
ನವದೆಹಲಿ ಜೂ.24 NEWS DESK : ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಅವರನ್ನು ಭೇಟಿಯಾಗಿ ಚರ್ಚಿಸಿದರು. ಈ ಸಂದರ್ಭ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಸಮಾಜ ಕಲ್ಯಾಣ ಸಚಿವ ಹೆಚ್.ಸಿ ಮಹದೇವಪ್ಪ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ, ವಿಧಾನಸಭೆಯ ಮುಖ್ಯ ಸಚೇತಕ ಅಶೋಕ್ ಪಟ್ಟಣ್, ಜೇವರ್ಗಿ ಶಾಸಕರು ಹಾಗೂ ಕೆಕೆಆರ್‌ಡಿಬಿ ಅಧ್ಯಕ್ಷ ಡಾ.ಅಜಯ್ ಸಿಂಗ್, ಬಾಲ ಭವನ ಸೊಸೈಟಿ ಅಧ್ಯಕ್ಷ ಬಿ.ಆರ್.ನಾಯ್ಡು ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.










