ಮಡಿಕೇರಿ ಜೂ.30 NEWS DESK : ಜೀವನದಿ ಕಾವೇರಿಯ ಉಗಮಸ್ಥಾನ ಕೊಡಗು ಸೇರಿದಂತೆ ರಾಜ್ಯವ್ಯಾಪಿ ಉತ್ತಮ ಮಳೆಯಾದ ಬೆನ್ನಲ್ಲೇ ಇದೇ ಮೊದಲ ಬಾರಿಗೆ ಜೂನ್ ತಿಂಗಳಿನಲ್ಲೇ ಭರ್ತಿಯಾಗುವ ಮೂಲಕ ಕೆಆರ್‍ಎಸ್ ಜಲಾಶಯ ಹೊಸ ದಾಖಲೆ ಸೃಷ್ಟಿಸಿದೆ. ಭರ್ತಿಯಾದ ಕೃಷ್ಣರಾಜಸಾಗರ ಜಲಾಶಯಕ್ಕೆ 4ನೇ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾಗಿನ ಅರ್ಪಿಸಿದರು. ಈಗಾಗಲೇ 2013, 2014, 2024 ಈ ಮೂರು ವರ್ಷ ಕಾವೇರಿ ತಾಯಿಗೆ ಬಾಗಿನ ಅರ್ಪಿಸಿದ ಹೆಗ್ಗಳಿಕೆ ಸಿದ್ದರಾಮಯ್ಯ ಅವರದ್ದು.











