
ಮಡಿಕೇರಿ ಜೂ.17 NEWS DESK : ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಣಿವೆ ಶ್ರೀ ರಾಮಲಿಂಗೇಶ್ವರ ದೇವಾಲಯದ ಸಮೀಪದಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ತೂಗು ಸೇತುವೆ ಅಪಾಯದ ಅಂಚಿನಲ್ಲಿದ್ದು, ತಹಶಿಲ್ದಾರರಾದ ಕಿರಣ್ ಗೌರಯ್ಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಳೆ ಹೆಚ್ಚಿರುವುದರಿಂದ ಸೇತುವೆಯಲ್ಲಿ ಪ್ರವಾಸಿಗರು ತೆರಳದಂತೆ ರಾಮೇಶ್ವರ ದೇವಾಲಯದ ಬಳಿಗೆ ಹೋಗುವ ಗೇಟ್ ಗೆ ಬೀಗ ಅಳವಡಿಸಲಾಯಿತು.










