ಮಡಿಕೇರಿ ಜೂ.26 NEWS DESK : ಅಮ್ಮತ್ತಿ ಹೋಬಳಿ ಕರಡಿಗೋಡು ಗ್ರಾಮದ ಹೊಳೆಕೆರೆ ರಸ್ತೆ ಕಾವೇರಿ ನದಿ ಪ್ರವಾಹದಿಂದ ಸಂಪರ್ಕ ಕಡಿತಗೊಂಡಿದ್ದು, ಬದಲಿ ರಸ್ತೆ ವ್ಯವಸ್ಥೆ ಕಲ್ಪಿಸಲಾಗಿದೆ. ಸ್ಥಳಕ್ಕೆ ಕಂದಾಯ ಪರಿವೀಕ್ಷಕರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗ್ರಾಮಸ್ಥರು
ಅಪಾಯದ ಸ್ಥಳಗಳಿಗೆ ತೆರಳದಂತೆ ಹಾಗೂ ಕಾಳಜಿ ಕೇಂದ್ರಕ್ಕೆ ಬರಲು ಸೂಚಿಸಿದರು.











