ಹೈದರಾಬಾದ್ NEWS DESK ಜೂ.30 : ರಾಸಾಯನಿಕ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿ 8 ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹೈದರಾಬಾದ್ ನ ತೆಲಂಗಾಣದ ಸಂಗಾರೆಡ್ಡಿ ಜಲ್ಲೆಯ ಪಾಶಮೈಲರಾಮ್ ನಲ್ಲಿ ನಡೆದಿದೆ. ರಿಯಾಕ್ಟರ್ ನಲ್ಲಿನ ಸ್ಫೋಟದಿಂದ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿ 25ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ. ಕಾರ್ಖಾನೆಯೊಳಗೆ ಮತ್ತಷ್ಟು ಕಾರ್ಮಿಕರು ಸಿಲುಕಿಕೊಂಡಿರುವ ಸಂಶಯ ವ್ಯಕ್ತವಾಗಿದೆ. ಘಟನೆ ಕುರಿತು ಮುಖ್ಯಮಂತ್ರಿ ಎ.ರೇವಂತ್ ರೆಡ್ಡಿ ಸಂತಾಪ ಸೂಚಿಸಿದ್ದಾರೆ. ಸೂಕ್ತ ರಕ್ಷಣಾ ಕಾರ್ಯಕ್ಕೆ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ.









