Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 
  • *ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*
  • *ಪೊನ್ನಂಪೇಟೆ ಮತ್ತು ಶ್ರೀಮಂಗಲ : ಮಾ.26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮಾ.27 ರಂದು ಕೂಡಿಗೆಯಲ್ಲಿ ವೃತ್ತಿ ಶಿಕ್ಷಣ ಪ್ರದರ್ಶನ, ವೃತ್ತಿ ಮಾರ್ಗದರ್ಶನ*
  • *ಏ.7 ರಿಂದ 30 ರವರೆಗೆ ಬೇಸಿಗೆ ತರಬೇತಿ ಶಿಬಿರ*
  • *ಮಡಿಕೇರಿಯಲ್ಲಿ ದೇವರ ದಾಸಿಮಯ್ಯ ಜಯಂತಿ :  ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿ : ಟಿ.ಕೆ.ಪಾಂಡುರಂಗ*
  • *ಕೊಡಗು ಪ್ರೆಸ್ ಕ್ಲಬ್ ಕ್ರಿಕೆಟ್ ಪ್ರೀಮಿಯರ್ ಲೀಗ್-4 : ಮೀಡಿಯಾ ಚಾಲೆಂಜರ್ಸ್ ತಂಡ ಚಾಂಪಿಯನ್*
  • *ಕೆ.ಜಿ.ಬೋಪಯ್ಯರಿಂದ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ : ಕಾಂಗ್ರೆಸ್ಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ : ಪರಮೇಶ್ವರ್ ಅಸಮಾಧಾನ*
  • *ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ ತೆರೆ ಮಹೋತ್ಸವ*
  • *ಕಾಸ್ಮೋಪಾಲಿಟನ್ ಕ್ಲಬ್ ಅಧ್ಯಕ್ಷರಾಗಿ ರತನ್ ತಮ್ಮಯ್ಯ ಆಯ್ಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸುಂಟಿಕೊಪ್ಪ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸುಂಟಿಕೊಪ್ಪ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣೆ*

ಜೂನ್ 20, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸುಂಟಿಕೊಪ್ಪ ಜೂ.19 NEWS DESK : ನಮ್ಮ ಕಾಲದಲ್ಲಿ ಶಿಕ್ಷಣಕ್ಕೆ ಪೋಷಕರೇ ಒತ್ತು ನೀಡಬೇಕಾಗಿತ್ತು. ಆದರೆ ಇಂದಿನ ಕಾಲಘಟ್ಟದಲ್ಲಿ ಪ್ರತಿಯೊಂದು ಮಗು ಶಿಕ್ಷಣವನ್ನು ಪಡೆಯಬೇಕೆಂಬ ನಿಯಮದಡಿಯಲ್ಲಿ ಸರಕಾರ ಪಠ್ಯ ಪುಸ್ತಕ ಹಾಗೂ ದಾನಿಗಳು ನೋಟ್ ಪುಸ್ತಕಗಳನ್ನು ವಿತರಿಸುವ ಮೂಲಕ ಶಿಕ್ಷಣಕ್ಕೆ ಒತ್ತು ನೀಡುತ್ತಿರುವುದು ಆಶಾದಾಯಕ ವಿಚಾರ. ಮಕ್ಕಳು ಸವಲತ್ತುಗಳನ್ನು ಪಡೆದುಕೊಂಡು ಉತ್ತಮ ಶಿಕ್ಷಣದತ್ತ ಗಮನ ಹರಿಸುವಂತೆ ಸುಂಟಿಕೊಪ್ಪ ಗ್ರೇಡ್ 1 ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಆರ್.ಸುನಿಲ್‍ಕುಮಾರ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಗದ್ದೆಹಳ್ಳ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸುಂಟಿಕೊಪ್ಪ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಪ್ರೌಢಶಾಲೆ ಪದವಿ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ವತಿಯಿಂದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹಾಗೂ ದಾನಿಗಳಾದ ಪಿ.ಎಂ.ಲತೀಫ್ ಅವರು ನೀಡಿರುವ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು. ಪ್ರತಿಯೊಬ್ಬ ಮಕ್ಕಳು ಶಿಕ್ಷಣದಿಂದ ವಂಚಿತಗೊಳ್ಳದ್ದಂತೆ ಸರಕಾರ ಹಾಗೂ ದಾನಿಗಳು ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವುದು ಉತ್ತಮ ಬೆಳವಣಿಗೆ ಮಕ್ಕಳು ಶಿಕ್ಷಣ ಪಡೆದು ಸಮಾಜದ ಉತ್ತಮ ಪ್ರಜೆಗಳಾಗಿ ಮೂಡಿಬರುವ ಮೂಲಕ ಪೋಷಕರು ಮತ್ತು ತಾವು ಕಲಿತ ಶಾಲೆಯನ್ನು ಉತ್ತುಂಗ ಶಿಖರಕ್ಕೆ ಏರಿಸುವಂತಾಗಬೇಕು. ಶಾಲೆಯಲ್ಲಿ ಹಂತ ಹಂತವಾಗಿ ವಿದ್ಯಾರ್ಥಿಗಳ ಸಂಖ್ಯೆ ಕ್ಷೀಣಿಸುತ್ತಿದೆ. ಸುತ್ತ ಮುತ್ತಲಿನ ಗ್ರಾಮದ ವಿದ್ಯಾರ್ಥಿಗಳ ಭವಿಷ್ಯದ್ ದೃಷ್ಟಿಯಿಂದ ಈ ಗ್ರಾಮದ ಹಿರಿಯರು ಶ್ರಮವಹಿಸಿ ಕಟ್ಟಿಸಿದ ಪ್ರಾಥಮಿಕ ಸರಕಾರಿ ಶಾಲೆಯನ್ನು ಉಳಿಯುವಂತಾಗಬೇಕು. ಶಿಕ್ಷಕರೊಂದಿಗೆ ಪೋಷಕರು, ಗ್ರಾಮಸ್ಥರು ಸಹಕರಿಸುವಂತೆ ಮನವಿ ಮಾಡಿದರು. ಗ್ರಾಮದಲ್ಲಿರುವ ಬಾಲಕರ ವಿದ್ಯಾರ್ಥಿ ನಿಲಯವನ್ನು ಸ್ಥಳಾಂತರಗೊಳಿಸುವ ನಿರ್ಧಾರಕ್ಕೆ ಸರಕಾರ ಬಂದಿದ್ದು, ಈ ಸುಸ್ಸಜಿತವಾದ ವಿದ್ಯಾರ್ಥಿ ನಿಲಯವನ್ನು ಉಳಿಸುವಲ್ಲಿ ಮುಖಂಡರು ಹಾಗೂ ಗ್ರಾಮಸ್ಥರು ಕೈ ಜೋಡಿಸುವಂತೆ ಕರೆ ನೀಡಿದರು. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹಾಗೂ ಪುಸ್ತಕ ವಿತರಣಾ ದಾನಿಗಳಾದ ಪಿ.ಎಂ.ಲತೀಫ್ ಮಾತನಾಡಿ, ಸರಕಾರ ಸೇರಿದಂತೆ ದಾನಿಗಳು ಶಿಕ್ಷಣಕ್ಕೆ ಸಹಾಯಹಸ್ತ ನೀಡುತ್ತಿದ್ದು, ಮಕ್ಕಳು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು. ಮುಂದಿನ ದಿನಗಳಲ್ಲಿಯೂ ಶಿಕ್ಷಣ ಸಂಸ್ಥೆ ಬೇಕಾಗಿರುವ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಮುಂದಾಗುವುದಾಗಿ ಭರವಸೆ ನೀಡಿದರಲ್ಲದೆ. ಬಾಲಕರ ವಿದ್ಯಾರ್ಥಿ ನಿಲಯವನ್ನು ಮುಚ್ಚುತ್ತಿರುವುದ್ದರಿಂದ ಈ ಬಾಗದ ವಿದ್ಯಾರ್ಥಿಗಳಿಗೆ ತೀವ್ರ ಹಿನ್ನಡೆ ಉಂಟಾಗಲಿದೆ. ಸಂಬಂಧಿಸಿದ ಅಧಿಕಾರಿಗಳು ಇತ್ತ ಗಮನಹರಿಸಿ ಈ ವಿದ್ಯಾರ್ಥಿನಿಲಯವನ್ನು ಮುಚ್ಚದಂತೆ ಲತೀಫ್ ಆಗ್ರಹಿಸಿದರು. ಸುಂಟಿಕೊಪ್ಪ ಸರಕಾರಿ ಮಾದರಿ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಅಧ್ಯಕ್ಷ ಎಂ.ಎಸ್.ಸುನಿಲ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾ.ಪಂ. ಉಪಾಧ್ಯಕ್ಷೆ ಶಿವಮ್ಮ ಮಹೇಶ್, ಶಾಲಾ ಎಸ್‍ಡಿಎಂಸಿ ಅಧ್ಯಕ್ಷೆ ಅನಿತಾ, ಗ್ರಾ.ಪಂ.ಮಾಜಿ ಅಧ್ಯಕ್ಷ ಕೆ.ಇ.ಕರೀಂ, ಉಪಾಧ್ಯಕ್ಷ ಪಿ.ಆರ್.ಸುಕುಮಾರ್, ಸುಂಟಿಕೊಪ್ಪ ಸರಕಾರಿ ಮಾದರಿ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಕಾಲೇಜಿನ ಹಳೆಯ ವಿದ್ಯಾರ್ಥಿಗಳಾದ ಆರ್.ಎಚ್.ಶರೀಫ್, ಸಿ.ಮಹೇಂದ್ರ, ಬಿ.ಕೆ.ಮೋಹನ್, ವಾಸು,ಎಸ್.ಪಿ.ಸಂದೀಫ್, ರಜಾಕ್, ಹರೀಶ್, ಅಜೀಜ್, ಶಶಿಕುಮಾರ್ ರೈ,ಶಾಲಾ ಮುಖ್ಯೋಪಾದ್ಯಾಯನಿ ಹೇಮಾವತಿ ಸಹಶಿಕ್ಷಕರು ಹಾಗೂ ಪೋಷಕರು ಉಪಸ್ಥಿತರಿದ್ದರು. ಇದೇ ಸಂದರ್ಭ ಶಾಲಾ ಮಕ್ಕಳಿಗೆ ನೋಟ್ ಪುಸ್ತಕವನ್ನು ವಿತರಿಸಲಾಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 

ಮಾರ್ಚ್ 23, 2026

*ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*

ಮಾರ್ಚ್ 23, 2026

*ಪೊನ್ನಂಪೇಟೆ ಮತ್ತು ಶ್ರೀಮಂಗಲ : ಮಾ.26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮಾರ್ಚ್ 23, 2026

*ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*

ಮಾರ್ಚ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಮಾ.23 NEWS DESK : ಕೊಡಗು ಕ್ರಿಶ್ಚಿಯನ್ ಅಸೋಸಿಯೇಷನ್ ಸಹಯೋಗದಲ್ಲಿ ಕೂರ್ಗ್ ಕ್ಲಿಫ್ ರೆಸಾರ್ಟ್‍ನಲ್ಲಿ ನಡೆದ ಕ್ಲಿಫ್ ಆಫ್…

*ಪೊನ್ನಂಪೇಟೆ ಮತ್ತು ಶ್ರೀಮಂಗಲ : ಮಾ.26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮಾರ್ಚ್ 23, 2026

*ಮಾ.27 ರಂದು ಕೂಡಿಗೆಯಲ್ಲಿ ವೃತ್ತಿ ಶಿಕ್ಷಣ ಪ್ರದರ್ಶನ, ವೃತ್ತಿ ಮಾರ್ಗದರ್ಶನ*

ಮಾರ್ಚ್ 23, 2026

*ಏ.7 ರಿಂದ 30 ರವರೆಗೆ ಬೇಸಿಗೆ ತರಬೇತಿ ಶಿಬಿರ*

ಮಾರ್ಚ್ 23, 2026

*ಮಡಿಕೇರಿಯಲ್ಲಿ ದೇವರ ದಾಸಿಮಯ್ಯ ಜಯಂತಿ :  ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿ : ಟಿ.ಕೆ.ಪಾಂಡುರಂಗ*

ಮಾರ್ಚ್ 23, 2026

*ಕೊಡಗು ಪ್ರೆಸ್ ಕ್ಲಬ್ ಕ್ರಿಕೆಟ್ ಪ್ರೀಮಿಯರ್ ಲೀಗ್-4 : ಮೀಡಿಯಾ ಚಾಲೆಂಜರ್ಸ್ ತಂಡ ಚಾಂಪಿಯನ್*

ಮಾರ್ಚ್ 23, 2026

*ಕೆ.ಜಿ.ಬೋಪಯ್ಯರಿಂದ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ : ಕಾಂಗ್ರೆಸ್ಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ : ಪರಮೇಶ್ವರ್ ಅಸಮಾಧಾನ*

ಮಾರ್ಚ್ 23, 2026

*ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ ತೆರೆ ಮಹೋತ್ಸವ*

ಮಾರ್ಚ್ 23, 2026

*ಕಾಸ್ಮೋಪಾಲಿಟನ್ ಕ್ಲಬ್ ಅಧ್ಯಕ್ಷರಾಗಿ ರತನ್ ತಮ್ಮಯ್ಯ ಆಯ್ಕೆ*

ಮಾರ್ಚ್ 23, 2026

*ಅಡುಗೆ ಅನಿಲ ಬೆಲೆ ಏರಿಕೆ ವಿರೋಧಿಸಿ ಮಡಿಕೇರಿ ನಗರ ಕಾಂಗ್ರೆಸ್ ನಿಂದ ಪ್ರತಿಭಟನೆ*

ಮಾರ್ಚ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.