ಮಡಿಕೇರಿ ಜೂ.28 NEWS DESK : ಕೊಡಗು ಜಿಲ್ಲಾ ಬಿಲ್ಲವ ಸಮಾಜದ ಯುವ ವೇದಿಕೆಯ ಜಿಲ್ಲಾ ಸಂಚಾಲಕರಾಗಿ ವಿನೋದ್ ಪೂಜಾರಿ ಸಿದ್ದಾಪುರ ಆಯ್ಕೆಯಾಗಿದ್ದಾರೆ. ಕೊಡಗು ಜಿಲ್ಲಾ ಬಿಲ್ಲವ ಸಮಾಜದ ಜಿಲ್ಲಾಧ್ಯಕ್ಷ ಲಿಂಗಪ್ಪ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಗರದ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ನಡೆದ ಸಮಾಜದ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಬಿಲ್ಲವ ಸಮಾಜದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕರ್ಕೇರ, ಖಜಾಂಚಿ ಮಣಿ ಮುಖೇಶ್, ಉಪಾಧ್ಯಕ್ಷ ಸುಧೀರ್, ಸಂಘಟನಾ ಕಾರ್ಯದರ್ಶಿಗಳಾದ ಶೇಖರ್, ಸುರೇಶ್ ಹಾಗೂ ಬಿಲ್ಲವ ಕುಲಬಾಂಧವರು ಸಭೆಯಲ್ಲಿ ಉಪಸ್ಥಿತರಿದ್ದರು.












