


ಸೋಮವಾರಪೇಟೆ ಜೂ.21 NEWS DESK : ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠ, ಹಾಸನ ಮತ್ತು ಕೊಡಗು ಜಿಲ್ಲೆ, ಕೊಡಗು ಪತ್ರಕರ್ತರ ಸಂಘ ತಾಲ್ಲೂಕು ಘಟಕ, ಕೂಡಿಗೆ ಕಳಲೆ ಬಿಜಿಎಸ್ ಸೇವಾಸಂಘ ಮತ್ತು ಶನಿವಾರಸಂತೆ ಭಾರತಿ ವಿದ್ಯಾಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ನಡೆದ ಯುವ ವಿಕಸನ ಕಾರ್ಯಕ್ರಮವನ್ನು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ಹೆಚ್.ಪಿ.ಸಂದೇಶ್ ಉದ್ಘಾಟಿಸಿದರು. ಶನಿವಾರಸಂತೆ ಯಶಸ್ವಿ ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಹಾಸನ ಶಾಖ ಮಠದ ಕಾರ್ಯದರ್ಶಿಗಳಾದ ಶಂಭುನಾಥಸ್ವಾಮೀಜಿ ಅವರ ದಿವ್ಯ ಸಾನಿಧ್ಯ ವಹಿಸಿದ್ದರು. ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಎಚ್.ಟಿ.ಅನಿಲ್, ಸೋಮವಾರಪೇಟೆ ಪತ್ರಕರ್ತರ ಸಂಘದ ಅಧ್ಯಕ್ಷ ಹೆಚ್.ಆರ್.ಹರೀಶ್ ಕುಮಾರ್, ಉಪಾಧ್ಯಕ್ಷ ಎಸ್.ಎ.ಮುರುಳೀಧರ್, ಕಾರ್ಯದರ್ಶಿ ಡಿ.ಪಿ.ಲೋಕೇಶ್, ಕಳಲೆ-ಕೂಡಿಗೆ ಬಿಜಿಎಸ್ ಸೇವಾಸಂಘದ ಅಧ್ಯಕ್ಷ ಆರ್.ಪಿ.ಲಕ್ಷ್ಮಣ್, ಉಪಾಧ್ಯಕ್ಷ ಕಳಲೆ ಕೃಷ್ಣೇಗೌಡ, ಭಾರತೀ ವಿದ್ಯಾಸಂಸ್ಥೆಯ ಅಧ್ಯಕ್ಷ ಜಗನ್‍ಪಾಲ್ ಪಾಲ್ಗೊಂಡಿದ್ದರು. ಒಂದು ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡು ಗಮನ ಸೆಳೆದರು.









