




ಮಡಿಕೇರಿ ಜೂ.20 NEWS DESK : ಗೋಣಿಕೊಪ್ಪಲುವಿನ ಅಮ್ಮ ಕೊಡವ ಸಮಾಜದ ಸಭಾಂಗಣಕ್ಕೆ ರೂ.2 ಕೋಟಿ ಅನುದಾನದಲ್ಲಿ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ತಡೆಗೋಡೆ ಕಾಮಗಾರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೂಮಿ ಪೂಜೆ ನೆರವೇರಿಸಿದರು. ಬಳಿಕ ಸಮಾಜದ ಪ್ರಮುಖರೊಂದಿಗೆ ಮಾತನಾಡಿದ ಶಾಸಕರು, ಸಮಾಜದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ರೂ.20 ಲಕ್ಷಗಳ ಹೆಚ್ಚುವರಿ ಅನುದಾನ ನೀಡುವುದಾಗಿ ಭರವಸೆ ನೀಡಿದರು. ಈ ಸಂದರ್ಭ ಕೊಡಗು ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಧರ್ಮಜ ಉತ್ತಪ್ಪ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್, ಗೋಣಿಕೊಪ್ಪಲು ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಮೋದ್ ಗಣಪತಿ, ಅಮ್ಮ ಕೊಡವ ಸಮಾಜದ ಅಧ್ಯಕ್ಷ ಬಾನಂಡ ಪೃತ್ಯು, ನಾಳಿಯಮಾಂಡ ಉಮೇಶ್, ಪಂಚಾಯಿತಿ ಉಪಾಧ್ಯಕ್ಷ ಮಂಜುಳ, ಪಕ್ಷದ ಪ್ರಮುಖರು ಅಮ್ಮ ಕೊಡವ ಸಮಾಜದ ಪ್ರಮುಖರು, ಇಲಾಖೆಯ ಅಧಿಕಾರಿಗಳು, ಮತ್ತಿತರರು ಉಪಸ್ಥಿತರಿದ್ದರು. ಈ ಹಿಂದೆ ಅಮ್ಮ ಕೊಡವ ಸಮಾಜದ ಪ್ರಮುಖರು ಶಾಸಕರನ್ನು ಭೇಟಿಯಾಗಿ ತಮ್ಮ ಸಮಾಜದ ಸಭಾಂಗಣಕ್ಕೆ ತಡೆಗೋಡೆ ನಿರ್ಮಿಸಿ ಕೊಡುವಂತೆ ಮನವಿ ಸಲ್ಲಿಸಿದ್ದರು. ಆ ಸಂದರ್ಭದಲ್ಲಿ ಇವರ ಮನವಿಗೆ ಸ್ಪಂದಿಸಿದ್ದ ಶಾಸಕರು ಶೀಘ್ರದಲ್ಲೇ ತಡೆಗೋಡೆಗೆ ಅನುದಾನ ಒದಗಿಸುವುದಾಗಿ ಭರವಸೆ ನೀಡಿದ್ದರು.









