ಮಡಿಕೇರಿ ಜೂ.26 NEWS DESK : ಮಹಿಳಾ ಸಾಂಸ್ಕೃತಿಕ ಸಂಘದ ಕಟ್ಟಡಕ್ಕೆ ಪಂಚಾಯತಿಯಲ್ಲಿ ಲಭ್ಯವಿರುವ ಹಣದಲ್ಲಿ ಕೆ.ಬಾಡಗ ಗ್ರಾಮ ಪಂಚಾಯತಿ ಕಚೇರಿಗೆ ಕಟ್ಟಡವನ್ನು ಖರೀದಿಸಲು ಅನುಮತಿ ನೀಡುವಂತೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಮನವಿ ಸಲ್ಲಿಸಲಾಯಿತು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ನೇತೃತ್ವದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಗ್ರಾಮೀಣ ಅಭಿವೃದ್ಧಿ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಈ ಸಂದರ್ಭ ಕೆ.ಬಾಡಗ ಪಂಚಾಯಿತಿ ಅಧ್ಯಕ್ಷ ರೀತಿಶ್ ಬಿದ್ದಪ್ಪ, ಪಂಚಾಯಿತಿ ಸದಸ್ಯ ಸಿ.ಡಿ.ಬೋಪಣ್ಣ ಹಾಜರಿದ್ದರು.











