
ಮಡಿಕೇರಿ ಜೂ.17 NEWS DESK : ಕರಡಿಗೋಡು ಗ್ರಾಮದ ಹೊಳೆಕೆರೆ ರಸ್ತೆ ಕಾವೇರಿ ನದಿ ಪ್ರವಾಹದಿಂದ ಸಂಪರ್ಕ ಕಡಿತಗೊಂಡಿದ್ದು, ಬದಲಿ ರಸ್ತೆ ವ್ಯವಸ್ಥೆ ಕಲ್ಪಿಸಲಾಗಿದೆ. ಸ್ಥಳಕ್ಕೆ ಕಂದಾಯ ಪರಿವೀಕ್ಷಕರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಾರ್ವಜನಿಕರು ಅಪಾಯದ ಸ್ಥಳಗಳಿಗೆ ತೆರಳದಂತೆ ಹಾಗೂ ಆ ಭಾಗದ ಜನರಿಗೆ ಕಾಳಜಿ ಕೇಂದ್ರಕ್ಕೆ ತೆರಳಲು ಸೂಚನೆ ನೀಡಿದರು.










