ಚೆಟ್ಟಳ್ಳಿ NEWS DESK ಜೂ.30 : ವಿರಾಜಪೇಟೆ ತಾಲ್ಲೂಕು ಬಿಟ್ಟಂಗಾಲದಲ್ಲಿರುವ ಪುಚ್ಚಿಮಾಂಡ ಐನ್ ಮನೆಗೆ ಇಂದು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅವರು ಭೇಟಿ ನೀಡಿದರು. ಐನ್ ಮನೆಯಲ್ಲಿ ನಡೆಯುತ್ತಿರುವ ಧಾರ್ಮಿಕ ಉತ್ಸವದಲ್ಲಿ ಪಾಲ್ಗೊಂಡರು. ಐನ್ ಮನೆಯಲ್ಲಿ ನಡೆಯುತ್ತಿರುವ ಶ್ರೀ ವಿಷ್ಣುಮೂರ್ತಿ ದೈವ ಕೋಲದಲ್ಲಿ ಭಾಗವಹಿಸಿ ಆಶೀರ್ವಾದ ಹಾಗೂ ಪ್ರಸಾದ ಪಡೆದರು. ಈ ಸಂದರ್ಭ ಪುಚ್ಚಿಮಾಂಡ ಕುಟುಂಬಸ್ಥರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.










