Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಡಾ.ಜ಼ಮೀರ್ ಅಹಮದ್‌ಗೆ ನಾಡೋಜ ಕರೀಂ ಖಾನ್ ಪ್ರಶಸ್ತಿ ಪ್ರದಾನ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಡಾ.ಜ಼ಮೀರ್ ಅಹಮದ್‌ಗೆ ನಾಡೋಜ ಕರೀಂ ಖಾನ್ ಪ್ರಶಸ್ತಿ ಪ್ರದಾನ

ಜೂನ್ 26, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.26 NEWS DESK : ಕೊಡಗು ವಿಶ್ವವಿದ್ಯಾಲಯದ ಕನ್ನಡ ಉಪನ್ಯಾಸಕ  ಡಾ.ಜ಼ಮೀರ್ ಅಹಮದ್ ಅವರಿಗೆ 2025ನೇ ಸಾಲಿನ ‘ನಾಡೋಜ ಕರೀಂ ಖಾನ್ ರಾಜ್ಯ ಪ್ರಶಸ್ತಿ’ ಲಭಿಸಿದೆ. ಡಾ.ಜ಼ಮೀರ್ ಅಹಮದ್ ಕರ್ನಾಟಕ ಜಾನಪದ ಕಲೆ, ಸಾಹಿತ್ಯದ ಸಂರಕ್ಷಣೆಗಾಗಿ ಸಲ್ಲಿಸಿದ  ಸೇವೆಯನ್ನು ಗುರುತಿಸಿ ಬೆಂಗಳೂರು ಕನ್ನಡ ಜಾನಪದ ಪರಿಷತ್ ವತಿಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಪ್ರಥಮ ಕನ್ನಡ ಜಾನಪದ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. ಕನ್ನಡ ಸಾಹಿತ್ಯ ವಿದ್ಯಾರ್ಥಿಯಾಗಿರುವ ಜಮೀರ್ ಅಹಮದ್ ಅವರು ಶ್ರೀ ಕುವೆಂಪು ಅವರ ವಿಶ್ವಮಾನವ ಸಂದೇಶವನ್ನು ಬದುಕಿನುದ್ದಕ್ಕೂ ಮೈಗೂಡಿಸಿಕೊಂಡು ಸರ್ವ ಜನಾಂಗದ ಪ್ರೀತಿಗೆ ಪಾತ್ರರಾಗಿದ್ದಾರೆ. ಭಾಷೆ ನನ್ನ ಅಂತರಂಗದ ಮೃದಂಗ ಎಂಬ ಕನ್ನಡ ಪ್ರೇಮಿ ‘ಕಾಳಜಿಯ ಕನ್ನಡಿಗ’ ಎಂದೇ ಚಿರಪರಿಚಿತರು. ಕನ್ನಡ ಉಪನ್ಯಾಸಕರಾಗಿ ಮತ್ತು ಪತ್ರಕರ್ತರಾಗಿ ಸಾಮಾಜಿಕ ಮತ್ತು ಶೈಕ್ಷಣಿಕ ಜೀವನದಲ್ಲಿ ತಮ್ಮನ್ನು ತಾವು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿರುವ ಆರ್ಥಿಕವಾಗಿ ದುರ್ಬಲವಾಗಿರುವ ರೋಗಿಗಳಿಗೆ ಅದರಲ್ಲೂ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ರೋಗಿಗಳಿಗೆ ಸಾಮಾಜಿಕ ಜಾಲತಾಣದ ಮತ್ತು ಮಾಧ್ಯಮದ ಸಹಾಯದೊಂದಿಗೆ ಆರ್ಥಿಕ ಸಹಕಾರ ಕೊಡಿಸುವಂತಹ ಸಾಮಾಜಿಕ ಕಾಳಜಿಗೆ ತಮ್ಮ ಹೆಚ್ಚಿನ ಸಮಯವನ್ನು ಮೀಸಲಿಟ್ಟಿರುವುದು ಧರ್ಮಾತೀತ ಮಾನವತಾ ಪ್ರೀತಿಗೆ ಹಿಡಿದ ಕೈಗನ್ನಡಿಯಾಗಿದೆ. ಕನ್ನಡ ಉಪನ್ಯಾಸಕರಾಗಿ ಮತ್ತು ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿರುವ ಡಾ. ಜಮೀರ್ ಅಹಮದ್ ಅವರು, ಮೂಲತಃ ರಾಜ್ಯ ಪ್ರಶಸ್ತಿ ವಿಜೇತ ಕನ್ನಡ ಚಲನಚಿತ್ರ ನಿರ್ದೇಶಕ ಎಂ.ಡಿ.ಹಾಷಂ ತುಂಬಿದ ಮನೆ ಮತ್ತು ದಿ.ಮೊಖ್‌ಬುಲ್ ದಂಪತಿಗಳ ಪುತ್ರ. ಬಾಲ್ಯದಿಂದಲೂ ದೇಶ, ನಾಡು-ನುಡಿ ಬಗೆಗೆ ಅಪಾರ ಪ್ರೀತಿ ಹೊಂದಿದವರು, ಎಲ್ಲಾ ಸಮುದಾಯದ ನಿಕಟ ಒಡನಾಟ ಹೊಂದಿರುವ ಇವರು, ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಜನಿಸಿರುವುದೇ ನನ್ನ ಪುಣ್ಯ ಎಂದು ಹೆಮ್ಮೆ ಪಡುತ್ತಾರೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ, ಮುಕ್ತಗಂಗೋತ್ರಿ, ಮೈಸೂರು, ಇಲ್ಲಿನ ಕನ್ನಡ ಅಧ್ಯಯನ ಮತ್ತು ಸಂಶೋಧನಾ ವಿಭಾಗದಲ್ಲಿ ಪ್ರಾಧ್ಯಾಪಕರಾದ ಪ್ರೊ.ಡಿ. ನಾಗಣ್ಣ ಅವರ ಮಾರ್ಗದರ್ಶನದಲ್ಲಿ ‘ಮೈಸೂರು ನಗರದ ಮುಸ್ಲಿಮರು: ಸಾಂಸ್ಕೃತಿಕ ಅಧ್ಯಯನ’ ಎಂಬ ವಿಷಯದಲ್ಲಿ ಪಿಎಚ್.ಡಿ ಪದವಿ ಪಡೆದುಕೊಂಡಿದ್ದಾರೆ. ನಾಡು-ನುಡಿ-ಸಂಸ್ಕೃತಿ, ಸಾಮಾಜಿಕ ಮತ್ತು ಶೈಕ್ಷಣಿಕ ವಿಚಾರಗಳಲ್ಲಿ ಹೆಚ್ಚಿನ ಕಾಳಜಿ ಹೊಂದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ತಮ್ಮದೇ ಆದ ಗುರುತು ಹೊಂದಿರುವ ಇವರು ಫೇಸ್‌‌ಬುಕ್ ಮತ್ತು ಇನ್‌ಸ್ಟಾಗ್ರಾಮ್ ನಂತಹ ಸಾಮಾಜಿಕ ಜಾಲತಾಣಗಳನ್ನು ಸಮರ್ಥವಾಗಿ ಸದ್ಬಳಕೆ ಮಾಡಿಕೊಂಡು ಕೇವಲ ರಾಜ್ಯದಲ್ಲಷ್ಟೇ ಅಲ್ಲದೇ ದೇಶ ಮತ್ತು ವಿದೇಶದಲ್ಲಿರುವ ಕನ್ನಡಿಗರ ಆರ್ಥಿಕ ಸಹಕಾರದೊಂದಿಗೆ, ಬಹಳಷ್ಟು ಬಡ ಕುಟುಂಬದವರಿಗೆ ಹಣ ಸಂಗ್ರಹಿಸಿ ಕೊಡುವುದರಲ್ಲಿ ನೆರವಾಗುತ್ತಿದ್ದಾರೆ. ತಾಲೂಕು ಮಟ್ಟದ ಕನ್ನಡ ಸಾಹಿತ್ಯ ಪರಿಷತ್ತು, ಮಕ್ಕಳ ಸಾಹಿತ್ಯ ಪರಿಷತ್ತು, ಶರಣ ಸಾಹಿತ್ಯ ಪರಿಷತ್ತು ಮೊದಲಾದ ಸಂಘ ಸಂಸ್ಥೆಗಳಲ್ಲೂ ತಮ್ಮನ್ನು ತಾವು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಕೊಡಗು ಜಿಲ್ಲೆಯಾದ್ಯಂತ ಸಂಘ ಸಂಸ್ಥೆಗಳು, ಶಾಲಾ ಕಾಲೇಜುಗಳಲ್ಲಿ ಆಯೋಜಿಸುವಂತಹ ಕಾರ್ಯಕ್ರಮಗಳಲ್ಲಿ ನಾಡು-ನುಡಿ, ಸಾಮಾಜಿಕ ವಿಚಾರ, ಮಾಧ್ಯಮದ ಜವಾಬ್ದಾರಿ, ಕನ್ನಡ ಸಾಹಿತ್ಯ ಮತ್ತು ಸಂಘ ಸಂಸ್ಥೆಗಳು , ಯುವ ಸಮುದಾಯ, ಮೊದಲಾದ ವಿಷಯಗಳ ಮೇಲೆ ವಿಶೇಷ ಉಪನ್ಯಾಸ ನೀಡುತ್ತಾ ಬಂದಿದ್ದಾರೆ. ಇವರ ಸಮರ್ಪಿತ ಸೇವೆಯನ್ನು ಗುರುತಿಸಿ 2020ರಲ್ಲಿ ಕೊಡಗು ಕನ್ನಡ ಸಾಹಿತ್ಯ ಪರಿಷತ್ತು ಅವರಿಗೆ ರಾಜ್ಯೋತ್ಸವ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. 2024ರಲ್ಲಿ ಸ್ನೇಹ ಸಿರಿ ಬಳಗ (ರಿ) ಕೊಡಗು “ಶಿಕ್ಷಕ ಸಿರಿ” ಪ್ರಶಸ್ತಿಯನ್ನು ನೀಡಿ ಇವರ ಶಿಕ್ಷಕ ವೃತ್ತಿಯ ಗೌರವವನ್ನು ಹೆಚ್ಚಿಸಿದೆ. ಸಾಮಾಜಿಕ ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ನಿರಂತರ ಸೇವೆಯನ್ನು ಗುರುತಿಸಿ 2024ರಲ್ಲಿ ಹಾಸನ ಜಿಲ್ಲಾಡಳಿತ ವತಿಯಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ರಾಷ್ಟ್ರೀಯ ಹಬ್ಬಗಳ ಆಚರಣೆಯ ಸಮಿತಿ, ಕುಶಾಲನಗರ ತಾಲ್ಲೂಕು ಆಡಳಿತದ ವತಿಯಿಂದ ಗೌರವ ಪುರಸ್ಕಾರವನ್ನು
ಪಡೆದುಕೊಂಡಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ವಿರಾಜಪೇಟೆ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶಾರದಾ, ಲಕ್ಷ್ಮಿ ಪೂಜೆ

ಅಕ್ಟೋಬರ್ 19, 2026

ವಿರಾಜಪೇಟೆ ಮಹಿಳಾ ಸಹಕಾರ ಸಂಘದಿಂದ ಶಾರದಾ ಪೂಜೆ

ಅಕ್ಟೋಬರ್ 19, 2026

ಗೋಣಿಕೊಪ್ಪ ದಸರಾದಲ್ಲಿ ಗಮನ ಸೆಳೆದ ಗೀತೆಗಳ ಗಾನಸುಧೆ, ಮಕ್ಕಳ ನೃತ್ಯ ವೈಭವ

ಅಕ್ಟೋಬರ್ 19, 2026

ವಿರಾಜಪೇಟೆ ಮಹಿಳಾ ಸಹಕಾರ ಸಂಘದಿಂದ ಶಾರದಾ ಪೂಜೆ

ಅಕ್ಟೋಬರ್ 19, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಅ.19 NEWS DESK : ಇಲ್ಲಿನ ನಂ. 371ನೇ ಕೊಡಗು ಮಹಿಳಾ ಸಹಕಾರ ಸಂಘ ನಿಯಮಿತದ ವತಿಯಿಂದ ಮಹಿಳಾ…

ಗೋಣಿಕೊಪ್ಪ ದಸರಾದಲ್ಲಿ ಗಮನ ಸೆಳೆದ ಗೀತೆಗಳ ಗಾನಸುಧೆ, ಮಕ್ಕಳ ನೃತ್ಯ ವೈಭವ

ಅಕ್ಟೋಬರ್ 19, 2026

ಟಿ. ಶೆಟ್ಟಿಗೇರಿಯಲ್ಲಿ ₹10 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಆಟೋ ತಂಗುದಾಣ ಲೋಕಾರ್ಪಣೆ

ಅಕ್ಟೋಬರ್ 19, 2026

ಮಾದಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರಕ್ಕೆ ಮಾಜಿ ಸಚಿವ ಅಪ್ಪಚ್ಚು ರಂಜನ್ ಚಾಲನೆ

ಅಕ್ಟೋಬರ್ 19, 2026

ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಗಳನ್ನು ಹೊರ ತರಲು ಪ್ರತಿಭಾ ದಿನಾಚರಣೆಯು ವೇದಿಕೆ

ಅಕ್ಟೋಬರ್ 19, 2026

ಮಡಿಕೇರಿಯಲ್ಲಿ ಸಂಭ್ರಮದ 9ನೇ ವರ್ಷದ ಮಹಿಳಾ ದಸರಾ; ಮಹಿಳೆಯರ ಸಾಧನೆಗೆ ಶಿಕ್ಷಣ ಅತ್ಯವಶ್ಯ: ವಿಜಯಲಕ್ಷ್ಮಿ ಸಿಂಗ್

ಅಕ್ಟೋಬರ್ 19, 2026

ಕಾವೇರಿ ತುಲಾ ಸಂಕ್ರಮಣದ ಹಿನ್ನೆಲೆ : ದೇವಟ್ ಪರಂಬ್ ನಲ್ಲಿ ಬೊತ್ತ್ ಬಳ್ಳಿ ಸುತ್ತಿದ ಕೋಲಿನ ಮೇಲೆ ದೋಸೆ ಮತ್ತು ಪುಟ್ಟ್ ಇಟ್ಟು ಸಿಎನ್‌ಸಿ ಸ್ಮರಣೆ

ಅಕ್ಟೋಬರ್ 19, 2026

ಕರ್ನಾಟಕ ಪ್ಲಾಂಟರ್ಸ್ ಅಸೋಸಿಯೇಷನ್ ನ ನೂತನ ಅಧ್ಯಕ್ಷ ಪೀಟು ಕಾರ್ಯಪ್ಪ ಅವರನ್ನು ಅಭಿನಂದಿಸಿದ ಕೊಡವ ವ್ಯಾಪಾರೋದ್ಯಮಿಗಳ ಸೌಹಾರ್ದ ಕ್ರೆಡಿಟ್ ಕೋಆಪರೇಟಿವ್ ಲಿಮಿಟೆಡ್

ಅಕ್ಟೋಬರ್ 19, 2026

ದಸರಾ ಪ್ರಯುಕ್ತ ಶ್ರೀ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ದುರ್ಗಾಪೂಜೆ

ಅಕ್ಟೋಬರ್ 19, 2026

ಕೊಡಗಿನಲ್ಲಿ ಪರಿಶಿಷ್ಟ ಜಾತಿಯ ಫಲಾನುಭವಿಗೆ ಮೊಬೈಲ್ ಕ್ಯಾಂಟೀನ್ ವಾಹನ ಹಸ್ತಾಂತರ

ಅಕ್ಟೋಬರ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.