ಮಡಿಕೇರಿ ಜೂ.26 NEWS DESK : ಕುಶಾಲನಗರದ ಅತ್ತೂರು ಜ್ಞಾನಗಂಗಾ ವಸತಿ ಶಾಲೆಯಲ್ಲಿ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಯೋಗಭಾರತಿ ಯೋಗ ಗುರು ಕೆ.ಕೆ.ಮಹೇಶ್ ಯೋಗದ ಮಹತ್ವದ ಬಗ್ಗೆ ತಿಳಿಸಿದರು. ನಂತರ ವಿದ್ಯಾರ್ಥಿಗಳಿಗೆ ಯೋಗಾಭ್ಯಾಸ ಮಾಡಿಸಿದರು. ಅಧ್ಯಕ್ಷ ಟಿ.ಕೆ.ಸುಧೀರ್, ಕಾರ್ಯದರ್ಶಿ ಬಿ.ಎಸ್. ನಿಂಗಪ್ಪ, ಪ್ರಾಂಶುಪಾಲರಾದ ಸತ್ಯ ಸುಲೋಚನಾ ಹಾಗೂ ಶಿಕ್ಷಕರು ಮತ್ತು ಸಿಬ್ಬಂದಿಗಳು ಹಾಜರಿದ್ದರು.












