ಮಡಿಕೇರಿ ಜೂ.30 NEWS DESK : ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ (ಲಿಡ್ಕರ್) ವತಿಯಿಂದ 2025-26ನೇ ಸಾಲಿಗೆ ಪರಿಶಿಷ್ಟ ಜಾತಿಯ ಮಾದಿಗ, ಸಮಗಾರ, ಡೋರ, ಮೋಚಿ, ಮೋಚಿಗಾರ ಜಾತಿಗೆ ಸೇರಿದ ಚರ್ಮ ಕುಶಲಕರ್ಮಿಗಳ ಕುಟುಂಬದ ನಿರುದ್ಯೋಗಿ ವಿದ್ಯಾವಂತ ಯುವಕ-ಯುವತಿಯರಿಗೆ ಎಸ್‍ಎಸ್‍ಎಲ್‍ಸಿ, ಪಿಯುಸಿ, ಪದವಿ ಪಡೆದಿರುವವರಿಗೆ ಚರ್ಮೋದ್ಯೋಮದಲ್ಲಿ ಹೊಸ ತಂತ್ರಜ್ಞಾನ, ವಿನ್ಯಾಶ ಮತ್ತು ಮಾರುಕಟ್ಟೆ ಕುರಿತು ತರಬೇತಿಗೆ ದೆಹಲಿ, ತಮಿಳುನಾಡು, ಮಹಾರಾಷ್ಟ್ರ, ಉತ್ತರಪ್ರದೇಶ, ಪಶ್ಚಿಮ ಬಂಗಾಳಕ್ಕೆ ನಿಗಮದ ವತಿಯಿಂದಿ ತರಬೇತಿಗೆ ನಿಯೋಜನೆ ಮಾಡಲಾಗುತ್ತದೆ. ನಿಯೋಜನೆಗೊಂಡ ವಿದ್ಯಾರ್ಥಿಗಳಿಗೆ ಉಳಿದುಕೊಳ್ಳಲು ವಸತಿ ಹಾಗೂ ಶಿಷ್ಯವೇತನ ನೀಡಲಾಗುವುದು. ಆಸಕ್ತರು ಜುಲೈ 5 ರೊಳಗೆ ನಗರದ ಲಿಡ್ಕರ್ ಕಚೇರಿಗೆ ಭೇಟಿ ನೀಡಿ ಸೂಕ್ತ ದಾಖಲಾತಿಗಳನ್ನು ನೀಡಿ ಹೆಸರು ನೋಂದಾಯಿಸಿಕೊಳ್ಳಲು ಕೋರಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಸಂಯೋಜಕರು ಲಿಡ್ಕರ್ ಕೂಡಗು ಜಿಲ್ಲೆ ಮೊಬೈಲ್ ಸಂಖ್ಯೆ: 9741833307, 7795603247 ನ್ನು ಸಂಪರ್ಕಿಸಬಹುದು ಎಂದು ಡಾ.ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಜಿಲ್ಲಾ ಸಂಯೋಜಕರು ತಿಳಿಸಿದ್ದಾರೆ.











