Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ವಸತಿ ಶಾಲೆ, ವಿದ್ಯಾರ್ಥಿ ನಿಲಯ ಕಟ್ಟಡಗಳ ಸುಸ್ಥಿತಿ : ಲಿಖಿತ ವರದಿ ನೀಡಲು ಸಚಿವ ಎನ್.ಎಸ್.ಬೋಸರಾಜು ಸೂಚನೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಸತಿ ಶಾಲೆ, ವಿದ್ಯಾರ್ಥಿ ನಿಲಯ ಕಟ್ಟಡಗಳ ಸುಸ್ಥಿತಿ : ಲಿಖಿತ ವರದಿ ನೀಡಲು ಸಚಿವ ಎನ್.ಎಸ್.ಬೋಸರಾಜು ಸೂಚನೆ

ಜೂನ್ 27, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.27 NEWS DESK  : ವಸತಿ ಶಾಲೆ ಹಾಗೂ ವಿದ್ಯಾರ್ಥಿ ನಿಲಯ ಕಟ್ಟಡಗಳ ಸುಸ್ಥಿತಿ ಬಗ್ಗೆ 10 ದಿನದೊಳಗೆ ಲಿಖಿತ ವರದಿ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಮಳೆ ಹಾನಿ ಬಗ್ಗೆ ಮಾಹಿತಿ ಪಡೆದು ಸಚಿವರು ಮಾತನಾಡಿದರು. ಜಿಲ್ಲೆಯಲ್ಲಿ ಇನ್ನೂ 40 ದಿನಗಳ ಕಾಲ ಹೆಚ್ಚಿನ ಎಚ್ಚರ ವಹಿಸಬೇಕಿದೆ. ಇದನ್ನು ಗಂಭೀರವಾಗಿ ಪರಿಗಣಿಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸಚಿವರು ನಿರ್ದೇಶನ ನೀಡಿದರು.  ಅಧಿಕಾರಿಗಳು ತಮ್ಮ ಕ್ಷೇತ್ರ ವ್ಯಾಪ್ತಿಯ ಸ್ಥಳಕ್ಕೆ ಹಾಗಾಗ ಭೇಟಿ ನೀಡಬೇಕು. ಇದರಿಂದ ಸಮಸ್ಯೆ ಇದ್ದಲ್ಲಿ ಪರಿಹರಿಸಲು ಸಾಧ್ಯ ಎಂದರು. ಮುಂದಿನ ದಿನಗಳಲ್ಲಿ ಹೆಚ್ಚಿನ ಎಚ್ಚರ ವಹಿಸಬೇಕು. ಸಾರ್ವಜನಿಕರಿಗೆ ತೊಂದರೆ ಆಗದಂತೆ ಗಮನಹರಿಸಬೇಕು. ದೂರು ಬಾರದಂತೆ ಮುನ್ನೆಚ್ಚರ ವಹಿಸುವುದು ಅತ್ಯಗತ್ಯ ಎಂದು ಎನ್.ಎಸ್.ಭೋಸರಾಜು ಹೇಳಿದರು.
ಪ್ರಾಕೃತಿಕ‌ ವಿಕೋಪ ನಿರ್ವಹಣೆಗೆ ಜಿಲ್ಲಾಧಿಕಾರಿ ಅವರ ಪಿಡಿ ಖಾತೆಯಲ್ಲಿ 37 ಕೋಟಿ ಹಣವಿದೆ. ಹಾಗೆಯೇ ತಹಶಿಲ್ದಾರರ ಬಳಿ 2 ಕೋಟಿ ಹಣ ಇದೆ. ಮನೆ ಮತ್ತಿತರ ಹಾನಿಗೆ ಕೂಡಲೇ ಪರಿಹಾರ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಕಳೆದ ಬಾರಿ ಗ್ರಾ.ಪಂ.ಗಳಿಗೂ ಹಣ ನೀಡಲಾಗಿತ್ತು, ಈ ಬಾರಿಯೂ ಹಣ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು. ಕಳೆದ ಮೇ ಕೊನೆ ವಾರದಿಂದ ಸುರಿದ ವ್ಯಾಪಕ ಮಳೆಗೆ ವಿದ್ಯುತ್, ರಸ್ತೆ, ಸೇತುವೆ, ಮನೆ ಸೇರಿದಂತೆ ವಿವಿಧ ರೀತಿಯ ಹಾನಿಯಾಗಿದ್ದು, ವಿದ್ಯುತ್ ವ್ಯತ್ಯಯವನ್ನು ಆಯಾಯ ಸಂದರ್ಭದಲ್ಲಿಯೇ ಸರಿಪಡಿಸುವಂತಾಗಬೇಕು. ಆ ನಿಟ್ಟಿನಲ್ಲಿ ಸಿದ್ಧತೆ ಮಾಡಿಕೊಂಡಿರಬೇಕು ಎಂದು ಸಚಿವರು ಸಲಹೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಡಾ.ಮಂತರ್ ಗೌಡ ಮಳೆಗಾಲದಲ್ಲಿ ಕರ್ತವ್ಯ ನಿರ್ವಹಿಸುವ ಲೈನ್ ಮ್ಯಾನ್ ಹಾಗೂ ಗ್ಯಾಂಗ್ ಮನ್ ಗಳಿಗೆ ರೈನ್ ಕೋಟ್ ಸೇರಿದಂತೆ ಅಗತ್ಯ ಉಪಕರಣ ನೀಡಬೇಕು. ಜೊತೆಗೆ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ತಾಕೀತು ಮಾಡಿದರು. ರಾತ್ರಿ ವೇಳೆ ಮಡಿಕೇರಿ ನಗರದಲ್ಲಿ 8 ಗಂಟೆಯಾದರೂ ವಿದ್ಯುತ್ ಪೂರೈಕೆ ಇಲ್ಲ ಎಂಬ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ಆದ್ದರಿಂದ ಈ ಬಗ್ಗೆ ಎಚ್ಚರ ವಹಿಸುವಂತೆ ಶಾಸಕರು ಸೂಚಿಸಿದರು. ಲೋಕೋಪಯೋಗಿ, ಗ್ರಾಮೀಣ ರಸ್ತೆ ಸರಿಪಡಿಸುವಂತಾಗಬೇಕು. ಸಾರಿಗೆ ಸಂಚಾರಕ್ಕೆ ಯಾವುದೇ ರೀತಿ ವ್ಯತ್ಯಯ ಆಗದಂತೆ ಗಮನಹರಿಸುವಂತೆ ಶಾಸಕರು ನಿರ್ದೇಶನ ನೀಡಿದರು. ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಮುಂದಾಗಬೇಕು. ಆ ನಿಟ್ಟಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಸ್ಥಳೀಯ ಸಂಸ್ಥೆಗಳು ಮುನ್ನೆಚ್ಚರ ವಹಿಸಬೇಕು ಎಂದು ಸಚಿವರು ಸೂಚಿಸಿದರು. ತಾಲ್ಲೂಕು ಮಟ್ಟದಲ್ಲಿ ತಹಶಿಲ್ದಾರರು ಮತ್ತು ತಾಲ್ಲೂಕು ಪಂಚಾಯತ್ ಇಒಗಳು ಹಾಗೂ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು. ಸರ್ಕಾರಕ್ಕೆ ಒಳ್ಳೆಯ ಹೆಸರು ತರಬೇಕು. ಆ ದಿಸೆಯಲ್ಲಿ ಅಧಿಕಾರಿಗಳು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಕಟ್ಟುನಿಟ್ಟಿನ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಡಾ.ಮಂತರ್ ಗೌಡ  ಮಳೆಗಾಲದಲ್ಲಿಯೂ ಪ್ರವಾಸಿಗರು ಜಿಲ್ಲೆಗೆ ಹೆಚ್ವಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಾರೆ. ಆದ್ದರಿಂದ ಪ್ರವಾಸಿ ಸ್ಥಳಗಳಲ್ಲಿ ಸೂಚನಾ ಫಲಕ ಅಳವಡಿಸಬೇಕು. ಜತೆಗೆ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದು ನಿರ್ದೇಶನ ನೀಡಿದರು. ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ವುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ವಿವಿಧ ಇಲಾಖೆ ಅಧಿಕಾರಿಗಳು ಪ್ರಾಕೃತಿಕ ವಿಕೋಪ ನಿರ್ವಹಣೆ ಬಗ್ಗೆ ಮಾಹಿತಿ ನೀಡಿದರು.

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ವಿರಾಜಪೇಟೆ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶಾರದಾ, ಲಕ್ಷ್ಮಿ ಪೂಜೆ

ಅಕ್ಟೋಬರ್ 19, 2026

ವಿರಾಜಪೇಟೆ ಮಹಿಳಾ ಸಹಕಾರ ಸಂಘದಿಂದ ಶಾರದಾ ಪೂಜೆ

ಅಕ್ಟೋಬರ್ 19, 2026

ಗೋಣಿಕೊಪ್ಪ ದಸರಾದಲ್ಲಿ ಗಮನ ಸೆಳೆದ ಗೀತೆಗಳ ಗಾನಸುಧೆ, ಮಕ್ಕಳ ನೃತ್ಯ ವೈಭವ

ಅಕ್ಟೋಬರ್ 19, 2026

ವಿರಾಜಪೇಟೆ ಮಹಿಳಾ ಸಹಕಾರ ಸಂಘದಿಂದ ಶಾರದಾ ಪೂಜೆ

ಅಕ್ಟೋಬರ್ 19, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಅ.19 NEWS DESK : ಇಲ್ಲಿನ ನಂ. 371ನೇ ಕೊಡಗು ಮಹಿಳಾ ಸಹಕಾರ ಸಂಘ ನಿಯಮಿತದ ವತಿಯಿಂದ ಮಹಿಳಾ…

ಗೋಣಿಕೊಪ್ಪ ದಸರಾದಲ್ಲಿ ಗಮನ ಸೆಳೆದ ಗೀತೆಗಳ ಗಾನಸುಧೆ, ಮಕ್ಕಳ ನೃತ್ಯ ವೈಭವ

ಅಕ್ಟೋಬರ್ 19, 2026

ಟಿ. ಶೆಟ್ಟಿಗೇರಿಯಲ್ಲಿ ₹10 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಆಟೋ ತಂಗುದಾಣ ಲೋಕಾರ್ಪಣೆ

ಅಕ್ಟೋಬರ್ 19, 2026

ಮಾದಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರಕ್ಕೆ ಮಾಜಿ ಸಚಿವ ಅಪ್ಪಚ್ಚು ರಂಜನ್ ಚಾಲನೆ

ಅಕ್ಟೋಬರ್ 19, 2026

ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಗಳನ್ನು ಹೊರ ತರಲು ಪ್ರತಿಭಾ ದಿನಾಚರಣೆಯು ವೇದಿಕೆ

ಅಕ್ಟೋಬರ್ 19, 2026

ಮಡಿಕೇರಿಯಲ್ಲಿ ಸಂಭ್ರಮದ 9ನೇ ವರ್ಷದ ಮಹಿಳಾ ದಸರಾ; ಮಹಿಳೆಯರ ಸಾಧನೆಗೆ ಶಿಕ್ಷಣ ಅತ್ಯವಶ್ಯ: ವಿಜಯಲಕ್ಷ್ಮಿ ಸಿಂಗ್

ಅಕ್ಟೋಬರ್ 19, 2026

ಕಾವೇರಿ ತುಲಾ ಸಂಕ್ರಮಣದ ಹಿನ್ನೆಲೆ : ದೇವಟ್ ಪರಂಬ್ ನಲ್ಲಿ ಬೊತ್ತ್ ಬಳ್ಳಿ ಸುತ್ತಿದ ಕೋಲಿನ ಮೇಲೆ ದೋಸೆ ಮತ್ತು ಪುಟ್ಟ್ ಇಟ್ಟು ಸಿಎನ್‌ಸಿ ಸ್ಮರಣೆ

ಅಕ್ಟೋಬರ್ 19, 2026

ಕರ್ನಾಟಕ ಪ್ಲಾಂಟರ್ಸ್ ಅಸೋಸಿಯೇಷನ್ ನ ನೂತನ ಅಧ್ಯಕ್ಷ ಪೀಟು ಕಾರ್ಯಪ್ಪ ಅವರನ್ನು ಅಭಿನಂದಿಸಿದ ಕೊಡವ ವ್ಯಾಪಾರೋದ್ಯಮಿಗಳ ಸೌಹಾರ್ದ ಕ್ರೆಡಿಟ್ ಕೋಆಪರೇಟಿವ್ ಲಿಮಿಟೆಡ್

ಅಕ್ಟೋಬರ್ 19, 2026

ದಸರಾ ಪ್ರಯುಕ್ತ ಶ್ರೀ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ದುರ್ಗಾಪೂಜೆ

ಅಕ್ಟೋಬರ್ 19, 2026

ಕೊಡಗಿನಲ್ಲಿ ಪರಿಶಿಷ್ಟ ಜಾತಿಯ ಫಲಾನುಭವಿಗೆ ಮೊಬೈಲ್ ಕ್ಯಾಂಟೀನ್ ವಾಹನ ಹಸ್ತಾಂತರ

ಅಕ್ಟೋಬರ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.