ಸೋಮವಾರಪೇಟೆ ಜೂ.23 NEWS DESK : ಹರಪಳ್ಳಿ ರವೀಂದ್ರ ಅಭಿಮಾನಿಗಳ ಸಂಘದ ವತಿಯಿಂದ ಉದ್ಯಮಿ ಹಾಗೂ ದಾನಿಗಳಾದ ಹರಪಳ್ಳಿ ರವೀಂದ್ರ ಹುಟ್ಟು ಹಬ್ಬದ ಅಂಗವಾಗಿ ತಾಲ್ಲೂಕು ಸರ್ಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣುಹಂಪಲು ವಿತರಿಸಲಾಯಿತು. ಸಂಘದ ಅಧ್ಯಕ್ಷ ಹೆಚ್.ಎ.ನಾಗರಾಜ್, ರವೀಂದ್ರ, ಹೆಚ್.ಬಿ.ರಾಜಪ್ಪ, ಒಕ್ಕಲಿಗರ ಯುವವೇದಿಕೆ ಅಧ್ಯಕ್ಷ ಕೆ.ಬಿ.ಸುರೇಶ್ ಇದ್ದರು.











