Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಪ್ರೋತ್ಸಾಹಧನಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ*
ಇತ್ತೀಚಿನ ಸುದ್ದಿಗಳು

*ಪ್ರೋತ್ಸಾಹಧನಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ*

June 18, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜೂ.18 NEWS DESK : ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಇಲಾಖಾ ವತಿಯಿಂದ ನೀಡಲಾಗುವ ಪ್ರೋತ್ಸಾಹಧನ ಮಂಜೂರಾತಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.   ಪ್ರೋತ್ಸಾಹಧನ ವಿವರ: ದ್ವಿತೀಯ ಪಿಯುಸಿ ರೂ.20 ಸಾವಿರ, ಪದವಿ ರೂ.25 ಸಾವಿರ, ಯಾವುದೇ ಪೋಸ್ಟ್ ಗ್ರ್ಯಾಜ್ಯುವೇಟ್ ಕೋರ್ಸ್ ಎಂ.ಎ, ಎಂ.ಎಸ್ಸಿ, ಇತ್ಯಾದಿ ರೂ.30 ಸಾವಿರ ಮತ್ತು ಕೃಷಿ, ಎಂಜಿನಿಯರಿಂಗ್, ವೆಟರ್ನರಿ, ಮೆಡಿಸಿನ್ ರೂ.35 ಸಾವಿರ.  ಅರ್ಹತೆ: ವಿದ್ಯಾರ್ಥಿಗಳು ದ್ವಿತೀಯ, ಅಂತಿಮ ವರ್ಷದ ಪಿಯುಸಿಯನ್ನು ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿರಬೇಕು. ಸಿಬಿಎಸ್‍ಸಿ ಮತ್ತು ಐಸಿಎಸ್‍ಇ ವತಿಯಿಂದ ನಡೆಸಲಾಗುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆಯಾದವರೂ ಸಹ ಈ ಯೋಜನೆಯಡಿಯಲ್ಲಿ ಪ್ರೋತ್ಸಾಹಧನ ಪಡೆಯಲು ಅರ್ಹರಿರುತ್ತಾರೆ.  ಪದವಿ, ಸ್ನಾತಕೋತ್ತರ ಪದವಿ, ಕೃಷಿ, ಪಶುಸಂಗೋಪನೆ, ಎಂಜಿನಿಯರಿಂಗ್, ಮೆಡಿಕಲ್ ಕೋರ್ಸುಗಳಿಗೆ ಸಂಬಂಧಿಸಿದಂತೆ ಪ್ರತಿ ವರ್ಷ ಪ್ರಥಮ ಪ್ರಯತ್ನದಲ್ಲಿ ಪಾಸಾಗಿರಬೇಕು. ಅಂತಿಮ ವರ್ಷದ ತರಗತಿಯಲ್ಲಿ ಪ್ರಥಮ ದರ್ಜೆಯಲ್ಲಿ ಪಾಸಾಗಿರಬೇಕು. ಈ ಕೋರ್ಸ್‍ಗಳಿಗೆ ಸೆಮಿಸ್ಟರ್ ಪದ್ದತಿ ಇದ್ದಲ್ಲಿ ಎಲ್ಲಾ ಸೆಮಿಸ್ಟರ್‍ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪಾಸಾಗಿರಬೇಕು ಮತ್ತು ಅಂತಿಮ ವರ್ಷದ ತರಗತಿಯಲ್ಲಿ ಪ್ರಥಮ ದರ್ಜೆಯಲ್ಲಿ ಪಾಸಾಗಿರಬೇಕು. ಎಲ್ಲಾ ಕೋರ್ಸುಗಳಲ್ಲಿ ಪ್ರತಿ ವರ್ಷದ ಪರೀಕ್ಷೆ ಅಥವಾ ಸೆಮಿಸ್ಟರ್‍ಗಳಲ್ಲಿ ಕಂಪಾರ್ಟ್‍ಮೆಂಟಲ್/ ಕ್ಯಾರಿ ಓವರ್ ಸಿಸ್ಟಮ್‍ರಡಿ ಪಾಸಾಗಿದ್ದರೆ ಅಂತಹವರು ಬಹುಮಾನ ಹಣ ಪಡೆಯಲು ಅರ್ಹರಿರುವುದಿಲ್ಲ. ಕರ್ನಾಟಕ ರಾಜ್ಯದ ಪರಿಶಿಷ್ಟ ವರ್ಗಗಳ ವಿದ್ಯಾರ್ಥಿಗಳು ಈ ಕೋರ್ಸುಗಳನ್ನು ಹೊರ ರಾಜ್ಯಗಳಲ್ಲಿ ವ್ಯಾಸಂಗ ಮಾಡಿದ್ದರೂ ಸಹ ಅರ್ಹರಾಗಿರುತ್ತಾರೆ. ಆದರೆ ಹೊರ ದೇಶಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಈ ಯೋಜನೆಯಡಿ ಬಹುಮಾನ ಹಣ ಪಡೆಯಲು ಅರ್ಹರಲ್ಲ.  ರಾಜ್ಯ, ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವ ವಿದ್ಯಾಲಯಗಳಡಿ ಬರುವ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡಿದ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಸ್ವಾಯತ್ತ ವಿದ್ಯಾಸಂಸ್ಥೆಗಳಿಗೆ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಈ ಯೋಜನೆಗೆ ಅರ್ಹರಿರುತ್ತಾರೆ. ಸರ್ಕಾರದಿಂದ ಮಾನ್ಯತೆ ಪಡೆಯದಿರುವ ವಿದ್ಯಾ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಈ ಯೋಜನೆಯಡಿ ಅರ್ಹರಿರುವುದಿಲ್ಲ.  ವಿದ್ಯಾರ್ಥಿಯು ವ್ಯಾಸಂಗ ಮಾಡಿದ ಶೈಕ್ಷಣಿಕ ಸಂಸ್ಥೆ ಯಾವ ಜಿಲ್ಲೆಯಲ್ಲಿ ಇರುತ್ತದೆಯೋ ಅದೇ ಜಿಲ್ಲೆಯ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಇವರಿಗೆ ಅರ್ಜಿ ಸಲ್ಲಿಸಬೇಕು. ಹೊರ ರಾಜ್ಯಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ನೇಟಿವ್ ಜಿಲ್ಲೆಯಲ್ಲಿ ಮಾತ್ರ ಅರ್ಜಿ ಸಲ್ಲಿಸಬೇಕು.  ಆನ್‍ಲೈನ್ ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳು: ದ್ವಿತೀಯ ಪಿಯುಸಿಗೆ ಅಭ್ಯರ್ಥಿಯ ಭಾವಚಿತ್ರ, ದ್ವಿತೀಯ ಪಿಯುಸಿ ಅಂಕಪಟ್ಟಿ, ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಆಧಾರ್ ಪ್ರತಿ, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ ಮತ್ತು ಬ್ಯಾಂಕ್ ಪಾಸ್ ಪುಸ್ತಕ ಹಾಗೂ ಪದವಿ, ಸ್ನಾತಕೋತ್ತರ ಪದವಿ, ಕೃಷಿ, ಪಶುಸಂಗೋಪನೆ, ಎಂಜಿನಿಯರಿಂಗ್, ಮೆಡಿಕಲ್  ಅಭ್ಯರ್ಥಿಯ ಭಾವಚಿತ್ರ, ಎಲ್ಲಾ ಸೆಮ್‍ಗಳ ಅಂಕಪಟ್ಟಿ, ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಆಧಾರ್ ಪ್ರತಿ, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ ಮತ್ತು ಬ್ಯಾಂಕ್ ಪಾಸ್ ಪುಸ್ತಕ.  ವಿದ್ಯಾರ್ಥಿಗಳು www.tw.kar.nic.in ನಲ್ಲಿ ಆನ್‍ಲೈನ್ ಅರ್ಜಿ ಸಲ್ಲಿಸುವಾಗ ಯಾವುದಾದರೂ ತಾಂತ್ರಿಕ ತೊಂದರೆಯಾದಲ್ಲಿ ಇಲಾಖೆಯ ಟೋಲ್‍ಫ್ರೀ ದೂ.ಸಂ.080-22634300, 080-22353757 ಅಥವಾ ಸಹಾಯಕ ನಿರ್ದೇಶಕರು(ಗ್ರೇಡ್-2) ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ ಅವರ ದೂ.ಸಂ. 9480843156 ಮತ್ತು 08276-281115 ನ್ನು ಸಂಪರ್ಕಿಸಬಹುದು ಎಂದು ಸೋಮವಾರಪೇಟೆ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Article*ನಾಪೋಕ್ಲುವಿನಲ್ಲಿ ವರುಣನ ಆರ್ಭಟ : ಜನ ಜೀವನ ಅಸ್ತವ್ಯಸ್ತ*
Next Article *ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ*

Related Posts

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ಸತತವಾಗಿ ಏರಿಕೆ ಕಂಡು ಆಭರಣ ಪ್ರಿಯರಲ್ಲಿ ಆತಂಕ ಮೂಡಿಸಿದ್ದ ಚಿನ್ನದ ದರದಲ್ಲಿ ಇಂದು ಕೊಂಚ…

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.