ಮಡಿಕೇರಿ ಜೂ.26 NEWS DESK : ಸಾಹಿತ್ಯ ಲೋಕದ ಪ್ರತಿಷ್ಟಿತ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿಯನ್ನು ಪಡೆದ ಕೊಡಗಿನ ಹೆಮ್ಮೆಯ ಲೇಖಕಿ ಮಡಿಕೇರಿಯ ದೀಪಾಭಾಸ್ತಿಯವರಿಗೆ ಕೊಡಗು ಪತ್ರಕತ೯ರ ಸಂಘದ ಆಶ್ರಯದಲ್ಲಿ ಜೂ.29 ರಂದು ಭಾನುವಾರ ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳಿಂದ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ. ತಿಳಿಸಿದ್ದಾರೆ. ಭಾನುವಾರ ಸಂಜೆ 5 ಗಂಟೆಗೆ ಮಡಿಕೇರಿಯ ರೆಡ್ ಬ್ರಿಕ್ಸ್ ಇನ್ ನ ಸತ್ಕಾರ್ ಸಭಾಂಗಣದಲ್ಲಿ ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂಥರ್ ಗೌಡ ಅಧ್ಯಕ್ಷತೆಯಲ್ಲಿ ಆಯೋಜಿತ ದೀಪಾ ಹೆಸರಿನ ಅಭಿನಂದನಾ ಕಾಯ೯ಕ್ರಮವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಮತ್ತು ವಿರಾಜಪೇಟೆ ಕ್ಷೇತ್ರ ಶಾಸಕ ಎ.ಎಸ್.ಪೊನ್ನಣ್ಣ ನೆರವೇರಿಸಲಿದ್ದಾರೆ. ವಿಧಾನಪರಿಷತ್ ಸದಸ್ಯ ಎಂ.ಪಿ. ಸುಜಾಕುಶಾಲಪ್ಪ, ಮಡಿಕೇರಿ ನಗರಸಭೆ ಅಧ್ಯಕ್ಷೆ ಕಲಾವತಿ, ಜಿಲ್ಲಾಧಿಕಾರಿ ವೆಂಕಟರಾಜಾ, ಹೆಚ್ಚುವರಿ ಜಿಲ್ಲಾದಿಕಾರಿ ಆರ್. ಐಶ್ವಯ೯, ಕೊಡವ ಸಾಹಿತ್ಯ ಸಂಸ್ಕೃತಿ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯ, ಅರೆಭಾಷಾ ಸಾಹಿತ್ಯ, ಸಂಸ್ಕೃತಿ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಾಜಿ ಪಾಲ್ಗೊಳ್ಳಲಿದ್ದಾರೆ ಸಂಸ್ಕೃತಿ ಅನಿಲ್ ಮಾಹಿತಿ ನೀಡಿದ್ದಾರೆ. ಸಾಹಿತ್ಯ ಲೋಕದ ಪ್ರತಿಷ್ಟಿತ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿಯನ್ನು ಹಾ್ಟ್೯ ಲ್ಯಾಂಪ್ ಕೖತಿಗಾಗಿ ಪಡೆದ ದೀಪಾಭಾಸ್ತಿಯವರಿಗೆ ವಿವಿಧ ಸಂಘ ಸಂಸ್ಥೆಗಳಿಂದ ಸನ್ಮಾನ, ಗೌರವಾಪ೯ಣೆ ನೆರವೇರಲಿದೆ.
ಸನ್ಮಾನ ನೆರವೇರಿಸುವ ಸಂಘ ಸಂಸ್ಥೆಗಳ ವಿವರ :: ಮಡಿಕೇರಿ ನಗರಸಭೆ , ಮಡಿಕೇರಿ ವಕೀಲರ ಸಂಘ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರ, ಕೊಡಗು ವಿದ್ಯಾಲಯ ಮಡಿಕೇರಿ, ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿ ಕೊಡಗು ಮಡಿಕೇರಿ, ಕೊಡವ ಸಮಾಜ ಮಡಿಕೇರಿ, ಕೊಡಗು ಗೌಡ ಸಮಾಜ, ಮಡಿಕೇರಿ, ಕೊಡಗು ಗೌಡ ಫೆಡರೇಷನ್, ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮಸ೯, ಕೊಡಗು ಹೋಟೇಲ್, ರೆಸಾಟ್೯ ಅಸೋಸಿಯೇಷನ್, ನಗರ ಚೇಂಬರ್ ಆಫ್ ಕಾಮಸ್೯, ಕೊಡಗು ಜಿಲ್ಲಾ ಹೋಂಸ್ಟೇ ಅಸೋಸಿಯೇಷನ್, ಜಿಲ್ಲಾ ಕಾಂಗ್ರೆಸ್ ಸಮಿತಿ, ಕೊಡಗು – ಭಾರತೀಯ ಜನತಾ ಪಾಟಿ೯ ಕೊಡಗು, ಜಾತ್ಯಾತೀತ ಜನತಾ ದಳ. ಎಸ್.ಡಿ.ಪಿ.ಐ, ಪೊಮ್ಮಕ್ಕಡ ಕೂಟ ಮಡಿಕೇರಿ, ಪೊಮ್ಮಕ್ಕಡ ಕೂಟ ವೀರಾಜಪೇಟೆ, ಗೌಡ ಮಹಿಳಾ ಒಕ್ಕೂಟ, ಚೇರಂಬಾಣೆ, ಸಮಥ೯ ಕನ್ನಡಿಗರು ಸಂಸ್ಥೆ, ಮಡಿಕೇರಿ ಕನ್ನಡ ಸಿರಿ ಸ್ನೇಹಬಳಗ, ಕುಶಾಲನಗರ, ಸಂಸ್ಕೃತಿ ಸಿರಿ ಬಳಗ ಟ್ರಸ್ಟ್, ಕೊಡಗು, ಆರೋಹಣ ಕೊಡಗು ತಂಡ ಮಡಿಕೇರಿ, ಕೊಡಗು ಕನ್ನಡ ಭವನ ಮತ್ತು ಕನ್ನಡ ಚುಟುಕು ಸಾಹಿತ್ಯ ಪರಿಷತ್ತು, ಕೊಡಗು ಜಿಲ್ಲೆ, ಶ್ರೀ ಓಂಕಾರೇಶ್ವರ ದೇವಾಲಯ ವ್ಯವಸ್ಥಾಪನಾ ಸಮಿತಿ, ಮಡಿಕೇರಿ, ಲಯನ್ಸ್ ಕ್ಲಬ್ ಮಡಿಕೇರಿ, ರೋಟರಿ ಮಡಿಕೇರಿ ಮಿಸ್ಟಿ ಹಿಲ್ಸ್, ರೋಟರಿ ಮಡಿಕೇರಿ ವುಡ್ಸ್ , ಇನ್ನರ್ ವೀಲ್ ಮಡಿಕೇರಿ, ರೆಡ್ ಕ್ರಾಸ್, ಕೊಡಗು ಘಟಕ, ಮಡಿಕೇರಿ, ಮಹದೇವಪೇಟೆ ಮಹಿಳಾ ಸಹಕಾರ ಸಂಘ, ಮಡಿಕೇರಿ, ಕೊಡಗು ಜಿ್ಲ್ಲಾ ಕುಲಾಲ ಸಮಾಜ, ಹಿಂದೂ ಮಲಯಾಳಿ ಸಮಾಜ ಕೊಡಗು, ಕೊಡಗು ಬಿಲ್ಲವ ಸಮಾಜ ಮಡಿಕೇರಿ, ಕೊಡಗು ಜಿಲ್ಲಾ ಬಂಟರ ಸಂಘ, ಮಡಿಕೇರಿ, ಕೊಡಗು ಜಿಲ್ಲಾ ಮೊಗೇರ ಸಮಾಜ, ಮಡಿಕೇರಿ, ಭಾರತೀಯ ಮೆಡಿಕಲ್ ಅಸೋಸಿಯೇಷನ್, ಕೊಡಗು ಶಾಖೆ, ಕೊಡಗು ಜಿಲ್ಲಾ ಔಷಧಿ ವ್ಯಾಪಾರಸ್ಥರ ಸಂಘ, ಮಡಿಕೇರಿ, ಕೊಡಗು ದಲಿತ ಸಂಘಷ೯ ಸಮಿತಿ, ಬ್ಯಾರಿ ವೆಲ್ಪೇರ್ ಟ್ರಸ್ಟ್ ಮಡಿಕೇರಿ, ಕೊಡಗು ಕ್ರೈಸ್ತರ ಸೇವಾ ಸಂಘ ಮಡಿಕೇರಿ, ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್, ಕೊಡಗು, ವೀರಶೈವ ಸಮಾಜ, ಮಡಿಕೇರಿ, ಕೊಡಗು ಜಿಲ್ಲಾ ಜಮಾತ್ ಎ ಇಸ್ಲಾಂ ಹಿಂದ್, ಸೇರಿದಂತೆ ಹಲವು ಸಂಸ್ಥಗಳು ಗೌರವ ಸಮಪ೯ಣೆಯಲ್ಲಿ ಪಾಲ್ಗೊಳ್ಳಲಿವೆ ಎಂದು ಸಂಘದ ಪ್ರಧಾನ ಕಾಯ೯ದಶಿ೯ ಸುರೇಶ್ ಬಿಳಿಗೇರಿ ಮಾಹಿತಿ ನೀಡಿದ್ದಾರೆ.











