

ಮಡಿಕೇರಿ ಜೂ.25 NEWS DESK : ಕೊಡಗು ಪತ್ರಕತ೯ರ ಸಂಘ ವತಿಯಿಂದ ಜು.1 ರಂದು ಮಡಿಕೇರಿಯ ಪತ್ರಿಕಾಭವನದಲ್ಲಿ ಪತ್ರಿಕಾ ದಿನಾಚರಣೆ ಮತ್ತು ವಾಷಿ೯ಕ ಪ್ರಶಸ್ತಿ ಪ್ರಧಾನ ಸಮಾರಂಭ ಆಯೋಜಿಸಲಾಗಿದೆ ಎಂದು ಸಂಘದ ಪ್ರಧಾನ ಕಾಯ೯ದಶಿ೯ ಸುರೇಶ್ ಬಿಳಿಗೇರಿ ತಿಳಿಸಿದ್ದಾರೆ. ನಗರದ ಪತ್ರಿಕಾಭವನ ಟ್ರಸ್ಟ್ ಸಭಾಂಗಣದಲ್ಲಿ ಮಂಗಳವಾರ ಬೆಳಗ್ಗೆ 10.30 ಗಂಟೆಗೆ ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ. ಅಧ್ಯಕ್ಷತೆಯಲ್ಲಿ ಆಯೋಜಿತ ಪತ್ರಿಕಾ ದಿನಾಚರಣೆ ಸಮಾರಂಭವನ್ನು ಸಮಾಜಸೇವಕ ತೇಲಪಂಡ ಶಿವಕುಮಾರ್ ನಾಣಯ್ಯ ಉದ್ಧಾಟಿಸಲಿದ್ದಾರೆ. ಕೊಡಗು ಜಿಲ್ಲಾ ವಾತಾ೯ ಮತ್ತು ಸಾವ೯ಜನಿಕ ಸಂಪಕ೯ ಇಲಾಖೆಯ ಸಹಾಯಕ ನಿದೇ೯ಶಕ ಚಿನ್ನಸ್ವಾಮಿ, ಹೊಸ ದಿಗಂತ ಪತ್ರಿಕೆಯ ಜಿಲ್ಲಾ ವರದಿಗಾರ ಕೆ. ತಿಮ್ಮಪ್ಪ, ಕೊಡಗು ಪತ್ರಕತ೯ರ ಸಂಘದ ಸ್ಥಾಪಕ ಅಧ್ಯಕ್ಷ ಎಸ್.ಎ. ಮುರಳೀಧರ್, ಸಂಘದ ಕ್ಷೇಮಾಭಿವೖದ್ದಿ ಸಮಿತಿಯ ಅಧ್ಯಕ್ಷ ಜಿ.ವಿ. ರವಿಕುಮಾರ್ ಕಾಯ೯ಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದೇ ಕಾಯ೯ಕ್ರಮದಲ್ಲಿ ಕೊಡಗು ಪತ್ರಕತ೯ರ ಸಂಘದ 2024 ನೇ ಸಾಲಿನ ವಾಷಿ೯ಕ ದತ್ತಿ ನಿಧಿ ಪ್ರಶಸ್ತಿಗಳನ್ನು ಪ್ರಧಾನ ಮಾಡಲಾಗುತ್ತದೆ. ಅಂತೆಯೇ ಸಂಘದ ಸದಸ್ಯರಿಗೆ ಗುರುತಿನ ಕಾಡ್೯ಗಳನ್ನೂ ನೀಡಲಾಗುತ್ತದೆ ಎಂದು ಪ್ರಕಟಣೆಯಲ್ಲಿ ಸುರೇಶ್ ಬಿಳಿಗೇರಿ ಮಾಹಿತಿ ನೀಡಿದ್ದಾರೆ.












