
ವಿರಾಜಪೇಟೆ ಜೂ.23 NEWS DESK : ಸಂತ ಅನ್ನಮ್ಮ ಪ್ರೌಢ ಶಾಲೆಯ ಎನ್‍ಸಿಸಿ ಘಟಕದ ವತಿಯಿಂದ ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ರೆ.ಫಾ.ಜೇಮ್ಸ್ ಡೊಮಿನಿಕ್ ಉದ್ಘಾಟಿಸಿ, ಯೋಗದ ಮಹತ್ವದ ಬಗ್ಗೆ ತಿಳಿಸಿದರು. ಯೋಗ ಗುರುಗಳಾದ ಸವಿತಾ ಉತ್ತಪ್ಪ ಹಾಗೂ ಉತ್ತಮನ್ ವಿದ್ಯಾರ್ಥಿಗಳಿಗೆ ಯೋಗಾಭ್ಯಾಸವನ್ನು ಮಾಡಿಸಿ ಯೋಗದ ಪಾತ್ರವನ್ನು ವಿವರಿಸಿದರು. ವಿವಿಧ ಆಸನಗಳ ಪ್ರಾತ್ಯಕ್ಷಿಕೆಯನ್ನು ನಡೆಸಿಕೊಟ್ಟರು. ಈ ಸಂದರ್ಭ ಪ್ರೌಢ ಶಾಲಾ ಮುಖ್ಯ ಶಿಕ್ಷಕ ಬೆನ್ನಿ ಜೋಸೆಫ್, ಏರ್ ಫೋರ್ಸ್ ಎನ್ ಸಿ ಸಿ ಅಧಿಕಾರಿ ಅಬ್ದುಲ್ ಮುನೀರ್, ಆರ್ಮಿ ಎನ್ ಸಿ ಸಿ ಘಟಕದ ಅಧಿಕಾರಿ ಸಹನಾ, ಶಿಕ್ಷಕರಾದ ರೂಪ, ಲಕ್ಷ್ಮೀಶ ಇತರರು ಹಾಜರಿದ್ದರು.









