ಸೋಮವಾರಪೇಟೆ ಜೂ.30 NEWS DESK : ಪಟ್ಟಣದ ಮಳೆಹಾನಿ ಪ್ರದೇಶಗಳಿಗೆ ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಶ್ವ ಮಾನವ ಕುವೆಂಪು ವಿದ್ಯಾಸಂಸ್ಥೆ ಆವರಣದಲ್ಲಿ ತಡೆಗೋಡೆ ಕುಸಿದಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಅಪ್ಪಚ್ಚು ರಂಜನ್, ಸಂಸ್ಥೆಯ ಅಧ್ಯಕ್ಷರಾದ ಎ.ಆರ್.ಮುತ್ತಣ್ಣ ಅವರಿಂದ ವಿವರ ಪಡೆದು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲು ಸೂಚಿಸಿದರು. ನಂತರ ಕುಸಿಯುವ ಹಂತದಲ್ಲಿರುವ ಟರ್ಫ್ ಗ್ರೌಂಡ್ ನ ತಡೆಗೋಡೆಯನ್ನು ಪರಿಶೀಲಿಸಿ, ಅಧಿಕಾರಿಗಳೊಂದಿಗೆ ಚರ್ಚಿಸಿದರು. ಗುತ್ತಿಗೆದಾರರಿಗೆ ಪುನರನಿರ್ಮಾಣ ಮಾಡುವಂತೆ ಸೂಚಿಸಿದರು.












