ಮಡಿಕೇರಿ ಜೂ.26 NEWS DESK : ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಜಿಲ್ಲೆಯ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ವೀಕ್ಷಿಸಿ, ಅಲ್ಲಿನ ಸ್ಥಳೀಯರಿಂದ ಮಾಹಿತಿ ಪಡೆದರು. ಕುಶಾಲನಗರದ ಕಾವೇರಿ ನದಿ ಹರಿವು ಪ್ರದೇಶ ವೀಕ್ಷಿಸಿದರು. ನಂತರ ಮಳೆಯಿಂದ ಹಾನಿಯಾದ ಮನೆಗಳನ್ನು ಪರಿಶೀಲಿಸಿ, ಮಳೆ ಹಾನಿ ಸಂಬಂಧ ಸರ್ಕಾರದಿಂದ ನಿಯಮಾನುಸಾರ ಪರಿಹಾರ ದೊರೆಯಲಿದೆ ಎಂದು ಸಚಿವರು ಹೇಳಿದರು. ಈ ಸಂದರ್ಭ ಶಾಸಕ ಡಾ.ಮಂತರ್ ಗೌಡ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ ಸಿಇಓ ಆನಂದ್ ಪ್ರಕಾಶ್ ಮೀನಾ, ಸ್ಥಳೀಯ ಜನಪ್ರತಿನಿಧಿಗಳು, ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳು, ಕಂದಾಯ ನಿರೀಕ್ಷಕರು ಇತರರು ಇದ್ದರು.












