Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಕೋಚನ ಚೇತನ್ ಆಯ್ಕೆ*
  • *ಕಾನಡ್ಕ ಕುಟುಂಬದಿoದ 12ನೇ ವರ್ಷದ ಯುಗಾದಿ ಕ್ರೀಡಾಕೂಟದ ಸಂಭ್ರಮ : ಕ್ರೀಡೆಗಳಿಂದ ಹಬ್ಬದ ಮೆರುಗು ಇಮ್ಮಡಿ*
  • *ಸಮೀರ್ ಗೆ “ರತ್ನ ಶ್ರೀ” ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ*
  • *ಗ್ರಾಮಸ್ಥರಲ್ಲಿ ಭೀತಿ ಮೂಡಿಸಿದ್ದ ಕಾಡಾನೆ ಸೆರೆ*
  • *ಹಾಕತ್ತೂರಿನ “ಯುವ ಸ್ಪಂದನ ಯೂತ್ ಫೌಂಡೇಶನ್” ಗೆ ನೂತನ ಪದಾಧಿಕಾರಿಗಳ ಆಯ್ಕೆ*
  • *ಕಾಡಾನೆ ಮಾನವ ಸಂಘರ್ಷ ತಡೆಗೆ ಕೇಂದ್ರ ಸರಕಾರ ಏನು ಕ್ರಮ ಕೈಗೊಂಡಿದೆ*
  • *ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಸಿಎನ್‌ಸಿ ವಿಚಾರಣ ಸಂಕಿರಣ : ಇನ್ನೊಬ್ಬರ ಹಕ್ಕನ್ನು ಕಸಿದುಕೊಳ್ಳಲು ಕೊಡವರು ತಮ್ಮ ಹಕ್ಕನ್ನು ಪ್ರತಿಪಾದಿಸುತ್ತಿಲ್ಲ : ಕೆ.ಪಿ.ಬಾಲಸುಬ್ರಹ್ಮಣ್ಯ ಅಭಿಮತ*
  • *ಕಾರು ಮತ್ತು ಬೈಕ್ ಗಳ ನಡುವೆ ಡಿಕ್ಕಿ : ಇಬ್ಬರ ಸಾವು*
  • *ವಿರಾಜಪೇಟೆ : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪ ತೆರೆ ಮಹೋತ್ಸವ*
  • *ಕೂಡಿಗೆ : ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ : ಶಿಕ್ಷಕರ ಸೇವೆ ಅನನ್ಯ : ಎಸ್.ಎ.ಯೋಗೇಶ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆ ಸುಸಜ್ಜಿತ : ಎಲ್ಲಾ ರೀತಿಯ ಚಿಕಿತ್ಸೆ, ಸೌಲಭ್ಯಗಳೊಂದಿಗೆ ಕಾರ್ಯನಿರ್ವಹಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆ ಸುಸಜ್ಜಿತ : ಎಲ್ಲಾ ರೀತಿಯ ಚಿಕಿತ್ಸೆ, ಸೌಲಭ್ಯಗಳೊಂದಿಗೆ ಕಾರ್ಯನಿರ್ವಹಣೆ*

ಜೂನ್ 26, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ ಜೂ.26 NEWS DESK : ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಸಂಪೂರ್ಣ ಸುಸಜ್ಜಿತಗೊಂಡಿದ್ದು, ರೋಗಿಗಳಿಗೆ ಎಲ್ಲಾ ರೀತಿಯ ವೈದ್ಯಕೀಯ ಚಿಕಿತ್ಸೆ ಹಾಗೂ ಅಗತ್ಯ ಸೌಲಭ್ಯಗಳು ಲಭ್ಯವಿವೆ ಎಂದು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರು ತಿಳಿಸಿದ್ದಾರೆ. ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಸದಸ್ಯೆ ಮಂಜುಳಾ ಹರೀಶ್, ಪ್ರತಿ ಸೋಮವಾರ ಬೆಳಿಗ್ಗೆ 8 ರಿಂದ 9 ಗಂಟೆಯವರೆಗೆ ಆಸ್ಪತ್ರೆಯಲ್ಲಿ ವೈದ್ಯರು ಲಭ್ಯವಿದ್ದು, ರೋಗಿಗಳಿಗೆ ಎಲ್ಲಾ ಅಗತ್ಯ ಔಷಧಿ ಹಾಗೂ ಮಾತ್ರೆಗಳನ್ನು ಸ್ಥಳದಲ್ಲಿಯೇ ವಿತರಣೆ ಮಾಡಲಾಗುತ್ತಿದೆ ಎಂದು ಹೇಳಿದರು. ಆಸ್ಪತ್ರೆ ನವೀಕರಣ ಕೊನೆಯ ಹಂತದಲ್ಲಿ ::  ಶಾಸಕ ಡಾ. ಮಂತರ್‌ಗೌಡ ಅವರು ರಕ್ಷಾ ಸಮಿತಿಯ ಅಧ್ಯಕ್ಷರಾಗಿದ್ದು, ಆಸ್ಪತ್ರೆಯನ್ನು ಇನ್ನಷ್ಟು ಸುಧಾರಿಸಲು ಎಲ್ಲ ಪ್ರಯತ್ನಗಳು ನಡೆಯುತ್ತಿವೆ. ಈಗಾಗಲೇ ರೂ. 1.60 ಕೋಟಿ ವೆಚ್ಚದಲ್ಲಿ ನವೀಕರಣ ಕಾಮಗಾರಿಗಳು ಅಂತಿಮ ಹಂತದಲ್ಲಿದ್ದು, 17 ಲಕ್ಷ ರೂ. ಮೌಲ್ಯದ ಔಷಧಿ, ಮಾತ್ರೆಗಳು ಹಾಗೂ ಹೈಟೆಕ್ ರಕ್ತ ಪರೀಕ್ಷಾ ಘಟಕಕ್ಕೆ ಅಗತ್ಯವಾದ ರಾಸಾಯನಿಕಗಳನ್ನು ಖರೀದಿ ಮಾಡಲಾಗಿದೆ. ರೋಗಿಗಳಿಗೆ ಎಲ್ಲಾ ರೀತಿಯ ಪರೀಕ್ಷೆಗಳು ಆಸ್ಪತ್ರೆಯಲ್ಲಿಯೇ ನಡೆಸಲಾಗುತ್ತಿದ್ದು, ಎಲ್ಲಾ ಔಷಧಿಗಳು ಲಭ್ಯವಿವೆ ಎಂದು ಅವರು ತಿಳಿಸಿದರು. :: ವೈದ್ಯರ ತಂಡ ಮತ್ತು ವಿಶೇಷ ಸೇವೆಗಳು :: ಆಸ್ಪತ್ರೆಯಲ್ಲಿ ಒಟ್ಟು 8 ಮಂದಿ ವೈದ್ಯರು ಸೇವೆ ನೀಡುತ್ತಿದ್ದಾರೆ. ಶೀಘ್ರದಲ್ಲೇ ಮಕ್ಕಳ ತಜ್ಞರ ಸೇವೆ ಲಭ್ಯವಾಗಲಿದೆ. ಶಸ್ತ್ರಚಿಕಿತ್ಸಕ, ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞ, ಇಎನ್‍ಟಿ ತಜ್ಞ, ಫಿಜಿಷಿಯನ್ ಹಾಗೂ ದಂತವೈದ್ಯರು ನಿಯಮಿತವಾಗಿ ಲಭ್ಯವಿದ್ದಾರೆ. ಕೀಲು ಮತ್ತು ಮೂಳೆ ತಜ್ಞರು ಸೋಮವಾರ, ಗುರುವಾರ, ಶನಿವಾರ ಮತ್ತು ಭಾನುವಾರದಂದು ಲಭ್ಯವಿದ್ದು, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಿಂದ ನೇತ್ರ ತಜ್ಞ, ಶ್ವಾಸಕೋಸ ತಜ್ಞ ಮತ್ತು ಮಕ್ಕಳ ತಜ್ಞರ ಸೇವೆ ಸೋಮವಾರದಂದು ದೊರೆಯುತ್ತದೆ. ವಾರದಲ್ಲಿ ಎರಡು ದಿನ ಅರವಳಿಗೆ ತಜ್ಞರು ಲಭ್ಯವಿದ್ದು, ಎಲ್ಲಾ ರೀತಿಯ ಶಸ್ತ್ರಚಿಕಿತ್ಸೆಗಳು ನಡೆಯುತ್ತವೆ ಎಂದು ತಿಳಿಸಿದರು. :: ಡಯಾಲಿಸಿಸ್, ಕೋವಿಡ್ ಹಾಗೂ ಇತರ ಸೌಲಭ್ಯಗಳು ::  ಆಸ್ಪತ್ರೆಯ ಡಯಾಲಿಸಿಸ್ ಘಟಕದಲ್ಲಿ 6 ಯಂತ್ರಗಳು ಕಾರ್ಯನಿರ್ವಹಿಸುತ್ತಿದ್ದು, ತಿಂಗಳಿಗೆ ಸರಾಸರಿ 400 ಡಯಾಲಿಸಿಸ್ ಚಿಕಿತ್ಸೆ ನೀಡಲಾಗುತ್ತದೆ. 41 ರೋಗಿಗಳು ಸದಾ ಈ ಸೇವೆ ಪಡೆಯುತ್ತಿದ್ದಾರೆ ಎಂದು ಸಮಿತಿ ಸದಸ್ಯ ಕೆ.ಪಿ.ರವೀಶ್ ಮಾಹಿತಿ ನೀಡಿದರು. ಕೋವಿಡ್ ಸೋಂಕಿಗೆ ಸಂಬಂಧಿಸಿದಂತೆ ಆಸ್ಪತ್ರೆಯಲ್ಲಿ ಕೋವಿಡ್ ವಾರ್ಡ್, ವೆಂಟಿಲೇಟರ್, ಆಕ್ಸಿಜನ್ ಕಾನ್ಸ್ಟ್ರೇಟರ್ ಸೇರಿದಂತೆ ಎಲ್ಲಾ ಅಗತ್ಯ ಸೌಲಭ್ಯಗಳು ಲಭ್ಯವಿವೆ. ಟಿ.ಬಿ. ಕಾಯಿಲೆ ಪತ್ತೆ ಹಚ್ಚಲು ಅತ್ಯಾಧುನಿಕ ಸಿಬಿ ನ್ಯಾಟ್ ಯಂತ್ರವನ್ನು ಬಳಸಲಾಗುತ್ತಿದೆ. ಅನಸ್ತೇಷಿಯಾ ವರ್ಕ್ ಸ್ಟೇಷನ್ ಸಹ Hospitals ನಲ್ಲಿ ಸಕ್ರಿಯವಾಗಿದೆ. ಸದ್ಯಕ್ಕೆ 3 ಅಂಬ್ಯುಲೆನ್ಸ್ ವಾಹನಗಳು ಲಭ್ಯವಿದ್ದು, ತುರ್ತು ಸಂದರ್ಭದಲ್ಲೂ ತಕ್ಷಣ ಸೇವೆ ಒದಗಿಸಲಾಗುತ್ತದೆ. :: ಖಾಲಿ ಹುದ್ದೆಗಳ ಭರ್ತಿ ಶೀಘ್ರ ::  ಜೂನ್ 27 ರಂದು ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿಯಲ್ಲಿ ಅಧಿಕಾರಿ ಮತ್ತು ಸಿಬ್ಬಂದಿಗಳ ಆಯ್ಕೆ ಕೌನ್ಸಿಲಿಂಗ್ ನಡೆಯಲಿದೆ. ಇದರೊಂದಿಗೆ ಸೋಮವಾರಪೇಟೆ ಆಸ್ಪತ್ರೆಯಲ್ಲಿನ ಖಾಲಿ ಹುದ್ದೆಗಳು ಭರ್ತಿಯಾಗಲಿದ್ದು, ಆರೋಗ್ಯ ಸೇವೆ ಇನ್ನಷ್ಟು ಬಲಪಡೆಯಲಿದೆ. ಗೋಷ್ಠಿಯಲ್ಲಿ ಎನ್.ಎನ್.ರಮೇಶ್, ಎಚ್.ಕೆ.ಲೋಕೇಶ್ ಮತ್ತು ಜೇಕಬ್ ಸೈಮನ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿ ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಕೋಚನ ಚೇತನ್ ಆಯ್ಕೆ*

ಮಾರ್ಚ್ 23, 2026

*ಕಾನಡ್ಕ ಕುಟುಂಬದಿoದ 12ನೇ ವರ್ಷದ ಯುಗಾದಿ ಕ್ರೀಡಾಕೂಟದ ಸಂಭ್ರಮ : ಕ್ರೀಡೆಗಳಿಂದ ಹಬ್ಬದ ಮೆರುಗು ಇಮ್ಮಡಿ*

ಮಾರ್ಚ್ 22, 2026

*ಸಮೀರ್ ಗೆ “ರತ್ನ ಶ್ರೀ” ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ*

ಮಾರ್ಚ್ 22, 2026

*ಕಾನಡ್ಕ ಕುಟುಂಬದಿoದ 12ನೇ ವರ್ಷದ ಯುಗಾದಿ ಕ್ರೀಡಾಕೂಟದ ಸಂಭ್ರಮ : ಕ್ರೀಡೆಗಳಿಂದ ಹಬ್ಬದ ಮೆರುಗು ಇಮ್ಮಡಿ*

ಮಾರ್ಚ್ 22, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.22 : ಕಾನಡ್ಕ ಕುಟುಂಬದ ವತಿಯಿಂದ 12ನೇ ವರ್ಷದ ಯುಗಾದಿ ಕ್ರೀಡಾಕೂಟ ಸಂಭ್ರಮದಿoದ ನಡೆಯಿತು. ಮರಗೋಡಿನ…

*ಸಮೀರ್ ಗೆ “ರತ್ನ ಶ್ರೀ” ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ*

ಮಾರ್ಚ್ 22, 2026

*ಗ್ರಾಮಸ್ಥರಲ್ಲಿ ಭೀತಿ ಮೂಡಿಸಿದ್ದ ಕಾಡಾನೆ ಸೆರೆ*

ಮಾರ್ಚ್ 22, 2026

*ಹಾಕತ್ತೂರಿನ “ಯುವ ಸ್ಪಂದನ ಯೂತ್ ಫೌಂಡೇಶನ್” ಗೆ ನೂತನ ಪದಾಧಿಕಾರಿಗಳ ಆಯ್ಕೆ*

ಮಾರ್ಚ್ 22, 2026

*ಕಾಡಾನೆ ಮಾನವ ಸಂಘರ್ಷ ತಡೆಗೆ ಕೇಂದ್ರ ಸರಕಾರ ಏನು ಕ್ರಮ ಕೈಗೊಂಡಿದೆ*

ಮಾರ್ಚ್ 21, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಸಿಎನ್‌ಸಿ ವಿಚಾರಣ ಸಂಕಿರಣ : ಇನ್ನೊಬ್ಬರ ಹಕ್ಕನ್ನು ಕಸಿದುಕೊಳ್ಳಲು ಕೊಡವರು ತಮ್ಮ ಹಕ್ಕನ್ನು ಪ್ರತಿಪಾದಿಸುತ್ತಿಲ್ಲ : ಕೆ.ಪಿ.ಬಾಲಸುಬ್ರಹ್ಮಣ್ಯ ಅಭಿಮತ*

ಮಾರ್ಚ್ 21, 2026

*ಕಾರು ಮತ್ತು ಬೈಕ್ ಗಳ ನಡುವೆ ಡಿಕ್ಕಿ : ಇಬ್ಬರ ಸಾವು*

ಮಾರ್ಚ್ 21, 2026

*ವಿರಾಜಪೇಟೆ : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪ ತೆರೆ ಮಹೋತ್ಸವ*

ಮಾರ್ಚ್ 21, 2026

*ಕೂಡಿಗೆ : ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ : ಶಿಕ್ಷಕರ ಸೇವೆ ಅನನ್ಯ : ಎಸ್.ಎ.ಯೋಗೇಶ್*

ಮಾರ್ಚ್ 21, 2026

*ಭಾಗಮಂಡಲದಲ್ಲಿ ಜನಸ್ಪಂದನ ಸಭೆ : ಸಾರ್ವಜನಿಕರಿಂದ 85 ಅರ್ಜಿ ಸಲ್ಲಿಕೆ*

ಮಾರ್ಚ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.