ಕುಶಾಲನಗರ ಜೂ.30 NEWS DESK : ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಕೊಡಗು ಜಿಲ್ಲಾ ಘಟಕ ಹಾಗೂ ಚಿಕ್ಕ ಅಳುವಾರದ ಕೊಡಗು ವಿವಿ ವತಿಯಿಂದ ಜು.3 ರಂದು ವಚನ ಸಾಹಿತ್ಯ ಪಿತಾಮಹ ಫ.ಗು.ಹಳಕಟ್ಟಿ ಅವರ ಜನ್ಮದಿನಾಚರಣೆ ಅಂಗವಾಗಿ ” ಶರಣ ಸ್ಮರಣೆ ” ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 12 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ ಪೀಠಾಧ್ಯಕ್ಷ ಸದಾಶಿವ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ.
ನಿವೃತ್ತ ಜಿಲ್ಲಾಧಿಕಾರಿ ಹಾಗೂ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ರಾಜ್ಯಾಧ್ಯಕ್ಷ ಡಾ.ಸಿ.ಸೋಮಶೇಖರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕೊಡಗು ವಿವಿ ಕುಲಪತಿ ಡಾ.ಅಶೋಕ್ ಸಂಗಪ್ಪ ಆಲೂರ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಹಾಸನ ವಿಶ್ವ ವಿದ್ಯಾಲಯದ ಕುಲಪತಿ ಡಾ.ತಾರನಾಥ್ ಆಗಮಿಸಲಿದ್ದಾರೆ. ಶಸಾಪ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಸೋಮಶೇಖರ ಗಾಂಜಿ, ಕೊಡಗು ಜಿಲ್ಲಾ ವೀರಶೈವ ಮಹಾಸಭಾ ಅಧ್ಯಕ್ಷ ಹೆಚ್.ವಿ.ಶಿವಪ್ಪ, ಹುಣಸೂರು ಜ್ಞಾನಧಾರಾ ಪದವಿ ಕಾಲೇಜು ಅಧ್ಯಕ್ಷ ಡಾ.ಜೆ.ಸಿ.ನಾಗೇಂದ್ರ, ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ ಉಪಸ್ಥಿತರು ಎಂದು ಶಸಾಪ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ನಟರಾಜು ತಿಳಿಸಿದ್ದಾರೆ.











