ಮಡಿಕೇರಿ ಜೂ.24 NEWS DESK : ಬೇಟೋಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೇಟೋಳಿ ಗುಂಡಿಕೆರೆಯ ಮಸೀದಿ ಮುಂಭಾಗದಿಂದ ಬೇಟೋಳಿ ಸರ್ಕಾರಿ ಶಾಲೆಯವರೆಗೆ ಮತ್ತು ಸ್ಥಳೀಯ ಅಲ್ಪಸಂಖ್ಯಾತ ಕುಟುಂಬಸ್ಥರುಗಳ ಮನೆಗಳಿಗೆ ಹಾದು ಹೋಗುವ ರಸ್ತೆ ಕಾಮಗಾರಿ ಪೂರ್ಣಗೊಂಡಿದ್ದು, ಶಾಸಕರ ಸ್ಪಂದನೆಗೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ರಸ್ತೆ ಅಭಿವೃದ್ಧಿಗೆ ಗ್ರಾಮಸ್ಥರು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಮನವಿ ಸಲ್ಲಿಸಿದ್ದರು. ಇದೀಗ ಕ್ಷೇತ್ರದ ನಿರಂತರ ಅಭಿವೃದ್ಧಿಯ ಭಾಗವಾಗಿ, ಅಲ್ಪಸಂಖ್ಯಾತ ಅಭಿವೃದ್ಧಿ ಇಲಾಖೆ ಅನುದಾನ ರೂ.30 ಲಕ್ಷದ ಅನುದಾನದಲ್ಲಿ ಸುಸಜ್ಜಿತ ಕಾಂಕ್ರೀಟ್ ರಸ್ತೆ ನಿರ್ಮಾಣವಾಗಿದೆ. ಗ್ರಾಮಸ್ಥರ ಮನವಿ ಸ್ಪಂದಿಸಿದ ಶಾಸಕ ಎ.ಎಸ್.ಪೊನ್ನಣ್ಣ ಹಾಗೂ ರಸ್ತೆ ನಿರ್ಮಾಣಕ್ಕೆ ಅನುದಾನ ತರುವಲ್ಲಿ ಸಹಕರಿಸಿದ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಹನೀಫ್ ಪಿ.ಎ, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಕೋಳುಮಂಡ ರಫೀಕ್ ಹಾಗೂ ವಿಶೇಷ ಮುತುವರ್ಜಿ ವಹಿಸಿ ಕಾಮಗಾರಿ ಪೂರ್ಣಗೊಳಿಸಲು ಸಹಕರಿಸಿದ ಬೇಟೋಳಿ ಗ್ರಾಮ ಪಂಚಾಯಿತಿಯ ವಾರ್ಡ್ 1 ರ ಸದಸ್ಯ ಗುಂಡಿಕೆರೆಯ ಎಂ.ಎಂ.ರಜಾಕ್ ಅವರಿಗೆ ಬೇಟೋಳಿ ಗುಂಡಿಕೆರೆಯ ಗ್ರಾಮಸ್ಥರು ಕೃತಜ್ಞತೆ ಸಲ್ಲಿಸಿದ್ದಾರೆ.












