ಹೈದರಾಬಾದ್ ಜು.1 NEWS DESK : ಸಿಗಾಚಿ ಇಂಡಸ್ಟ್ರೀಸ್‌ನ ಪಾಶಮೈಲಾರಂನಲ್ಲಿರುವ ಔಷಧ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 35 ಕ್ಕೆ ಏರಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ದೃಢಪಡಿಸಿದ್ದಾರೆ. ಅವಶೇಷಗಳಿಂದ 31 ಶವಗಳನ್ನು ಹೊರತೆಗೆಯಲಾಗಿದೆ ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗ ಮೂವರು ಸಾವನ್ನಪ್ಪಿದ್ದಾರೆ” ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪರಿತೋಷ್ ಪಂಕಜ್ ಪಿಟಿಐಗೆ ತಿಳಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆಯ ಅಂತಿಮ ಹಂತ ಇನ್ನೂ ನಡೆಯುತ್ತಿದೆ ಎಂದು ಅವರು ಹೇಳಿದರು. ತೆಲಂಗಾಣ ರಾಸಾಯನಿಕ ಕಾರ್ಖಾನೆ ಸ್ಫೋಟದಲ್ಲಿ ಮೃತಪಟ್ಟ ಕನಿಷ್ಠ ಎಂಟು ಜನರ ಕುಟುಂಬಗಳಿಗೆ ತಲಾ ಎರಡು ಲಕ್ಷ ರೂಪಾಯಿಗಳನ್ನು ಪರಿಹಾರವಾಗಿ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದರು. ಗಾಯಗೊಂಡ ಸುಮಾರು ಹನ್ನೆರಡು ಜನರಿಗೆ ಐವತ್ತು ಸಾವಿರ ರೂಪಾಯಿಗಳನ್ನು ನೀಡಲಾಗುವುದು ಎಂದು ಅವರು ಹೇಳಿದರು.











