Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಸಚಿವೆ ನಿರ್ಮಲಾ ಸೀತಾರಾಮನ್‌ ರನ್ನು ಭೇಟಿಯಾದ ಸಂಸದ ಯದುವೀರ್ : ಮಹತ್ವದ ಯೋಜನೆಗಳಿಗೆ ನೆರವು ನೀಡುವಂತೆ ಮನವಿ
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ ಭಾರತ

ಸಚಿವೆ ನಿರ್ಮಲಾ ಸೀತಾರಾಮನ್‌ ರನ್ನು ಭೇಟಿಯಾದ ಸಂಸದ ಯದುವೀರ್ : ಮಹತ್ವದ ಯೋಜನೆಗಳಿಗೆ ನೆರವು ನೀಡುವಂತೆ ಮನವಿ

ಜೂನ್ 20, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮೈಸೂರು NEWS DESK ಜೂ.20: ಮೈಸೂರಿನಲ್ಲಿ ಸರ್ವಾಂಗೀಣ ಅಭಿವೃದ್ಧಿಗೆ ಪಣತೊಡಲಾಗಿದ್ದು, ಈ ನಿಟ್ಟಿನಲ್ಲಿ ಸಾಂಸ್ಕೃತಿಕ ರಾಜಧಾನಿಯಲ್ಲಿ ಕೆಲವು ಮಹತ್ವದ ಯೋಜನೆಗಳಿಗೆ ನೆರವು ನೀಡಬೇಕು ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್‌ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದ್ದಾರೆ. ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವರನ್ನು ಭೇಟಿ ಮಾಡಿ, ಮೈಸೂರು ಕ್ಷೇತ್ರದಲ್ಲಿ ಆಗಬೇಕಾಗಿರುವ ಯೋಜನೆಗಳ ಬಗ್ಗೆ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಿದ್ದಾರೆ. ಮೈಸೂರು ವಿಶ್ವವಿದ್ಯಾಲಯದ ಪಾರಂಪರಿಕ ಕಟ್ಟಡಗಳು ಹಾಗೂ ವಿಶೇಷವಾಗಿ ಕೃಷ್ಣರಾಜ ಬೌಲೆವಾರ್ಡ್‌ನಲ್ಲಿರುವ ಕಟ್ಟಡಗಳನ್ನು  ಸಮಗ್ರವಾಗಿ ಪುನಃಸ್ಥಾಪಿಸಬೇಕಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ, ನೆರವು ಬೇಕಾಗಿದೆ ಎಂದು ಸಚಿವರಿಗೆ ಮನವರಿಕೆ ಮಾಡಿಕೊಡಲಾಯಿತು ಎಂದು ತಿಳಿಸಿದ್ದಾರೆ. ಮೈಸೂರು ವಿಶ್ವವಿದ್ಯಾಲಯ ಪಾರಂಪರಿಕ ಕಟ್ಟಡಗಳು ಕರ್ನಾಟಕಕ್ಕೆ ಮಾತ್ರವಲ್ಲದೆ ಇಡೀ ರಾಷ್ಟ್ರಕ್ಕೆ ಐತಿಹಾಸಿಕ, ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಮೌಲ್ಯವನ್ನು ಕೊಟ್ಟಿದೆ. ಮೈಸೂರು ಸಂಸ್ಥಾನದ ಒಡೆಯರ್‌ ಆಳ್ವಿಕೆಯಲ್ಲಿ 20 ನೇ ಶತಮಾನದ ಆರಂಭದಲ್ಲಿ  ನಿರ್ಮಿಸಲಾದ ಈ ಕಟ್ಟಡಗಳು ಆಧುನಿಕ ಶಿಕ್ಷಣಕ್ಕೆ ಮತ್ತು ಭಾರತೀಯ ಪಾರಂಪರಿಕ ಶ್ರೀಮಂತಿಕೆ  ಮೈಸೂರಿನ ಕೊಡುಗೆಗಳಾಗಿವೆ ಎಂದು ವಿವರಿಸಲಾಗಿದೆ ಎಂದು ಸಂಸದರು ಹೇಳಿದ್ದಾರೆ. ಓರಿಯಂಟಲ್ ರಿಸರ್ಚ್ ಇನ್ಸ್ಟಿಟ್ಯೂಟ್, ಯುವರಾಜ ಕಾಲೇಜು, ಮಹಾರಾಜ ಕಾಲೇಜುಗಳು, ವಿದ್ವಾಂಸರು, ಕಲಾವಿದರು ಮತ್ತು ನಾಯಕರನ್ನು ಪೋಷಿಸಿದ ಸಂಸ್ಥೆಗಳಾಗಿ ಇತಿಹಾಸ ಹೊಂದಿದೆ. ಇದನ್ನು ಸಂರಕ್ಷಿಸಬೇಕಾದ ಅಗತ್ಯವಾಗಿದೆ ಎಂದು ಮನವರಿಕೆ ಮಾಡಿಕೊಡಲಾಗಿದೆ ಎಂದು= ಯದುವೀರ್‌ ತಿಳಿಸಿದ್ದಾರೆ. ಇಂಡೋ-ಸಾರ್ಸೆನಿಕ್ ಮತ್ತು ಶಾಸ್ತ್ರೀಯ ಯುರೋಪಿಯನ್ ಶೈಲಿ ಸಮ್ಮಿಲನದ ಈ ಪಾರಂಪರಿಕ ಕಟ್ಟಡಗಳನ್ನು ಸಂರಕ್ಷಿಸಬೇಕಾಗಿದೆ.  ಕೇಂದ್ರ ಬಜೆಟ್ ಅಥವಾ ಇತರ ಸೂಕ್ತ ಕಾರ್ಯವಿಧಾನಗಳ ಮೂಲಕ ಪರಂಪರೆ ಸಂರಕ್ಷಣೆ ಅಥವಾ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳ ಅಡಿಯಲ್ಲಿ ವಿಶೇಷ ಆರ್ಥಿಕ ನೆರವು ನೀಡಿದರೆ ಅನುಕೂಲವಾಗಲಿದೆ ಎಂದು ಕೇಂದ್ರ ಸಚಿವರಿಗೆ ತಿಳಿಸಲಾಯಿತು ಎಂದು ಸಂಸದ ಯದುವೀರ್‌ ಸ್ಪಷ್ಟಪಡಿಸಿದ್ದಾರೆ. *ಕಸ್ಟಮ್ಸ್‌ ಕಚೇರಿ ಅಗತ್ಯವಿದೆ* ನಮ್ಮ ಮೈಸೂರಿನ ಕಡಕೋಳ ಮಲ್ಟಿ ಮಾಡಲ್ ಲಾಜಿಸ್ಟಿಕ್ಸ್ ಪಾರ್ಕ್ ಅನ್ನು ಪೂರ್ಣಗೊಳಿಸಲಾಗಿದ್ದು, ಇದೊಂದು ಉತ್ತಮ ಸೌಲಭ್ಯವಾಗಿದೆ. ಕಸ್ಟಮ್ಸ್ ಕ್ಲಿಯರೆನ್ಸ್‌ಗೆ ಅನುಕೂಲವಾಗುವಂತೆ ಕಚೇರಿಯನ್ನು ಸ್ಥಾಪಿಸಲು ವಿನಂತಿ ಮಾಡಲಾಯಿತು ಎಂದು ಸಂಸದರು ತಿಳಿಸಿದ್ದಾರೆ. ಇದೇ ಕರಿಮೆಣಸಿನ ಮೇಲಿನ 18% ಜಿಎಸ್‌ಟಿಯನ್ನು ತೆಗೆದುಹಾಕಿದ್ದಕ್ಕಾಗಿ ಸಮಸ್ತ ಕೊಡಗು ಜಿಲ್ಲೆಯ ಜನತೆ ಪರವಾಗಿ ಕೇಂದ್ರ ಸಚಿವರಿಗೆ ಧನ್ಯವಾದಗಳನ್ನು ತಿಳಿಸಲಾಯಿತು ಎಂದು ಮಾಹಿತಿ ನೀಡಿದ್ದಾರೆ. ನನ್ನ ಎಲ್ಲಾ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ಹಣಕಾಸು ಸಚಿವರು,  ಆದಷ್ಟು ಬೇಗ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ. ಅತಿ ಶೀಘ್ರದಲ್ಲೇ ಮೈಸೂರಿನಲ್ಲಿ ಇನ್ನಷ್ಟು ಅಭಿವೃದ್ಧಿ ಕಾರ್ಯಗಳು ಅನುಷ್ಠಾನಕ್ಕೆ ಬರಲಿವೆ ಎಂದು ಸಂಸದ ಯದುವೀರ್‌ ವಿವರಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

ಗೋಣಿಕೊಪ್ಪಲು ದಸರಾ ಜನೋತ್ಸವದಲ್ಲಿ ಅ.16ರಂದು ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ; 118 ಕವಿಗಳಿಂದ ಕವನ ವಾಚನ; ಜೆನ್ ಜಿ ಹಾಗೂ ಮಕ್ಕಳ ಕವಿಗೋಷ್ಠಿ ವಿಶೇಷ ಆಕರ್ಷಣೆ

ಅಕ್ಟೋಬರ್ 15, 2026

ಕೊಡಗಿನಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಅಶಾಂತಿಗೆ ಅವಕಾಶ ನೀಡಬಾರದು: ರಾಕೇಶ್ ದೇವಯ್ಯ ; ಎಸ್‌ಐಆರ್ ಪರಿಷ್ಕರಣೆ ವಿರುದ್ಧದ ಪ್ರತಿಭಟನೆಗೆ ಶಾಸಕರ ಬೆಂಬಲವಿದೆಯೇ ಎಂಬುದನ್ನು ಸ್ಪಷ್ಟಪಡಿಸಲು ಆಗ್ರಹ

ಅಕ್ಟೋಬರ್ 15, 2026

ಕಡಗದಾಳು ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಸಮಾರಂಭ

ಅಕ್ಟೋಬರ್ 15, 2026

ಕೊಡಗಿನಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಅಶಾಂತಿಗೆ ಅವಕಾಶ ನೀಡಬಾರದು: ರಾಕೇಶ್ ದೇವಯ್ಯ ; ಎಸ್‌ಐಆರ್ ಪರಿಷ್ಕರಣೆ ವಿರುದ್ಧದ ಪ್ರತಿಭಟನೆಗೆ ಶಾಸಕರ ಬೆಂಬಲವಿದೆಯೇ ಎಂಬುದನ್ನು ಸ್ಪಷ್ಟಪಡಿಸಲು ಆಗ್ರಹ

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ. 15: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಕೊಡಗು ಜಿಲ್ಲೆಯಲ್ಲಿ ಪ್ರತಿಭಟನೆ…

ಕಡಗದಾಳು ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಸಮಾರಂಭ

ಅಕ್ಟೋಬರ್ 15, 2026

ಎಸ್.ಐ.ಆರ್. ಪ್ರಕ್ರಿಯೆ ರದ್ದತಿಗೆ ಆಗ್ರಹಿಸಿ ಮಡಿಕೇರಿಯಲ್ಲಿ ಪ್ರತಿಭಟನೆ; ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಒತ್ತಾಯಿಸಿ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ

ಅಕ್ಟೋಬರ್ 15, 2026

ಸುಂಟಿಕೊಪ್ಪ ಮಲಯಾಳಿ ಸಮಾಜದ 19ನೇ ವರ್ಷದ ಓಣಂ ಆಚರಣೆ; ಸಮಾಜದ ಒಗ್ಗಟ್ಟು ಮತ್ತು ಸಂಘಟನೆ ಎಲ್ಲರಿಗೂ ಮಾದರಿ: ಶಾಸಕ ಡಾ. ಮಂತರ್ ಗೌಡ

ಅಕ್ಟೋಬರ್ 15, 2026

ಸುಂಟಿಕೊಪ್ಪದಲ್ಲಿ ಮಲಯಾಳಿ ಸಮಾಜದಿಂದ 19ನೇ ವರ್ಷದ ಓಣಂ ಆಚರಣೆ

ಅಕ್ಟೋಬರ್ 15, 2026

ಹೊಸತೋಟದಲ್ಲಿ ರಕ್ತದಾನ ಶಿಬಿರ: 30 ಮಂದಿ ರಕ್ತದಾನ

ಅಕ್ಟೋಬರ್ 15, 2026

ಅ.16ರಂದು ಮಕ್ಕಳ ದಸರಾ ಸಂಭ್ರಮ – ಮಕ್ಕಳಿಂದ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಕೊಡ್ಲಿಪೇಟೆಯಲ್ಲಿ ಅ.17ರಂದು ಕಾವೇರಿ ಆರತಿ, ಬಾಗಿನ ಅರ್ಪಣೆ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಅದ್ದೂರಿ ಹನುಮ ಜಯಂತಿ ಆಚರಣೆಗೆ ಪೂರ್ವಸಿದ್ಧತೆ; ಡಿಸೆಂಬರ್ 22ರಂದು ಹನುಮ ಜಯಂತಿ ಆಚರಣೆ; ದಶಮಂಟಪಗಳ ಸಮಿತಿಯಿಂದ ಸಿದ್ಧತೆ

ಅಕ್ಟೋಬರ್ 15, 2026

ನಾಪೋಕ್ಲುವಿನಲ್ಲಿ ಅ. 20ರಂದು 34ನೇ ವರ್ಷದ ಅದ್ಧೂರಿ ಆಯುಧ ಪೂಜೆ; ಅಲಂಕೃತ ವಾಹನಗಳ ಮೆರವಣಿಗೆ, ಸಾಂಸ್ಕೃತಿಕ ಕಾರ್ಯಕ್ರಮ; ನಿವೃತ್ತ ವೈದ್ಯ ಡಾ. ಹೆಚ್.ವಿ. ದೇವದಾಸ್ ಅವರಿಗೆ ಸನ್ಮಾನ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.