Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಏಳು ಬಿಲ್ಲುಗಳನ್ನು ಅನುಮೋದಿಸಲು ರಾಷ್ಟ್ರಪತಿಗಳಲ್ಲಿ ಮನವಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಇತ್ತೀಚಿನ ಸುದ್ದಿಗಳು ಕರ್ನಾಟಕ

ಏಳು ಬಿಲ್ಲುಗಳನ್ನು ಅನುಮೋದಿಸಲು ರಾಷ್ಟ್ರಪತಿಗಳಲ್ಲಿ ಮನವಿ : ಮುಖ್ಯಮಂತ್ರಿ ಸಿದ್ದರಾಮಯ್ಯ

ಜೂನ್ 25, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ನವದೆಹಲಿ ಜೂ.25 NEWS DESK : ರಾಷ್ಟ್ರಪತಿಗಳಿಂದ ಅನುಮೋದನೆಯಾಗದಿರುವ  ಏಳು ಬಿಲ್ಲುಗಳನ್ನು  ಬಗ್ಗೆ ರಾಷ್ಟ್ರಪತಿಗಳನ್ನು ಇಂದು ಭೇಟಿ ಮಾಡಿ ಚರ್ಚಿಸಲಾಗಿದೆ. ಬಿಲ್ಲುಗಳನ್ನು ಸಂಬಂಧಪಟ್ಟ ಇಲಾಖೆಗಳಿಗೆ ಕಳುಹಿಸಲಾಗಿದೆ ಎಂದು ಅವರು  ತಿಳಿಸಿದ್ದು, ಅವುಗಳನ್ನು  ತರಿಸಿ ಅನುಮೋದನೆ ನೀಡಬೇಕೆಂದು ರಾಷ್ಟ್ರಪತಿಗಳಿಗೆ ಮನವಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ,  ವಾರದ ಹಿಂದೆ 16 ನೇ ಹಣಕಾಸು ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರನ್ನು ಭೇಟಿ ಮಾಡಿದ್ದು, ಎರಡನೇ ಹೆಚ್ಚುವರಿ ಮನವಿಯನ್ನು ಕೊಟ್ಟು, 14 ನೇ ಹಣಕಾಸು ಆಯೋಗದಲ್ಲಿ 4.7% ಅಡ್ಡವಾಗಿ  ತೆರಿಗೆ ಹಂಚಿಕೆಯಾಗಿತ್ತು. 15 ನೇ ಹಣಕಾಸು ಆಯೋಗದಲ್ಲಿ  3.6% ಆಗಿದೆ. ಶೇಕಡಾ  1.1% ಕಡಿಮೆಯಾಗಿದ್ದು, ಇದು ಒಟ್ಟಾರೆ  ಅನುದಾನ ಹಂಚಿಕೆಯಲ್ಲಿ ಶೇ. 23% ಗಿಂತಲೂ ಕಡಿಮೆಯಾಗಿದೆ. 5 ವರ್ಷಗಳಲ್ಲಿ ಒಟ್ಟು 80000 ಕೋಟಿ ಕಡಿಮೆಯಾಗಿದೆ ಎಂದರು. :: ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯ ::  ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ  63 ಸಾವಿರ ಕೋಟಿ,  ಅನ್ಯಾಯವಾಗಿದೆ. ರಾಜ್ಯಕ್ಕೆ  ವಿಶೇಷ ಅನುದಾನ 5495 ಕೋಟಿ ಮೀಸಲಿಡಿಲಾಗಿತ್ತು. ಪೆರಿಫೆರಲ್ ರಿಂಗ್ ರೋಡ್ ಗೆ 3000 ಕೋಟಿ,  ಬೆಂಗಳೂರಿನ ಕೆರೆಗಳ ಅಭಿವೃದ್ಧಿಗಾಗಿ 3000ಕೋಟಿ ಸೇರಿದಂತೆ  ಒಟ್ಟು 11495 ಕೋಟಿ ಅನುದಾನ ಘೋಷಣೆ ಮಾಡಲಾಗಿತ್ತು. ಒಟ್ಟಾರೆಯಾಗಿ 80000 ಕೋಟಿ  ನಮಗೆ ಕಡಿಮೆಯಾಗಿದೆ. ಇದು ಬಹಳ  ದೊಡ್ಡ ಮೊತ್ತವಾಗಿದೆ ಎಂಡ ಎಂದು ಮುಖ್ಯಮಂತ್ರಿಗಳು ತಿಳಿಸಿದರು. :: ರಾಜ್ಯ ದೇಶದ  ಆರ್ಥಿಕ  ಬೆಳವಣಿಗೆಗೆ ಹೆಚ್ಚಿನ  ಕೊಡುಗೆ ನೀಡುತ್ತಿದೆ ::  ದೇಶದ  ಜನಸಂಖ್ಯೆಯಲ್ಲಿ ಕರ್ನಾಟಕದ ಜನಸಂಖ್ಯೆ  5% ರಷ್ಟಿದೆ. ಕರ್ನಾಟಕ  8.7% ಜಿಡಿಪಿಗೆ ಕೊಡುಗೆ ನೀಡುತ್ತಿದ್ದೇವೆ. 2011-12ರಲ್ಲಿ  7.6% ಇದ್ದದ್ದು, ಈಗ 8.7% ಕೊಡುಗೆ ನೀಡುತ್ತಿದೆ. ದೇಶಕ್ಕೆ ಜಿಎಸ್ ಟಿ ಕೊಡುಗೆ ನೀಡುವುದರಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ. ಜಿ.ಡಿ. ಪಿ ನಲ್ಲಿ ನಮ್ಮ ರಾಜ್ಯ ದೇಶದಲ್ಲಿ ಮೂರನೇ ಸ್ಥಾನದಲ್ಲಿದೆ.  ಹಾಗಾಗಿ ಯಾವ ರಾಜ್ಯ ಹೆಚ್ಚು ಆರ್ಥಿಕ  ಬೆಳವಣಿಗೆಗೆ ಕೊಡುಗೆ ನೀಡುತ್ತಿದೆ ಎನ್ನುವುದನ್ನು ಗಮನದಲ್ಲಿಟ್ಟುಕೊಳ್ಳಬೇಕು ಎಂದು ಕೋರಲಾಗಿದೆ ಎಂದರು. :: ಹಣಕಾಸಿನ ಕಾರ್ಯಕ್ಷಮತೆ ತೋರದ ರಾಜ್ಯಗಳಿಗೆ ವಿತ್ತೀಯ ಕೊರತೆ ಅನುದಾನ-ಕೇಂದ್ರದ ಕ್ರಮ ಸರಿಯಿಲ್ಲ ::  ತಲಾವಾರು ಆದಾಯವನ್ನು ಪರಿಗಣಿಸುವ ಮಾನದಂಡವನ್ನು ಶೇ.45 ರಿಂದ ಶೇ. 20 ಕ್ಕೆ ಇಳಿಸಬೇಕೆಂದು ಕೋರಲಾಗಿದೆ. ಕೇರಳ, ಆಂಧ್ರ, ತಮಿಳುನಾಡು ರಾಜ್ಯಗಳಿಗೆ ನೀಡಿದಂತೆ ಆದಾಯ ಕೊರತೆ ಅನುದಾನವನ್ನು ಕರ್ನಾಟಕಕ್ಕೂ ನೀಡಬೇಕು. ಇಲ್ಲವೇ  ಯಾವುದೇ ರಾಜ್ಯಗಳಿಗೆ ನೀಡಬಾರದು. ರಾಜಸ್ವ ಹೆಚ್ಚಳದಲ್ಲಿ ಖರ್ಚಿಗಿಂತ ಆದಾಯ ಹೆಚ್ಚಿದ್ದು, ವಿತ್ತೀಯ ಕೊರತೆಯಲ್ಲಿ ಆದಾಯಕ್ಕಿಂತ ಖರ್ಚು ಹೆಚ್ಚಿರುತ್ತದೆ. ರಾಜಸ್ವ ಹೆಚ್ಚಳದಲ್ಲಿದ್ದ ಕರ್ನಾಟಕ ಕಳೆದ ವರ್ಷದಿಂದ ವಿತ್ತೀಯ ಕೊರತೆ ಎದುರಿಸುತ್ತಿದ್ದು, ಮುಂದಿನ ವರ್ಷಕ್ಕೆ ಈ ಪರಿಸ್ಥಿತಿ ಸುಧಾರಿಸಲಿದೆ. ನಿರಂತರವಾಗಿ ವಿತ್ತೀಯ ಕೊರತೆಯಲ್ಲಿರುವ ರಾಜ್ಯಗಳಿಗೆ ವಿತ್ತೀಯ ಕೊರತೆ ಅನುದಾನವನ್ಹು ನೀಡಲಾಗುತ್ತದೆ. ಹಣಕಾಸಿನ ಕಾರ್ಯಕ್ಷಮತೆ ತೋರದಿರುವ ರಾಜ್ಯಗಳಿಗೆ ವಿತ್ತೀಯ ಕೊರತೆ ಅನುದಾನವನ್ನು ನೀಡುತ್ತಿರುವ ಕೇಂದ್ರದ ಕ್ರಮ ಸರಿಯಾದುದಲ್ಲ ಎಂದರು. :: ವಿಶೇಷ ಅನುದಾನಕ್ಕೆ ಮನವಿ ::  ಬೆಂಗಳೂರು ಜಾಗತಿಕ ನಗರವಾಗಿದ್ದು,  ನಗರದ ಬಂಡವಾಳ ಕಾರ್ಯಗಳಿಗೆ 1.15 ಲಕ್ಷ ಕೋಟಿ ಬೇಕಾಗಿದ್ದು, ಇದಕ್ಕಾಗಿ ವಿಶೇಷ ಅನುದಾನ ನೀಡುವಂತೆ ಕೋರಲಾಗಿದೆ.  ಮಲೆನಾಡು ಮತ್ತು ಪಶ್ಚಿಮ ಘಟ್ಟಗಳ ಪ್ರದೇಶಗಳಲ್ಲಿ ಪ್ರವಾಹದಿಂದಾಗುವ ಅನಾಹುತಗಳನ್ನು ನಿಭಾಯಿಸಲು ವಿಶೇಷ ಅನುದಾನ, ಕಲ್ಯಾಣ ಕರ್ನಾಟಕ ಭಾಗಕ್ಕೆ ವಿಶೇಷ ಅನುದಾನ ನೀಡುವಂತೆ ಕೋರಲಾಗಿದೆ. :: ರಾಜ್ಯದ ಮನವಿಯನ್ನು ಪರಿಶೀಲಿಸುವ ಕೇಂದ್ರ ವಿತ್ತಸಚಿವರ ಭರವಸೆ :: ರಾಜ್ಯದ ಮನವಿಗೆ ಕೇಂದ್ರ ವಿತ್ತ ಸಚಿವರು ಸ್ಪಂದಿಸಿದರೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ರಾಜ್ಯಕ್ಕೆ ಅಗತ್ಯವಿರುವ ವಿಶೇಷ ಅನುದಾನ ನೀಡುವಂತೆ ಮನವಿ ಮಾಡಲಾಗಿದೆಯೇ ಹೊರತು ಆರೋಪ ಮಾಡಿಲ್ಲ. ರಾಜ್ಯಕ್ಕೆ ಅನ್ಯಾಯವಾಗಿದ್ದರೆ, ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂಬ ಭರವಸೆಯನ್ನು ಕೇಂದ್ರ ವಿತ್ತಸಚಿವರು ನೀಡಿರುವುದಾಗಿ ತಿಳಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.15 NEWS DESK  : ಕೃಷಿ ಹಾಗೂ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ಅಕ್ಟೋಬರ್, 17 ರಂದು…

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026

ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ 100 ವರ್ಷಗಳಾದರೂ ಹೋರಾಟ ನಿಲ್ಲದು: ಎನ್.ಯು. ನಾಚಪ್ಪ

ಅಕ್ಟೋಬರ್ 15, 2026

ಗೋಣಿಕೊಪ್ಪಲು ದಸರಾ ಜನೋತ್ಸವದಲ್ಲಿ ಅ.16ರಂದು ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ; 118 ಕವಿಗಳಿಂದ ಕವನ ವಾಚನ; ಜೆನ್ ಜಿ ಹಾಗೂ ಮಕ್ಕಳ ಕವಿಗೋಷ್ಠಿ ವಿಶೇಷ ಆಕರ್ಷಣೆ

ಅಕ್ಟೋಬರ್ 15, 2026

ಕೊಡಗಿನಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಅಶಾಂತಿಗೆ ಅವಕಾಶ ನೀಡಬಾರದು: ರಾಕೇಶ್ ದೇವಯ್ಯ ; ಎಸ್‌ಐಆರ್ ಪರಿಷ್ಕರಣೆ ವಿರುದ್ಧದ ಪ್ರತಿಭಟನೆಗೆ ಶಾಸಕರ ಬೆಂಬಲವಿದೆಯೇ ಎಂಬುದನ್ನು ಸ್ಪಷ್ಟಪಡಿಸಲು ಆಗ್ರಹ

ಅಕ್ಟೋಬರ್ 15, 2026

ಕಡಗದಾಳು ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಸಮಾರಂಭ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.