ಸೋಮವಾರಪೇಟೆ NEWS DESK ಜೂ.26 : ಬೆಂಗಳೂರು ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನದಿಂದ ಕೆಂಪೇಗೌಡರ 516ನೇ ಜನ್ಮದಿನೋತ್ಸವ ಅಂಗವಾಗಿ ಕೊಡುವ ಸಾಧಕ ಪುರಸ್ಕಾರಕ್ಕೆ ಕೊಡಗು ಜಿಲ್ಲೆಯಿಂದ ಸೋಮವಾರಪೇಟೆ ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ತಾಕೇರಿ ಗ್ರಾಮದ ಎ.ಆರ್.ಮುತ್ತಣ್ಣ ಆಯ್ಕೆಯಾಗಿದ್ದಾರೆ. ಜೂ.27ರ ಶುಕ್ರವಾರದಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಂಜೆ 4 ಗಂಟೆಗೆ ನಡೆಯುವ ಸಮಾರಂಭದಲ್ಲಿ ಸಾಧಕರನ್ನು ಸನ್ಮಾನಿಸಲಾಗುತ್ತದೆ. ಎ.ಆರ್.ಮುತ್ತಣ್ಣ ಅವರು ಒಕ್ಕಲಿಗರ ಸಂಘದಲ್ಲಿ ಕಳೆದ ಮೂವತ್ತು ವರ್ಷಗಳಿಂದ ಅಧ್ಯಕ್ಷರಾಗಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿದ್ದಾರೆ. ಸಂಘದ ವತಿಯಿಂದ ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯನ್ನು ಸ್ಥಾಪಿಸಲಾಗಿದೆ. ಎಲ್‌ಕೆಜಿಯಿಂದ ಪಿಯುಸಿ ತನಕ 800 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಶೇ.99ರಷ್ಟು ಗ್ರಾಮೀಣ ವಿದ್ಯಾರ್ಥಿಗಳು ಕುವೆಂಪು ವಿದ್ಯಾಸಂಸ್ಥೆಯಲ್ಲಿ ಆಂಗ್ಲ ಮಾಧ್ಯಮದಲ್ಲಿ ಕಲಿಯುತ್ತಿದ್ದಾರೆ.










