರು ಪತ್ರಿಕಾಗೋಷ್ಠಿಯಲ್ಲಿ ಮನವಿ ಮಾಡಿದರು. ಉತ್ತಮ ತಾಂತ್ರಿಕ ಸೌಲಭ್ಯಗಳು :: ಸರ್ಕಾರಿ ಕಾಲೇಜುಗಳ ಪೈಕಿ ಉತ್ತಮ ಮೂಲ ಸೌಲಭ್ಯ ಹಾಗೂ ತಾಂತ್ರಿಕ ಸೌಲಭ್ಯಗಳು, ಸುಸಜ್ಜಿತ ಸೆಮಿನಾರ್ ಹಾಲ್ ಗಳು, ಪ್ರಯೋಗಾಲಗಳು ಸೇರಿದಂತೆ ಕಂಪ್ಯೂಟರ್ ಗಳ ತರಬೇತಿ ಹಾಗೂ ಗ್ರಂಥಾಲಯ ಸೌಲಭ್ಯಗಳನ್ನು ಒಳಗೊಂಡಂತೆ ನುರಿತ ಹಿರಿಯ ಬೋಧಕ ವರ್ಗದವರನ್ನು ಹೊಂದಿರುವ ಈ ಕಾಲೇಜು ಕೊಡಗಿನ ಪ್ರತಿಷ್ಠಿತ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಆಗಿದ್ದು, ಸಾವಿರಾರು ವಿದ್ಯಾರ್ಥಿಗಳು ಇಂಜಿನಿಯರಿಂಗ್ ಪದವಿ ಪಡೆದು ಉತ್ತಮ ಭವಿಷ್ಯ ರೂಪಿಸಿಕೊಂಡಿದ್ದಾರೆ ಎಂದು ಪ್ರಾಂಶುಪಾಲರಾದ ಡಾ.ಕೆ.ಐ ಪರಶಿವಮೂರ್ತಿ ತಿಳಿಸಿದರು. ತರಬೇತಿ ಮತ್ತು ಪ್ಲೇಸ್ಮೆಂಟ್ (Placement)):: ಕಳೆದ 18 ವರ್ಷಗಳ ಹಿಂದೆ ಆರಂಭಗೊಂಡ ಈ ಕಾಲೇಜಿನಲ್ಲಿ ಆಯ್ಕೆ ಅಂತಿಮ ವರ್ಷದ ಕೋರ್ಸ್ ಪೂರೈಸುವ ವಿದ್ಯಾರ್ಥಿಗಳಿಗೆ ಮುಂದಿನ ಉದ್ಯೋಗ ಕಂಡುಕೊಳ್ಳುವ ದಿಸೆಯಲ್ಲಿ ಕಾಲೇಜಿನಲ್ಲಿ ಟಿ.ಸಿ.ಎಸ್ ಕಂಪನಿ, ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಸೇರಿದಂತೆ ಇನ್ನಿತರ ಕಂಪನಿಗಳಿಂದ ಪ್ಲೇಸ್ಮೆಂಟ್ (Placement)) (ನಿಶ್ಚಿತ ಉದ್ಯೋಗ ಕೊಡುವ ವ್ಯವಸ್ಥೆ) ಮತ್ತು ತರಬೇತಿಗಾಗಿ ಆಯ್ಕೆ ಮಾಡಿಕೊಳ್ಳುವ ಕಾರ್ಯವನ್ನು ಪ್ರತಿ ವರ್ಷ ನಡೆಸಲಾಗುತ್ತಿದೆ. ಕಳೆದ ವರ್ಷ ನಡೆದ ಪ್ಲೇಸ್ಮೆಂಟ್ ಆಯ್ಕೆ ಪ್ರಕ್ರಿಯೆಯಲ್ಲಿ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿವಿಧ ಜಾಗತಿಕ /ಖಾಸಗಿ ಕಂಪನಿಗಳಿಗೆ ನೇಮಕಗೊಂಡು ಉದ್ಯೋಗ ಮಾಡುತ್ತಿದ್ದಾರೆ ಎಂದು ವಿವರಿಸಿದರು. ಕಾಲೇಜಿನ ಅಭಿವೃದ್ಧಿಗೆ ಶಾಸಕರಾದ ಡಾ.ಮಂತರ್ ಗೌಡ ಅವರು ವಿಶೇಷ ಕಾಳಜಿ ವಹಿಸಿದ್ದು, ಜಿಲ್ಲಾಡಳಿತ ಕೂಡ ಉತ್ತಮವಾಗಿ ಸ್ಪಂದಿಸುತ್ತಿದೆ ಎಂದು ಪಾಂಶುಪಾಲ ಡಾ ಪರಶಿವಮೂರ್ತಿ ತಿಳಿಸಿದರು. ಉತ್ತಮ ಫಲಿತಾಂಶ :: ಈ ಕಾಲೇಜಿಗೆ ಸತತವಾಗಿ ಎಲ್ಲಾ ವಿಭಾಗಗಳಿಗೂ ಅತ್ಯುತ್ತಮ ಫಲಿತಾಂಶ ಲಭಿಸುತ್ತಿದ್ದು, ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. 2024-25ನೇ ಸಾಲಿನಲ್ಲಿ ನಡೆದ ಅಂತಿಮ ವರ್ಷದ ಸಿವಿಲ್ ವಿಭಾಗದ ವಿ.ಜೆ. ಜಾಸ್ ಲೀನಾ ಎಂಬ ವಿದ್ಯಾರ್ಥಿನಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಕ್ಕೆ ಅತ್ಯುನ್ನತ 2ನೇ ಸ್ಥಾನ ಪಡೆದು ಕಾಲೇಜಿಗೆ ಕೀರ್ತಿ ತಂದಿರುತ್ತಾರೆ ಎಂದು ಸಿವಿಲ್ ವಿಭಾಗದ ಮುಖ್ಯಸ್ಥರಾದ ಡಾ. ಎನ್ ಎಸ್ ಸತೀಶ್ ರವರು ತಿಳಿಸಿದರು.
ಗ್ರಾಮಾಂತರ ಪ್ರದೇಶದ ಹಾಗೂ ಬಡ ವಿದ್ಯಾರ್ಥಿಗಳ ಆಶಾಕಿರಣ ವಾಗಿರುವ ಈ ಇಂಜಿನಿಯರಿಂಗ್ ಕಾಲೇಜಿನಲ್ಲಿ ವೈಫೈ ಹಾಗೂ ಸ್ಮಾರ್ಟ್ ಕ್ಲಾಸ್ ನಂತಹ ಅತ್ಯಧುನಿಕ ತಾಂತ್ರಿಕ ವ್ಯವಸ್ಥೆಯೊಂದಿಗೆ ಉತ್ತಮ ತಾಂತ್ರಿಕ ಶಿಕ್ಷಣ ನೀಡಲಾಗುತ್ತಿದೆ . ಉತ್ತಮ ತಾಂತ್ರಿಕ ಸೌಲಭ್ಯಗಳನ್ನು ಹೊಂದಿರುವ ಈ ಕಾಲೇಜು ಭವಿಷ್ಯದಲ್ಲಿ ಮತ್ತಷ್ಟು ಎತ್ತರಕ್ಕೆ ಬೆಳೆಯಲಿದೆ ಎಂದರು. ಸಿಇಟಿ ಕೌನ್ಸಿಲಿಂಗ್ ನಲ್ಲಿ ಕೊಡಗು ಜಿಲ್ಲೆ ಸೇರಿದಂತೆ ನೆರೆಯ ಹಾಗೂ ಇತರೆ ಜಿಲ್ಲೆಗಳ ವಿದ್ಯಾರ್ಥಿಗಳು ಈ ಕಾಲೇಜನ್ನು ಆಯ್ಕೆ ಮಾಡಿಕೊಳ್ಳಲು ಮನವಿ ಮಾಡಿದರು. ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥ ಎನ್.ರಮೇಶ್ ಮಾತನಾಡಿ, ಕಾಲೇಜಿನಲ್ಲಿ ಕ್ರೀಡೆ ಮತ್ತು ಎನ್.ಎಸ್.ಎಸ್.ಚಟುವಟಿಕೆಗಳಿಗೂ ಆದ್ಯತೆ ನೀಡಲಾಗುತ್ತಿದೆ ಎಂದರು. ಹಾಸ್ಟೆಲ್ ಸೌಲಭ್ಯ :: ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕಾಲೇಜು ಆವರಣದಲ್ಲಿ ಬಾಲಕರು ಮತ್ತು ಬಾಲಕಿಯರಿಗೆ ಪ್ರತ್ಯೇಕ ವಸತಿನಿಲಯ ಸೌಲಭ್ಯಗಳಿದ್ದು ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ. ಗೋಷ್ಠಿಯಲ್ಲಿ ಕಂಪ್ಯೂಟರ್ ವಿಭಾಗದ ಮುಖ್ಯಸ್ಥ ಹಾಗೂ ಸಹ ಪ್ರಾಧ್ಯಾಪಕ ಡಾ. ಎಸ್.ರಂಗನಾಥ್, ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥ ಎನ್.ರಮೇಶ್, ಕಂಪ್ಯೂಟರ್ ವಿಭಾಗದ ಸಂಪನ್ಮೂಲ ಶಿಕ್ಷಕ ಜಿ.ಶ್ರೀನಾಥ್, ಕಛೇರಿಯ ಅಧೀಕ್ಷಕರಾದ ಎಚ್.ಎ.ರೂಪಾ, ಎಂ.ಮಂಜು ಇದ್ದರು. ಕಾಲೇಜಿನ ಮಾಹಿತಿಗಾಗಿ ಸಂಪರ್ಕಕ್ಕೆ: : ಕಾಲೇಜಿನ ಫೋನ್ ನಂಬರ್-08276 298230, ಪ್ರಾಂಶುಪಾಲರು ಡಾ. ಕೆ.ಐ ಪರಶಿವಮೂರ್ತಿ -9449 624 417, ಡಾ. ಎನ್ ಎಸ್ ಸತೀಶ್-944 810 1220, ಡಾ. ಸೀನಪ್ಪ-8660 857 379 , ಡಾ. ರಮೇಶ್ .ಎನ್ -90359 84527 , ಶ್ರೀನಾಥ್ ಜಿ – 944 866 1470, ರೂಪ ಎಚ್ ಎ.-916 425 802, ಮಂಜು ಎಂ-77605 003 79, ಸುಮಂತ್ .ಕೆ.ವಿ. -8147887719. ಈ ನಂಬರ್ ಗಳನ್ನು ಸಂಪರ್ಕಿಸಲು ಕೋರಿದೆ. ಮಾಹಿತಿ ಪತ್ರ ಬಿಡುಗಡೆ :: ಕುಶಾಲನಗರ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಪರಶಿವಮೂರ್ತಿ ಪ್ರಸಕ್ತ ಸಾಲಿನ ಪ್ರಥಮ ವರ್ಷದ ಬಿ.ಇ.ಕೋರ್ಸ್ ನ ಮಾಹಿತಿ ಪತ್ರವನ್ನು ಬಿಡುಗಡೆಗೊಳಿಸಿದರು.











