
ಮಡಿಕೇರಿ ಜೂ.16 NEWS DESK : ಶ್ರೀ ಕಾಟೂರ್ ನಾರಾಯಣನ್ ನಂಬ್ಯಾರ್ ಸ್ಮಾರಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಕರಿಕೆ ಗ್ರಾಮ ಪಂಚಾಯತ್ ಹಾಗೂ ಅರಣ್ಯ ಇಲಾಖೆಯ ಜಂಟಿ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಶಾಲಾ ಆವರಣದಲ್ಲಿ ಗಿಡ ನೆಟ್ಟು ಪರಿಸರ ಜಾಗೃತಿ ಮೂಡಿಸಿದರು. ಗ್ರಾ.ಪಂ ಅಧ್ಯಕ್ಷ ಎನ್.ಬಾಲಚಂದ್ರನ್ ನಾಯರ್ ಗಿಡ ನೆಟ್ಟು ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭ ವಲಯ ಅರಣ್ಯಾಧಿಕಾರಿ ಪರಶುರಾಮ, ಗ್ರಾ ಪಂ ಅಭಿವೃದ್ಧಿ ಅಧಿಕಾರಿ ಪಿ.ಪಿ.ಗಣಪತಿ, ಶಾಲಾ ಶಿಕ್ಷಕ ವೃಂದ, ವಿದ್ಯಾರ್ಥಿಗಳು, ಮತ್ತು ಸಿಬ್ಬಂದಿ ವರ್ಗ ಹಾಜರಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಯಶೋಧ ಸ್ವಾಗತಿಸಿದರು. ಅರಣ್ಯ ಇಲಾಖೆ ವತಿಯಿಂದ ಶಾಲಾ ಮಕ್ಕಳಿಗೆ ಹಣ್ಣಿನ ಗಿಡವನ್ನು ವಿತರಿಸಲಾಯಿತು.










