ಮಡಿಕೇರಿ ಜೂ.25 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ನಾಡಪ್ರಭು ಕೆಂಪೇಗೌಡರ ಜಯಂತಿಯು ಜೂನ್, 27 ರಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಬೋಸರಾಜು, ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಮತ್ತು ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ಶಾಸಕರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರಾದ ಹರಪಳ್ಳಿ ರವೀಂದ್ರ, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಎಸ್.ಎಂ.ಚಂಗಪ್ಪ, ಕೊಡಗು ಜಿಲ್ಲಾ ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷರಾದ ಆನಂದ್ ಕರಂದ್ಲಾಜೆ, ಕೊಡಗು ಗೌಡ ವಿದ್ಯಾಸಂಘದ ಅಧ್ಯಕ್ಷರಾದ ಅಂಬೆಕಲ್ ನವೀನ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಇತರರು ಪಾಲ್ಗೊಳ್ಳಲಿದ್ದಾರೆ. ಕೂಡಿಗೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ನಾಗರಾಜು ಉಪನ್ಯಾಸ ನೀಡಲಿದ್ದಾರೆ.











