
ಮಡಿಕೇರಿ ಜು.2 NEWS DESK : ವಿರಾಜಪೇಟೆ ತಾಲ್ಲೂಕಿನ ವಿ ಬಾಡಗದಲ್ಲಿ ಮಹತ್ವಕಾಂಕ್ಷೆಯ ವಿವಿಧ ಕ್ರೀಡಾ ತರಬೇತಿ ಕೇಂದ್ರಕ್ಕೆ ಜಾಗ ಗುರುತಿಸಲಾಗಿದೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ವಿರಾಜಪೇಟೆ ತಾಲ್ಲೂಕಿನ ವಿ ಬಾಡಗದಲ್ಲಿ ಮಹತ್ವಕಾಂಕ್ಷೆಯ ವಿವಿಧ ಕ್ರೀಡಾ ತರಬೇತಿ ಕೇಂದ್ರಕ್ಕೆ ಹನ್ನೊಂದು ಎಕರೆ ಸರ್ಕಾರಿ ಜಾಗವನ್ನು ಕಾಯ್ದಿರಿಸುವಂತೆ ತಹಶೀಲ್ದಾರರಿಗೆ ಸೂಚಿಸಿದರು. ಅದರಂತೆ ತಹಶೀಲ್ದಾರ್ ರವರ ನೇತೃತ್ವದಲ್ಲಿ ಜಾಗಕ್ಕೆ ತೆರಳಿದ ಕಂದಾಯ ಇಲಾಖೆಯ ಅಧಿಕಾರಿಗಳು 11 ಎಕರೆ ಜಾಗವನ್ನು ಸ್ವಾಧೀನ ಪಡಿಸಿಕೊಂಡರು.









