
ಮಡಿಕೇರಿ ಜು.3 NEWS DESK : ಕರ್ನಾಟಕ ವಿಕಾಸ ರಂಗದ ಜಿಲ್ಲಾಧ್ಯಕ್ಷರಾಗಿ ಪಿ.ಎಸ್.ವೈಲೇಶ ನೇಮಕಗೊಂಡಿದ್ದಾರೆ. ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿಯ ಸಂವರ್ಧನೆಗಾಗಿ, ನೆಲ-ಜಲದ ರಕ್ಷಣೆಗಾಗಿ ಶ್ರಮಿಸುವ ಧ್ಯೇಯೋದ್ಧೇಶಗಳೊಂದಿಗೆ ಕರ್ನಾಟಕ “ವಿಕಾಸರಂಗ” ರಾಜ್ಯಮಟ್ಟದಲ್ಲಿ ಅಸ್ತಿತ್ವಕ್ಕೆ ಬಂದಿದ್ದು, ಕೊಡಗು ಜಿಲ್ಲಾಧ್ಯಕ್ಷರಾಗಿ ಪಿ.ಎಸ್.ವೈಲೇಶ ಅವರನ್ನು ನೇಮಕ ಮಾಡಲಾಗಿದೆಯೆಂದು ಕರ್ನಾಟಕ ವಿಕಾಸ ರಂಗದ ಸಂಸ್ಥಾಪಕರು ಮತ್ತು ರಾಜ್ಯಾಧ್ಯಕ್ಷರಾದ ವ.ಚ.ಚನ್ನೇಗೌಡರು ತಿಳಿಸಿದ್ದಾರೆ.









