Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾನಡ್ಕ ಕುಟುಂಬದಿoದ 12ನೇ ವರ್ಷದ ಯುಗಾದಿ ಕ್ರೀಡಾಕೂಟದ ಸಂಭ್ರಮ : ಕ್ರೀಡೆಗಳಿಂದ ಹಬ್ಬದ ಮೆರುಗು ಇಮ್ಮಡಿ*
  • *ಸಮೀರ್ ಗೆ “ರತ್ನ ಶ್ರೀ” ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ*
  • *ಗ್ರಾಮಸ್ಥರಲ್ಲಿ ಭೀತಿ ಮೂಡಿಸಿದ್ದ ಕಾಡಾನೆ ಸೆರೆ*
  • *ಹಾಕತ್ತೂರಿನ “ಯುವ ಸ್ಪಂದನ ಯೂತ್ ಫೌಂಡೇಶನ್” ಗೆ ನೂತನ ಪದಾಧಿಕಾರಿಗಳ ಆಯ್ಕೆ*
  • *ಕಾಡಾನೆ ಮಾನವ ಸಂಘರ್ಷ ತಡೆಗೆ ಕೇಂದ್ರ ಸರಕಾರ ಏನು ಕ್ರಮ ಕೈಗೊಂಡಿದೆ*
  • *ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಸಿಎನ್‌ಸಿ ವಿಚಾರಣ ಸಂಕಿರಣ : ಇನ್ನೊಬ್ಬರ ಹಕ್ಕನ್ನು ಕಸಿದುಕೊಳ್ಳಲು ಕೊಡವರು ತಮ್ಮ ಹಕ್ಕನ್ನು ಪ್ರತಿಪಾದಿಸುತ್ತಿಲ್ಲ : ಕೆ.ಪಿ.ಬಾಲಸುಬ್ರಹ್ಮಣ್ಯ ಅಭಿಮತ*
  • *ಕಾರು ಮತ್ತು ಬೈಕ್ ಗಳ ನಡುವೆ ಡಿಕ್ಕಿ : ಇಬ್ಬರ ಸಾವು*
  • *ವಿರಾಜಪೇಟೆ : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪ ತೆರೆ ಮಹೋತ್ಸವ*
  • *ಕೂಡಿಗೆ : ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ : ಶಿಕ್ಷಕರ ಸೇವೆ ಅನನ್ಯ : ಎಸ್.ಎ.ಯೋಗೇಶ್*
  • *ಭಾಗಮಂಡಲದಲ್ಲಿ ಜನಸ್ಪಂದನ ಸಭೆ : ಸಾರ್ವಜನಿಕರಿಂದ 85 ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜು.9 ರಂದು ವಿರಾಜಪೇಟೆ ಮತ್ತು ಕುಶಾಲನಗರದಲ್ಲಿ ಪ್ರತಿಭಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜು.9 ರಂದು ವಿರಾಜಪೇಟೆ ಮತ್ತು ಕುಶಾಲನಗರದಲ್ಲಿ ಪ್ರತಿಭಟನೆ*

ಜುಲೈ 2, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.2 NEWS DESK : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಗ್ರಾ.ಪಂ ನೌಕರರ ಸಂಘ ಹಾಗೂ ವಿವಿಧ ಕಾರ್ಮಿಕ ಸಂಘಟನೆಗಳ ವತಿಯಿಂದ ಜು.9 ರಂದು ವಿರಾಜಪೇಟೆ ಮತ್ತು ಕುಶಾಲನಗರ ತಹಶೀಲ್ದಾರರ ಕಚೇರಿ ಎದುರು ಪ್ರತಿಭಟನೆ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯ್ತಿ ನೌಕರರ ಸಂಘದ ಕೊಡಗು ಜಿಲ್ಲಾಧ್ಯಕ್ಷ ಪಿ.ಆರ್.ಭರತ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕಾರ್ಪೋರೇಟ್ ಸಂಸ್ಥೆಗಳ ಅನುಕೂಲಕ್ಕಾಗಿ ಕೇಂದ್ರ ಸರ್ಕಾರ ರೂಪಿಸಿರುವ ಕಾರ್ಮಿಕ ವಿರೋಧಿ 4 ಸಂಹಿತೆಗಳನ್ನು ರದ್ದು ಪಡಿಸಬೇಕೆಂದು ಒತ್ತಾಯಿಸಿ ಮತ್ತು ಕೆಲಸದ ಅವಧಿಯನ್ನು 12 ಗಂಟೆಗೆ ವಿಸ್ತರಣೆ ಮಾಡಿರುವ ಕ್ರಮವನ್ನು ವಿರೋಧಿಸಿ ಬೆಳಿಗ್ಗೆ 10.30 ಗಂಟೆಗೆ ಪ್ರತಿಭಟನೆ ನಡೆಸಲಾಗುವುದು. ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ ಕಾರ್ಮಿಕ ಸಂಘಟನೆಯಲ್ಲಿ ಸಂಯೋಜನೆಗೊಂಡಿರುವ ಎಲ್ಲಾ ಸಂಘಟನೆಗಳು ಪ್ರತಿಭಟನೆಯಲ್ಲಿ ಪಾಲ್ಲೊಳ್ಳಲಿವೆ ಎಂದು ಹೇಳಿದ್ದಾರೆ.
ದೇಶದಲ್ಲಿ ಸುಮಾರು 50 ಕೋಟಿಯಷ್ಟು ದುಡಿಯುವ ವರ್ಗವಿದೆ. ಕಾರ್ಮಿಕರ ಹೋರಾಟದ ಫಲವಾಗಿ ಕೆಲಸದ ಸಮಯ 8 ಗಂಟೆ ಎಂದು ನಿಗಧಿಯಾಗಿತ್ತು. ಆದರೆ ಕೇಂದ್ರ ಸರ್ಕಾರ ಕಾರ್ಪೋರೇಟ್ ಸಂಸ್ಥೆಗಳಿಗೆ ಲಾಭ ಮಾಡಿಕೊಡಲು 12 ಗಂಟೆ ದುಡಿಯಬೇಕು ಎಂದು ಹೇಳುತ್ತಿದೆ. ಇದು ಕಾರ್ಮಿಕರನ್ನು ಜೀತದಾಳುಗಳಂತೆ ದುಡಿಸಿಕೊಳ್ಳುವ ಅಪಾಯಕಾರಿ ಬೆಳವಣಿಗೆಯಾಗಿದೆ ಎಂದು ಆರೋಪಿಸಿದ್ದಾರೆ.
*ಬೇಡಿಕೆಗಳು*
ಕೆಲಸದ ಅವಧಿ 8 ಗಂಟೆ ಖಾಯಂಗೊಳಿಸಬೇಕು, ಉದ್ಯೋಗವನ್ನು ಖಾಯಂಗೊಳಿಸಬೇಕು, ಕೆಲಸಕ್ಕೆ ತಕ್ಕ ವೇತನ, ಸುರಕ್ಷತೆ, ಮುಷ್ಕರದ ಹಕ್ಕನ್ನು ಒದಗಿಸಬೇಕು, ಪ್ರಸ್ತುತ ಸ್ಥಿತಿಗೆ ಅನುಗುಣವಾಗಿ ಸಂಘಟಿತ, ಅಸಂಘಟಿತ, ಗುತ್ತಿಗೆ ಕಾರ್ಮಿಕರು ಮತ್ತು ಸ್ಕೀಂ ನೌಕರರಿಗೆ ರಾಷ್ಟ್ರವ್ಯಾಪಿ ಅನ್ವಯವಾಗುವಂತೆ 26 ಸಾವಿರ ರೂ. ಹಾಗೂ ರಾಜ್ಯವ್ಯಾಪಿ 36 ಸಾವಿರ ರೂ. ಕನಿಷ್ಟ ವೇತನ ನಿಗದಿಪಡಿಸಬೇಕು. ಕೃಷಿ, ತೋಟ ಸೇರಿದಂತೆ ಎಲ್ಲಾ ವಿಭಾಗದ ಕಾರ್ಮಿಕರಿಗೆ ಕನಿಷ್ಟ ಮಾಸಿಕ 9 ಸಾವಿರ ರೂ. ಪಿಂಚಣಿ ಹಾಗೂ ಸಾಮಾಜಿಕ ಭದ್ರತೆಯನ್ನು ಖಾತರಿಪಡಿಸಬೇಕು, ಎನ್‍ಪಿಎಸ್ ಮತ್ತು ಯುಪಿಎಸ್ ರದ್ದುಪಡಿಸಿ, ಹಳೆಯ ಪಿಂಚಣಿ ಯೋಜನೆಯನ್ನೆ ಮರು ಸ್ಥಾಪಿಸಬೇಕು, ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು, ಆಹಾರ, ಔಷಧಿಗಳು, ಕೃಷಿ ಸಾಮಗ್ರಿ ಮುಂತಾದ ಅಗತ್ಯ ವಸ್ತುಗಳ ಮೇಲಿನ ಜಿಎಸ್‍ಟಿ ತೆಗೆಯಬೇಕು, ಪೆಟ್ರೋಲ್, ಡೀಸೆಲ್, ಅಡುಗೆ ಅನಿಲದ ಮೇಲಿನ ಕೇಂದ್ರೀಯ ಅಬಕಾರಿ ಸುಂಕ ಇಳಿಸಬೇಕು, ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಸಾರ್ವತ್ರೀಕರಣಗೊಳಿಸಿ ಆಹಾರ ಭದ್ರತೆಯನ್ನು ಖಾತರಿಸಬೇಕು. ವಿದ್ಯುತ್ ತಿದ್ದುಪಡಿ ಮಸೂದೆ-2022 ನ್ನು ಹಿಂದಕ್ಕೆ ಪಡೆಯಬೇಕು. ವಿದ್ಯುತ್ ಖಾಸಗೀಕರಣ ಮತ್ತು ಸ್ಮಾರ್ಟ್ ಮೀಟರ್ ಅಳವಡಿಕೆ ನಿಲ್ಲಿಸಬೇಕು, ಎಲ್ಲಾ ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಖಾತರಿಗೆ ಕಾನೂನು ರೂಪಿಸಬೇಕು, ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರ ಮತ್ತು ವಿದ್ಯುತ್ ಮೇಲಿನ ಸಬ್ಸಿಡಿ ಹೆಚ್ಚಿಸಬೇಕು. ಸಮಗ್ರ ಸಾಲ ಮನ್ನಾ ಮತ್ತು ಬೆಳೆ ವಿಮೆ ಯೋಜನೆಗಳನ್ನು ಜಾರಿಗೆ ತರಬೇಕು. ಉದ್ಯೋಗದ ಹಕ್ಕನ್ನು ಮೂಲಭೂತ ಹಕ್ಕಾಗಿಸಬೇಕು. ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ವಾರ್ಷಿಕ 200 ದಿನ ಕೆಲಸ, ದಿನಕ್ಕೆ 600 ರೂ. ಕೂಲಿ ನಿಗದಿಪಡಿಸಬೇಕು ಮತ್ತು ಇದನ್ನು ನಗರ ಪ್ರದೇಶಕ್ಕೂ ವಿಸ್ತರಿಸಬೇಕು. ಎಲ್ಲರಿಗೂ ಉಚಿತ ಶಿಕ್ಷಣದ ಹಕ್ಕು , ಆರೋಗ್ಯದ ಹಕ್ಕು, ನೀರು ಮತ್ತು ನೈರ್ಮಲ್ಯದ ಹಕ್ಕು ಹಾಗೂ ಎಲ್ಲರಿಗೂ ವಸತಿ ಖಾತರಿಪಡಿಸಬೇಕು, ನೂತನ ಶಿಕ್ಷಣ ನೀತಿ 2020ನ್ನು ರದ್ದುಪಡಿಸಬೇಕು. ಅರಣ್ಯ ಹಕ್ಕು ಕಾಯ್ದೆಯನ್ನು ಕಟ್ಟುನಿಟ್ಟಾಗಿ ಅನುಷ್ಟಾನ ಮಾಡಬೇಕು. ಅರಣ್ಯ ನಿವಾಸಿಗಳನ್ನು ತೆರವುಗೊಳಿಸಲು ಕೇಂದ್ರ ಸರ್ಕಾರಕ್ಕೆ ಅನುಮತಿ ನೀಡುವ ತಿದ್ದುಪಡಿಗಳನ್ನು ಹಿಂದಕ್ಕೆ ಪಡೆಯಬೇಕು. ಸಂವಿಧಾನದ ಆಶಯಗಳ ಮೇಲಿನ ದಾಳಿ ನಿಲ್ಲಿಸಬೇಕು. ದಿನದ ಕೆಲಸದ ಅವಧಿ 12 ಗಂಟೆಗೆÉ ವಿಸ್ತರಣೆ ಹಾಗೂ ರಾತ್ರಿ ಪಾಳಿಯಲ್ಲಿ ಮಹಿಳಾ ಕಾರ್ಮಿಕರ ದುಡಿಮೆಗೆ ಅವಕಾಶ ನೀಡಿ ಕಾರ್ಖಾನೆ ಕಾಯ್ದೆಗೆ ಮಾಡಿರುವ ತಿದ್ದುಪಡಿ ಹಾಗೂ ನಿಶ್ಚಿತ ಕಾಲಾವಧಿ ಕಾರ್ಮಿಕ ನೇಮಕಕ್ಕೆ ಅವಕಾಶ ನೀಡುವ ಮಾದರಿ ಸ್ಥಾಯಿ ಆದೇಶಗಳ ತಿದ್ದುಪಡಿಗಳನ್ನು ರಾಜ್ಯ ಸರ್ಕಾರ ಹಿಂದಕ್ಕೆ ಪಡೆಯಬೇಕು.
ರೈತರ ಒಪ್ಪಿಗೆ ಇಲ್ಲದೆ ಬಲವಂತದ ಭೂ ಸ್ವಾಧೀನ ಹಾಗೂ 3 ಕರಾಳ ಕೃಷಿ ಕಾಯ್ದೆ ತಿದ್ದುಪಡಿಗಳನ್ನು ರಾಜ್ಯ ಸರ್ಕಾರ ಹಿಂದಕ್ಕೆ ಪಡೆಯಬೇಕು. ಬೆಂಗಳೂರಿನಲ್ಲಿ ಪ್ರತಿಭಟನೆ ಮತ್ತು ಮೆರವಣಿಗೆಗೆ ಇರುವ ನಿರ್ಬಂಧವನ್ನು ಹಿಂಪಡೆಯಬೇಕು ಎನ್ನುವುದು ಸೇರಿದಂತೆ 22 ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆಯ ಸಂದರ್ಭ ಒತ್ತಾಯಿಸಲಾಗುವುದು ಎಂದು ಪಿ.ಆರ್.ಭರತ್ ಮಾಹಿತಿ ನೀಡಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಾನಡ್ಕ ಕುಟುಂಬದಿoದ 12ನೇ ವರ್ಷದ ಯುಗಾದಿ ಕ್ರೀಡಾಕೂಟದ ಸಂಭ್ರಮ : ಕ್ರೀಡೆಗಳಿಂದ ಹಬ್ಬದ ಮೆರುಗು ಇಮ್ಮಡಿ*

ಮಾರ್ಚ್ 22, 2026

*ಸಮೀರ್ ಗೆ “ರತ್ನ ಶ್ರೀ” ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ*

ಮಾರ್ಚ್ 22, 2026

*ಗ್ರಾಮಸ್ಥರಲ್ಲಿ ಭೀತಿ ಮೂಡಿಸಿದ್ದ ಕಾಡಾನೆ ಸೆರೆ*

ಮಾರ್ಚ್ 22, 2026

*ಸಮೀರ್ ಗೆ “ರತ್ನ ಶ್ರೀ” ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ*

ಮಾರ್ಚ್ 22, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.22 : ಕೂರ್ಗ್ ಬ್ಲಡ್ ಫೌಂಡೇಶನ್ ಕರ್ನಾಟಕ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಸಮೀರ್ ಎಂ. ಮಡಿಕೇರಿ…

*ಗ್ರಾಮಸ್ಥರಲ್ಲಿ ಭೀತಿ ಮೂಡಿಸಿದ್ದ ಕಾಡಾನೆ ಸೆರೆ*

ಮಾರ್ಚ್ 22, 2026

*ಹಾಕತ್ತೂರಿನ “ಯುವ ಸ್ಪಂದನ ಯೂತ್ ಫೌಂಡೇಶನ್” ಗೆ ನೂತನ ಪದಾಧಿಕಾರಿಗಳ ಆಯ್ಕೆ*

ಮಾರ್ಚ್ 22, 2026

*ಕಾಡಾನೆ ಮಾನವ ಸಂಘರ್ಷ ತಡೆಗೆ ಕೇಂದ್ರ ಸರಕಾರ ಏನು ಕ್ರಮ ಕೈಗೊಂಡಿದೆ*

ಮಾರ್ಚ್ 21, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಸಿಎನ್‌ಸಿ ವಿಚಾರಣ ಸಂಕಿರಣ : ಇನ್ನೊಬ್ಬರ ಹಕ್ಕನ್ನು ಕಸಿದುಕೊಳ್ಳಲು ಕೊಡವರು ತಮ್ಮ ಹಕ್ಕನ್ನು ಪ್ರತಿಪಾದಿಸುತ್ತಿಲ್ಲ : ಕೆ.ಪಿ.ಬಾಲಸುಬ್ರಹ್ಮಣ್ಯ ಅಭಿಮತ*

ಮಾರ್ಚ್ 21, 2026

*ಕಾರು ಮತ್ತು ಬೈಕ್ ಗಳ ನಡುವೆ ಡಿಕ್ಕಿ : ಇಬ್ಬರ ಸಾವು*

ಮಾರ್ಚ್ 21, 2026

*ವಿರಾಜಪೇಟೆ : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪ ತೆರೆ ಮಹೋತ್ಸವ*

ಮಾರ್ಚ್ 21, 2026

*ಕೂಡಿಗೆ : ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ : ಶಿಕ್ಷಕರ ಸೇವೆ ಅನನ್ಯ : ಎಸ್.ಎ.ಯೋಗೇಶ್*

ಮಾರ್ಚ್ 21, 2026

*ಭಾಗಮಂಡಲದಲ್ಲಿ ಜನಸ್ಪಂದನ ಸಭೆ : ಸಾರ್ವಜನಿಕರಿಂದ 85 ಅರ್ಜಿ ಸಲ್ಲಿಕೆ*

ಮಾರ್ಚ್ 21, 2026

*ಕಳೆದ ಮೂರು ವರ್ಷದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೊಡಗು ಜಿಲ್ಲೆಗೆ ಹೆಚ್ಚಿನ‌ ಪ್ರಾಧಾನ್ಯತೆ ನೀಡಿದೆ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.